ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ "ಚಾರ್ಜ್‌ಶೀಟ್" ಬಿಡುಗಡೆ ಮಾಡುವ ಮೂಲಕ ತೀವ್ರ ವಾಗ್ದಾಳಿ ನಡೆಸಿದರು. ಬಂಗಾಳದಲ್ಲಿ ಮುಂಬರುವ ಚುನಾವಣೆಗಳು ರಾಜ್ಯಕ್ಕೆ ಮಾತ್ರವಲ್ಲದೆ ದೇಶದ ಭದ್ರತೆಗೂ ಒಂದು ಸವಾಲಾಗಿದೆ ಎಂದು ಅವರು ಹೇಳಿದರು. ನುಸುಳುಕೋರರಿಗೆ ಭಾರತವನ್ನು ಸುಲಭವಾಗಿ ಪ್ರವೇಶಿಸಲು ಅವಕಾಶ ನೀಡಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದರು. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಇಂದು ಚುನಾವಣಾ ಪ್ರಚಾರ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ
Amit Shah
Image Credit source: PTI

Updated on: Mar 28, 2026 | 9:40 PM

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ (West Bengal Elections)  ಮುನ್ನ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಆಡಳಿತ ಪಕ್ಷದ ವಿರುದ್ಧ “ಚಾರ್ಜ್‌ಶೀಟ್” ಬಿಡುಗಡೆ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತಾ, ಅನುಕಂಪದ ಅಲೆ ಗಿಟ್ಟಿಸಿಕೊಳ್ಳುತ್ತಾ ಮಮತಾ ಬ್ಯಾನರ್ಜಿ ಜನರಲ್ಲಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ತಮ್ಮ ರಾಜಕೀಯ ಕಾರ್ಯಸೂಚಿಗಾಗಿ ಸುಳ್ಳು, ಬೆದರಿಕೆ ಮತ್ತು ಹಿಂಸಾಚಾರವನ್ನು ಅವಲಂಬಿಸಿದ್ದಾರೆ. ಗಡಿ ರಾಜ್ಯ ಬಂಗಾಳವು ದೇಶದ ಭದ್ರತೆಗೆ ಮುಖ್ಯವಾಗಿದೆ. ಏಕೆಂದರೆ ಒಳನುಸುಳುವವರು ದೇಶದ ಭದ್ರತೆಗೆ ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ

“ಮಮತಾ ಬ್ಯಾನರ್ಜಿ ನಿರಂತರವಾಗಿ ‘ವಿಕ್ಟಿಮ್ ಕಾರ್ಡ್’ ಬಳಸುತ್ತಿದ್ದಾರೆ. ಕೆಲವೊಮ್ಮೆ ಅವರ ಕಾಲು ಮುರಿಯುತ್ತದೆ ಅಥವಾ ತಲೆಗೆ ಬ್ಯಾಂಡೇಜ್ ಹಾಕಿಕೊಳ್ಳುತ್ತಾರೆ ಅಥವಾ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇತರ ಸಮಯಗಳಲ್ಲಿ, ಅವರು ಚುನಾವಣಾ ಆಯೋಗದ ಮುಂದೆ ಗೂಬೆ ಕೂರಿಸುತ್ತಾರೆ. ಬಂಗಾಳದ ಜನರು ನಿಮ್ಮ ರಾಜಕೀಯ ಬ್ರ್ಯಾಂಡ್ ಅನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಮಮತಾ ಬ್ಯಾನರ್ಜಿಯವರಿಗೆ ನಾನು ಹೇಳಲು ಇಲ್ಲಿಗೆ ಬಂದಿದ್ದೇನೆ” ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ

ಒಳನುಸುಳುವವರು ಭಾರತದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಬಡ ಕಾರ್ಮಿಕರ ವೇತನ ಮತ್ತು ಯುವಕರ ಉದ್ಯೋಗಾವಕಾಶಗಳನ್ನು ಸಹ ಕಸಿದುಕೊಳ್ಳುತ್ತಿದ್ದಾರೆ. ಅಸ್ಸಾಂನಿಂದ ದೇಶದೊಳಗೆ ಒಳನುಸುಳುವಿಕೆಯನ್ನು ಬಿಜೆಪಿ ಬಹುತೇಕ ನಿಲ್ಲಿಸಿದೆ. ಆದ್ದರಿಂದ, ಬಂಗಾಳ ಚುನಾವಣೆಯು ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಅದರಲ್ಲೂ ವಿಶೇಷವಾಗಿ ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಮಹತ್ವದ್ದಾಗಿದೆ. ಟಿಎಂಸಿ ಒಳನುಸುಳುವಿಕೆಯ ರಾಜಕೀಯದಿಂದಾಗಿ ಸಿಲಿಗುರಿ ಕಾರಿಡಾರ್‌ನ ಭದ್ರತೆಯು ತೀವ್ರವಾಗಿ ಸಮಸ್ಯೆಯಾಗಿ ಪರಿಣಮಿಸಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us