ಆಕೆ ನಮ್ಮ ಪಾಲಿಗೆ ಸತ್ತಿದ್ದಾಳೆ, ಪಾಕಿಸ್ತಾನಿ ಸ್ನೇಹಿತನ ಜತೆ ವಿವಾಹಿತ ಮಗಳು ಮದುವೆಯಾಗಿದ್ದಕ್ಕೆ ತಂದೆಯ ಬೇಸರದ ನುಡಿ

ಫೇಸ್​ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ದೂರದ ಹಳ್ಳಿಗೆ ತೆರಳಿದ್ದ ಭಾರತೀಯ ಮಹಿಳೆ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಆತನನ್ನೇ ಮದುವೆಯಾಗಿದ್ದು ಆಕೆಯ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.

ಆಕೆ ನಮ್ಮ ಪಾಲಿಗೆ ಸತ್ತಿದ್ದಾಳೆ, ಪಾಕಿಸ್ತಾನಿ ಸ್ನೇಹಿತನ ಜತೆ ವಿವಾಹಿತ ಮಗಳು ಮದುವೆಯಾಗಿದ್ದಕ್ಕೆ ತಂದೆಯ ಬೇಸರದ ನುಡಿ
ಅಂಜುImage Credit source: India Today
Follow us
ನಯನಾ ರಾಜೀವ್
|

Updated on: Jul 26, 2023 | 8:50 AM

ಫೇಸ್​ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನ(Pakistan)ದ ದೂರದ ಹಳ್ಳಿಗೆ ತೆರಳಿದ್ದ ಭಾರತೀಯ ಮಹಿಳೆ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಆತನನ್ನೇ ಮದುವೆಯಾಗಿರುವ ಕುರಿತು ಆಕೆಯ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಆಕೆ ನಮ್ಮ ಪಾಲಿಗೆ ಸತ್ತಂತೆ ಎಂದು ಬೇಸರದ ನುಡಿಗಳನ್ನಾಡಿದ್ದಾರೆ. ಸ್ನೇಹಿತನನ್ನು ಭೇಟಿಯಾಗಲು ತೆರಳಿದ್ದ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಹೆಸರನ್ನು ಫಾತಿಮಾ ಎಂದು ಬದಲಿಸಿಕೊಂಡಿದ್ದಾರೆ.

ಅಂಜು ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿದ್ದು, ಈಗ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಆಕೆ 29 ವರ್ಷದ ಪಾಕಿಸ್ತಾನಿ ಸ್ನೇಹಿತ ನಸ್ರುಲ್ಲಾನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಗೆ ತೆರಳಿದ್ದಾರೆ.

2019 ರಲ್ಲಿ ಇಬ್ಬರೂ ಫೇಸ್‌ಬುಕ್‌ನಲ್ಲಿ ಭೇಟಿಯಾಗಿದ್ದರು, ಈಗ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯದಲ್ಲಿ ಮದುವೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Facebook boyfriend: ಪಾಕಿಸ್ತಾನದ ಪ್ರಿಯತಮನ ಹಂಬಲಿಸಿ, ಭಾರತದ ಗಡಿ ದಾಟಿದ ರಾಜಸ್ತಾನದ ವಿವಾಹಿತ ಮಹಿಳೆ: ಅದು ಫೇಸ್​​​ಬುಕ್ ಪರಿಚಯ!

ನಸ್ರುಲ್ಲಾ ಅವರ ಕುಟುಂಬ ಸದಸ್ಯರು, ಪೊಲೀಸ್ ಸಿಬ್ಬಂದಿ ಮತ್ತು ವಕೀಲರ ಸಮ್ಮುಖದಲ್ಲಿ ಅಪ್ಪರ್ ದಿರ್‌ನ ನ್ಯಾಯಾಲಯದಲ್ಲಿ ಇಬ್ಬರೂ ಮದುವೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಪೊಲೀಸ್ ಭದ್ರತೆಯಲ್ಲಿ ಮನೆಗೆ ಕರೆದೊಯ್ಯಲಾಯಿತು. ಅಂಜುಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ