ಬಂಗಾಳ ಉಪಚುನಾವಣೆಯಲ್ಲಿ ಟಿಎಂಸಿಯಿಂದ ಸ್ಪರ್ಧಿಸಲಿದ್ದಾರೆ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ

ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್‌ನಿಂದ ಲೋಕಸಭೆಯ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗುತ್ತಾರೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪರವಾಗಿ ಘೋಷಿಸಲು ಸಂತೋಷವಾಗಿದೆ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.

ಬಂಗಾಳ ಉಪಚುನಾವಣೆಯಲ್ಲಿ ಟಿಎಂಸಿಯಿಂದ ಸ್ಪರ್ಧಿಸಲಿದ್ದಾರೆ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ
ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 13, 2022 | 1:47 PM

ಕೊಲ್ಕತ್ತಾ: ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ (Shatrughan Sinha) ಮತ್ತು ಬಾಬುಲ್ ಸುಪ್ರಿಯೋ (Babul Supriyo) ಅವರು ಬಂಗಾಳದ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಭಾನುವಾರ ಹೇಳಿದ್ದಾರೆ. 76 ವರ್ಷದ ಸಿನ್ಹಾ ಅವರು ಅಸನ್ಸೋಲ್‌ನಿಂದ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದರೆ, 51 ವರ್ಷದ ಸುಪ್ರಿಯೊ ಅವರು ಬಾಲಿಗಂಜ್ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.  “ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್‌ನಿಂದ ಲೋಕಸಭೆಯ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗುತ್ತಾರೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪರವಾಗಿ ಘೋಷಿಸಲು ಸಂತೋಷವಾಗಿದೆ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.  ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ಗಾಯಕ ಬಾಬುಲ್ ಸುಪ್ರಿಯೋ ಅವರು ಬಾಲಿಗಂಜ್ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗಲಿದ್ದಾರೆ. ಜೈ ಹಿಂದ್, ಜೈ ಬಾಂಗ್ಲಾ, ಜೈ ಮಾ-ಮಾಟಿ-ಮನುಷ್ ಎಂದು ಮತ್ತೊಂದು ಟ್ವೀಟ್​​ನಲ್ಲಿ ಮಮತಾ ಬರೆದಿದ್ದಾರೆ.  ತೃಣಮೂಲ ಕಾಂಗ್ರೆಸ್ ರಾಜ್ಯ ಚುನಾವಣೆಗಳನ್ನು ಗೆದ್ದ ತಿಂಗಳ ನಂತ ಬಾಬುಲ್ ಸುಪ್ರಿಯೋ ಕಳೆದ ವರ್ಷ ಬಿಜೆಪಿಯನ್ನು ತೊರೆದು ಟಿಎಂಸಿ ಸೇರಿದ್ದರು. ನಂತರ, ಅವರು ಅಸನ್ಸೋಲ್ ಲೋಕಸಭಾ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. “ನಾನು ಈಗ ನಾನು ಗೆದ್ದಿರುವುದು ಬಿಜೆಪಿಯಭಾಗವಾಗಿರುವುದರಿಂದ ಸಂಸದರ ಸ್ಥಾನ/ಸವಲತ್ತು/ಸಂಬಳವನ್ನು ನಾನು ಇಟ್ಟುಕೊಳ್ಳುವುದಿಲ್ಲ. ಅದು ನನ್ನಲ್ಲಿ ಇದ್ದರೆ, ಅದನ್ನು ಮತ್ತೆ ಗೆಲ್ಲುತ್ತೇನೆ ಎಂದು ಅವರು ಆಗ ಟ್ವೀಟ್ ಮಾಡಿದ್ದರು.

ಬಿಜೆಪಿಯಲ್ಲಿದ್ದ ಸಿನ್ಹಾ ಅವರು 2019 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ಗೆ ಸೇರಿದ್ದರು. ಆದರೆ, ಅವರು ಬಿಹಾರದ ಪಾಟ್ನಾ ಸಾಹಿಬ್‌ನಿಂದ ಬಿಜೆಪಿಯ ರವಿಶಂಕರ್ ಪ್ರಸಾದ್ ಎದುರು ಸೋತಿದ್ದರು. 2024 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ, ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರೋಧಿ ವೇದಿಕೆ ರೂಪಿಸುವ ಪ್ರತಿಸ್ಪರ್ಧಿಗಳ ಪ್ರಯತ್ನಗಳ ನಡುವೆ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆ.

ಭಾನುವಾರದಂದು ಅವರು ಭವಿಷ್ಯ ನಿಧಿ ದರ ಕಡಿತದ ಕ್ರಮದ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ಜನವಿರೋಧಿ, ಕಾರ್ಮಿಕ-ವಿರೋಧಿ ಹೆಜ್ಜೆಯು ರೈತರು, ಕಾರ್ಮಿಕರು ಮತ್ತು ಮಧ್ಯಮ ವರ್ಗಗಳ ವೆಚ್ಚದಲ್ಲಿ ದೊಡ್ಡ ಬಂಡವಾಳದ ಹಿತಾಸಕ್ತಿಗಳನ್ನು ಪ್ರತಿಪಾದಿಸುವ ಪ್ರಸ್ತುತ ಕೇಂದ್ರ ಸ್ಥಾಪನೆಯ ಕ್ರೂರವಾಗಿ ಸೋತ ಸಾರ್ವಜನಿಕ ನೀತಿಗಳನ್ನು ಬಹಿರಂಗಪಡಿಸುತ್ತದೆ. ಕಪ್ಪು ಉಪಕ್ರಮವನ್ನು ಒಗ್ಗಟ್ಟಿನ ಪ್ರತಿಭಟನೆಗಳಿಂದ ತಡೆಯಬೇಕು” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಿಲಿಟರಿ ಸನ್ನದ್ಧತೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ; ಪ್ರಮುಖ ವಿಷಯಗಳ ಚರ್ಚೆ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ