ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯದ ಸುದ್ದಿ ಬೆನ್ನಲ್ಲೇ ಬಿಜೆಪಿ ಸಚಿವ ಪಿಯೂಷ್ ಗೋಯಲ್ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡ ಸಂಸದ ಶಶಿ ತರೂರ್

ಕಾಂಗ್ರೆಸ್ ಜೊತೆ ತಿರುವನಂತಪುರಂ ಸಂಸದ ಶಶಿ ತರೂರ್ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಕೇಂದ್ರ ಸಚಿವ ಪಿಯೂಷ್ ಗೋಯಲ್ ಜೊತೆಗಿನ ಸೆಲ್ಫೀಯನ್ನು ಹಂಚಿಕೊಂಡಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಫೋಟೋದಲ್ಲಿ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಜೊನಾಥನ್ ರೆನಾಲ್ಡ್ಸ್ ಕೂಡ ಕಾಣಿಸಿಕೊಂಡಿದ್ದರೂ, ಈ ಫೋಟೋ ಶಶಿ ತರೂರ್ ಕಾಂಗ್ರೆಸ್ ಜೊತೆಗಿನ ಸಂಬಂಧದ ಬಗ್ಗೆ ಹೆಚ್ಚಿನ ಚರ್ಚೆಗೆ ಕಾರಣವಾಯಿತು.

ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯದ ಸುದ್ದಿ ಬೆನ್ನಲ್ಲೇ ಬಿಜೆಪಿ ಸಚಿವ ಪಿಯೂಷ್ ಗೋಯಲ್ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡ ಸಂಸದ ಶಶಿ ತರೂರ್
Shashi Tharoor Selfie

Updated on: Feb 25, 2025 | 3:50 PM

ನವದೆಹಲಿ: ಕೇರಳದ ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಇತ್ತೀಚೆಗೆ ಕೇರಳ ರಾಜ್ಯದ ಕಾಂಗ್ರೆಸ್‌ನಲ್ಲಿ ನಾಯಕತ್ವದ ತೊಂದರೆಯಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ನನಗೆ ಜವಾಬ್ದಾರಿಯನ್ನು ನೀಡಿದರೆ ಮಾತ್ರ ನಾನು ಕೂಡ ಪಕ್ಷದ ಪಾಲಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ಇಲ್ಲದಿದ್ದರೆ, ನನಗೆ ಬೇರೆ ಆಯ್ಕೆಗಳಿವೆ ಎಂದಿದ್ದಾರೆ. ಇದರಿಂದಾಗಿ ಶಶಿ ತರೂರ್ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲು ಪ್ಲಾನ್ ಮಾಡುತ್ತಿದ್ದಾರಾ? ಎಂಬ ಚರ್ಚೆಗಳು ಹರಿದಾಡಿತ್ತು. ಶಶಿ ತರೂರ್ ಅವರ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜಕೀಯ ಚರ್ಚೆಗೆ ನಾಂದಿ ಹಾಡಿತ್ತು.

ಕಾಂಗ್ರೆಸ್ ಪಕ್ಷದೊಂದಿಗೆ ಬಿರುಕು ಉಂಟಾಗಿದೆ ಎಂಬ ಗುಸುಗುಸು ನಡುವೆ ತಿರುವನಂತಪುರದ ಸಂಸದ ಶಶಿ ತರೂರ್ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಹಂಚಿಕೊಂಡ ಕಾಂಗ್ರೆಸ್ ನಾಯಕ ಶಶಿ ತರೂರ್ “ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ, ಬ್ರಿಟನ್‌ನ ವ್ಯವಹಾರ ಮತ್ತು ವ್ಯಾಪಾರದ ರಾಜ್ಯ ಕಾರ್ಯದರ್ಶಿ ಜೊನಾಥನ್ ರೆನಾಲ್ಡ್ಸ್ ಅವರೊಂದಿಗೆ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವುದು ಒಳ್ಳೆಯದು. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ FTA ಮಾತುಕತೆಗಳನ್ನು ಪುನರುಜ್ಜೀವನಗೊಳಿಸಲಾಗಿದೆ, ಇದು ಅತ್ಯಂತ ಸ್ವಾಗತಾರ್ಹ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘನೆ

ಟ್ವೀಟ್ ಮಾಡಿದ ಸ್ವಲ್ಪ ಸಮಯದ ನಂತರ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಭೂಕುಸಿತದ ಪರಿಹಾರವನ್ನು ಸಾಲದಿಂದ ಅನುದಾನವಾಗಿ ಪರಿವರ್ತಿಸಬೇಕು. ಅದನ್ನು ಖರ್ಚು ಮಾಡಲು ಗಡುವನ್ನು ವಿಸ್ತರಿಸಬೇಕು ಎಂಬ ಕೇಂದ್ರ ಸರ್ಕಾರದ ಬೇಡಿಕೆಯನ್ನು ಬೆಂಬಲಿಸಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ.


ಎಲ್‌ಡಿಎಫ್ ಸರ್ಕಾರದ ಅಡಿಯಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಹೊಗಳಿದ ಶಶಿ ತರೂರ್ ಅವರ ಇತ್ತೀಚಿನ ಲೇಖನವು ಕೇರಳದಲ್ಲಿ ಪಕ್ಷದೊಳಗೆ ಅಶಾಂತಿಯನ್ನು ಸೃಷ್ಟಿಸಿತ್ತು.

ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ತಮ್ಮ ಲೇಖನದ ಬಗ್ಗೆ ಕೇರಳದಲ್ಲಿ ಕಾಂಗ್ರೆಸ್ ನಾಯಕರಿಂದ ನಿರಂತರ ಟೀಕೆಗಳ ಬಗ್ಗೆ ಕೇಳಿದಾಗ, “ರಾಜ್ಯದ ಯಾವುದೇ ನಾಯಕರೊಂದಿಗೆ ನನಗೆ ಯಾವುದೇ ಸಮಸ್ಯೆಗಳಿಲ್ಲ. ಅವರಿಗೆ ಸಮಸ್ಯೆಗಳಿದ್ದರೆ ಅದು ಬಗೆಹರಿಯುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅವರೇ ನಿರ್ಧರಿಸಲಿ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ