AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ, ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ

ಇತ್ತೀಚಿನ ದಿನಗಳಲ್ಲಿ ದೇಶದ ಸಾಕಷ್ಟು ಕಡೆಗಳಲ್ಲಿ ವರದಕ್ಷಿಣೆ(Dowry) ಕಿರುಕುಳದ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಲವು ವರ್ಷಗಳ ಹಿಂದೆ ಬಡ ಕುಟುಂಬದಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗಿ ವರದಕ್ಷಿಣೆಗಾಗಿ ಪೀಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದವು. ಆದರೆ ಈಗೆಲ್ಲಾ ಮಗಳಿಗೆ ಮೈತುಂಬಾ ಒಡವೆಗಳನ್ನು ಹಾಕಿ, ಅಳಿಯನಿಗೆ ಕಾರು, ಬೈಕ್, ಚಿನ್ನವೆಲ್ಲಾ ಕೊಟ್ಟು ಲಕ್ಷ ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟರೂ ಈ ವರದಕ್ಷಿಣೆ ಪಿಡುಗಿನಿಂದ ಮುಕ್ತಿ ಪಡೆಯಲು ಸಾಧ್ಯವಾಗುತ್ತಿಲ್ಲ.

ವರದಕ್ಷಿಣೆ ಕಿರುಕುಳ, ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ
ಮಹಿಳೆ Image Credit source: India Today
ನಯನಾ ರಾಜೀವ್
|

Updated on: Aug 29, 2025 | 10:30 AM

Share

ಅಮ್ರೋಹಾ, ಆಗಸ್ಟ್​ 29: ಇತ್ತೀಚಿನ ದಿನಗಳಲ್ಲಿ ದೇಶದ ಸಾಕಷ್ಟು ಕಡೆಗಳಲ್ಲಿ ವರದಕ್ಷಿಣೆ(Dowry) ಕಿರುಕುಳದ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಲವು ವರ್ಷಗಳ ಹಿಂದೆ ಬಡ ಕುಟುಂಬದಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗಿ ವರದಕ್ಷಿಣೆಗಾಗಿ ಪೀಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದವು. ಆದರೆ ಈಗೆಲ್ಲಾ ಮಗಳಿಗೆ ಮೈತುಂಬಾ ಒಡವೆಗಳನ್ನು ಹಾಕಿ, ಅಳಿಯನಿಗೆ ಕಾರು, ಬೈಕ್, ಚಿನ್ನವೆಲ್ಲಾ ಕೊಟ್ಟು ಲಕ್ಷ ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟರೂ ಈ ವರದಕ್ಷಿಣೆ ಪಿಡುಗಿನಿಂದ ಮುಕ್ತಿ ಪಡೆಯಲು ಸಾಧ್ಯವಾಗುತ್ತಿಲ್ಲ.

ಉತ್ತರ ಪ್ರದೇಶದ ಅಮ್ರೋಹಾದಲ್ಲಿ ವರದಕ್ಷಿಣೆ ಕಿರುಕುಳದ ಘಟನೆ ಬೆಳಕಿಗೆ ಬಂದಿದೆ. ಅತ್ತೆ -ಮಾವ ಸೊಸೆಗೆ ಆ್ಯಸಿಡ್ ಕುಡಿಸಿರುವ ಘಟನೆ ವರದಿಯಾಗಿದ್ದು, 17 ದಿನಗಳ ಬಳಿಕ ಆಕೆ ಸಾವನ್ನಪ್ಪಿದ್ದಾಳೆ.ಗುಲ್ ಫಿಜಾ ಎಂದು ಗುರುತಿಸಲಾದ ಮಹಿಳೆ ಮೊರಾದಾಬಾದ್‌ನ ಆಸ್ಪತ್ರೆಯಲ್ಲಿ 17 ದಿನಗಳ ಕಾಲ ಹೋರಾಡಿದ ನಂತರ ಮೃತಪಟ್ಟಿದ್ದಾಳೆ.

ಮತ್ತಷ್ಟು ಓದಿ: ನೊಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ; ನಿಕ್ಕಿಯನ್ನು ಸುಟ್ಟು ಕೊಲ್ಲಲು 1 ತಿಂಗಳಿಂದ ರೆಡಿಯಾಗಿತ್ತು ಪ್ಲಾನ್!

ಗುಲ್ ಫಿಜಾಳ ತಂದೆ ಫುರ್ಖಾನ್, ತಮ್ಮ ಮಗಳು ಗುಲ್ ಫಿಜಾಳನ್ನು ಸುಮಾರು ಒಂದು ವರ್ಷದ ಹಿಂದೆ ಅಮ್ರೋಹಾದ ಕಲಾ ಖೇಡಾ ಗ್ರಾಮದ ಪರ್ವೇಜ್ ಜೊತೆ ವಿವಾಹವಾಗಿದ್ದರು ಎಂದು ತಿಳಿಸಿದ್ದಾರೆ.ಮದುವೆಯಾದಾಗಿನಿಂದಲೂ ತನ್ನ ಮಗಳಿಗೆ ಆಕೆಯ ಪತಿ, ಅತ್ತೆ, ಮಾವ ಮತ್ತು ಇತರ ಕುಟುಂಬ ಸದಸ್ಯರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಫುರ್ಖಾನ್ ಆರೋಪಿಸಿದ್ದಾರೆ. ಆಗಸ್ಟ್ 11 ರಂದು, ಗುಲ್ ಫಿಜಾಳ ಅತ್ತೆ ಮಾವ ಆಕೆಗೆ ಆ್ಯಸಿಡ್ ಕುಡಿಯುವಂತೆ ಒತ್ತಾಯಿಸಿದಾಗ ಕಿರುಕುಳ ಹಿಂಸಾತ್ಮಕ ರೂಪ ತಾಳಿತ್ತು.

ಆಕೆಯನ್ನು ಮೊರಾದಾಬಾದ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆ 17 ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದಳು. ವೈದ್ಯರ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಯ ಸಮಯದಲ್ಲಿ ಆಕೆ ಸಾವನ್ನಪ್ಪಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆಯನ್ನು ಮೊರಾದಾಬಾದ್‌ನಲ್ಲಿಯೂ ನಡೆಸಲಾಯಿತು.

ಇದಕ್ಕೂ ಮೊದಲು, ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ, ಪತಿ ಪರ್ವೇಜ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಮತ್ತು ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಗುಲ್ ಫಿಜಾ ಸಾವಿನೊಂದಿಗೆ, ಆರೋಪಿಗಳ ವಿರುದ್ಧ ಕೊಲೆ ಆರೋಪಗಳನ್ನು ಸೇರಿಸುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರ ಆರೋಪಿಗಳ ವಿರುದ್ಧ ಕೊಲೆ ಆರೋಪಗಳನ್ನು ಸೇರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪೊಲೀಸರು ಕಾನೂನು ಕ್ರಮಗಳನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ