ಶೇಖ್ ಹಸೀನಾ ಹಸ್ತಾಂತರ ಕೋರಿ ಭಾರತಕ್ಕೆ ಬಾಂಗ್ಲಾದೇಶದಿಂದ ಪತ್ರ ರವಾನೆ

|

Updated on: Dec 23, 2024 | 7:40 PM

ಭಾರತಕ್ಕೆ ಕಳುಹಿಸಿದ ರಾಜತಾಂತ್ರಿಕ ಪತ್ರದಲ್ಲಿ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಮರಳಿ ತಮ್ಮ ದೇಶಕ್ಕೆ ಕಳುಹಿಸುವಂತೆ ಕೋರಿದೆ. ಈ ಹಿಂದೆ, ಗೃಹ ಸಲಹೆಗಾರ ಜಹಾಂಗೀರ್ ಆಲಂ ಅವರು ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರಕ್ಕೆ ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದರು.

ಶೇಖ್ ಹಸೀನಾ ಹಸ್ತಾಂತರ ಕೋರಿ ಭಾರತಕ್ಕೆ ಬಾಂಗ್ಲಾದೇಶದಿಂದ ಪತ್ರ ರವಾನೆ
Sheikh Hasina (3)
Follow us on

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಕ್ಕೆ ವಾಪಾಸ್ ಕಳುಹಿಸಲು ರಾಜತಾಂತ್ರಿಕ ಟಿಪ್ಪಣಿಯನ್ನು ಭಾರತಕ್ಕೆ ಕಳುಹಿಸಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಥವಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, ಬಾಂಗ್ಲಾದೇಶವು ಮಾಜಿ ಪ್ರಧಾನಿಯನ್ನು ನ್ಯಾಯಾಂಗ ಪ್ರಕ್ರಿಯೆಗೆ ಹಿಂತಿರುಗಿಸಲು ಬಯಸುತ್ತದೆ ಎಂದು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿಯನ್ನು ಕಳುಹಿಸಿದೆ ಎಂದು ಹೇಳಿದರು.

ಈ ವರ್ಷದ ಆರಂಭದಲ್ಲಿ ಆಗಸ್ಟ್‌ನಲ್ಲಿ ಅಧಿಕಾರದಿಂದ ಕೆಳಗಿಳಿದ ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪರಾರಿಯಾಗಿ ಭಾರತದಲ್ಲಿ ಆಶ್ರಯ ಪಡೆದಿದ್ದರು. ಭಾರತ ದೇಶದಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ ಶೇಖ್ ಹಸೀನಾ ಬಾಂಗ್ಲಾದೇಶವನ್ನು ತೊರೆಯಬೇಕಾಯಿತು. ಢಾಕಾ ಮೂಲದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಶೇಖ್ ಹಸೀನಾ ಮತ್ತು ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು, ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ ಬಂಧನ ವಾರಂಟ್‌ಗಳನ್ನು ಹೊರಡಿಸಿದೆ.

ಇದನ್ನೂ ಓದಿ: ‘ಬಾಂಗ್ಲಾದಲ್ಲಿರುವ ಹಿಂದೂಗಳಿಗಾಗಿ ಏನಾದರೂ ಮಾಡಿ’; ಪ್ಯಾಲೆಸ್ತೀನ್ ಬ್ಯಾಗ್ ವಿವಾದದ ನಂತರ ಪ್ರಿಯಾಂಕಾ ಗಾಂಧಿ ಮೊದಲ ಪ್ರತಿಕ್ರಿಯೆ

ಬಾಂಗ್ಲಾದೇಶ ಮತ್ತು ಭಾರತದ ನಡುವೆ ಹಸ್ತಾಂತರ ಒಪ್ಪಂದವು ಈಗಾಗಲೇ ಅಸ್ತಿತ್ವದಲ್ಲಿದೆ. ಒಪ್ಪಂದದ ಅಡಿಯಲ್ಲಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಮರಳಿ ತರಬಹುದು ಎಂದು ಬಾಂಗ್ಲಾದ ಅಧಿಕಾರಿಗಳು ಹೇಳಿದ್ದಾರೆ.

ಕಳೆದ ತಿಂಗಳು, ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಭಾರತವನ್ನು ಕೋರುವುದಾಗಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ