AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಬಾಂಗ್ಲಾದೇಶಕ್ಕೆ ಹಿಂತಿರುಗಲು ಹಸೀನಾ ಪ್ಲ್ಯಾನ್, ದಿನಾಂಕವೂ ಫಿಕ್ಸ್

ಶೇಖ್ ಹಸೀನಾ ಭಾರತದಿಂದ ಬಾಂಗ್ಲಾದೇಶಕ್ಕೆ ಡಿ. 16ರಂದು ವಾಪಸಾಗಲು ನಿರ್ಧರಿಸಿದ್ದಾರೆ. 2024ರ ಪ್ರತಿಭಟನೆಗಳ ನಂತರ ರಾಜೀನಾಮೆ ನೀಡಿ ಭಾರತದಲ್ಲಿ ಆಶ್ರಯ ಪಡೆದಿದ್ದ ಅವರು, ತಮ್ಮ ವಾಪಸಾತಿಗೆ ವಿಮಾನ ವ್ಯವಸ್ಥೆ ಮಾಡುವಂತೆ ಬಾಂಗ್ಲಾ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ, ಬಾಂಗ್ಲಾದೇಶ ಸರ್ಕಾರ ಅವರ ವಾಪಸಾತಿಗೆ ವಿರೋಧ ವ್ಯಕ್ತಪಡಿಸಿದ್ದು, ಬಂಧಿಸುವ ಮತ್ತು ಮರಣದಂಡನೆ ಶಿಕ್ಷೆ ಜಾರಿಗೊಳಿಸುವ ಎಚ್ಚರಿಕೆ ನೀಡಿದೆ. ಇದು ಬಾಂಗ್ಲಾದೇಶದ ರಾಜಕೀಯ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ.

ಭಾರತದಿಂದ ಬಾಂಗ್ಲಾದೇಶಕ್ಕೆ ಹಿಂತಿರುಗಲು ಹಸೀನಾ ಪ್ಲ್ಯಾನ್, ದಿನಾಂಕವೂ ಫಿಕ್ಸ್
ಶೇಖ್ ಹಸೀನಾ Image Credit source: Getty Images
ನಯನಾ ರಾಜೀವ್
|

Updated on: Nov 24, 2026 | 9:25 AM

Share

ನವದೆಹಲಿ, ನವೆಂಬರ್ 24: ಬಾಂಗ್ಲಾದೇಶದ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಭಾರತದಲ್ಲಿ ಆಶ್ರಯ ಪಡೆದ ಸುಮಾರು ಎರಡು ವರ್ಷಗಳ ಬಳಿಕ ಮತ್ತೆ ಸ್ವದೇಶಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 16ರಂದು ಬಾಂಗ್ಲಾದೇಶಕ್ಕೆ ವಾಪಸಾಗಲು ನಿರ್ಧರಿಸಿರುವುದಾಗಿ ಅವರ ವಕ್ತಾರರು ತಿಳಿಸಿದ್ದಾರೆ. ಈ ಕುರಿತು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಡಿಸೆಂಬರ್ 16 ಬಾಂಗ್ಲಾದೇಶದ ಇತಿಹಾಸದಲ್ಲಿ ಮಹತ್ವದ ದಿನ. 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ವಿಮೋಚನಾ ಯುದ್ಧದಲ್ಲಿ ಬಾಂಗ್ಲಾದೇಶ ಸ್ವಾತಂತ್ರ್ಯ ಗಳಿಸಿದ ದಿನದ ನೆನಪಿಗಾಗಿ ಈ ದಿನವನ್ನು ವಿಜಯ ದಿನವನ್ನಾಗಿ ಆಚರಿಸಲಾಗುತ್ತದೆ. ಇದೇ ದಿನ ಸ್ವದೇಶಕ್ಕೆ ಮರಳುವ ಮೂಲಕ ರಾಜಕೀಯವಾಗಿ ಮಹತ್ವದ ಸಂದೇಶ ನೀಡಲು ಹಸೀನಾ ಬಯಸಿದ್ದಾರೆ ಎನ್ನಲಾಗಿದೆ.

ಭಾರತದಿಂದಲೇ ವಿಮಾನದ ವ್ಯವಸ್ಥೆಗೆ ಮನವಿ

2024ರ ಆಗಸ್ಟ್ 5ರಂದು ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಭಾರೀ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಆಗಿನ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದರು.

ಈಗ ಭಾರತದಿಂದ ಢಾಕಾಗೆ ಮರಳಲು ವಿಮಾನದ ವ್ಯವಸ್ಥೆ ಮಾಡುವಂತೆ ಬಾಂಗ್ಲಾದೇಶ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಬಿಮನ್ ಬಾಂಗ್ಲಾದೇಶ ಏರ್‌ಲೈನ್ಸ್‌ನಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಬೇಕು ಎಂಬುದು ಅವರ ಬೇಡಿಕೆಯಾಗಿದೆ ಎಂದು ಅವರ ವಕ್ತಾರ ಸೈಯದ್ ಮೊಜಮ್ಮೆಲ್ ಅಲಿ ತಿಳಿಸಿದ್ದಾರೆ.

ಈವರೆಗೆ ಹಸೀನಾ ತಮ್ಮ ವಾಪಸಾತಿಗೆ ನಿರ್ದಿಷ್ಟ ದಿನಾಂಕವನ್ನು ಘೋಷಿಸಿರುವುದು ಇದೇ ಮೊದಲು ಎಂದು ವರದಿಯಾಗಿದೆ. ಆದರೆ ಅವರು ಮರಳಲು ಬಾಂಗ್ಲಾದೇಶ ಸರ್ಕಾರದಿಂದ ಅನುಮತಿ ಅಥವಾ ವಿಮಾನದ ವ್ಯವಸ್ಥೆ ದೊರೆತಿರುವುದು ದೃಢಪಟ್ಟಿಲ್ಲ.

ಇದನ್ನೂ ಓದಿ:

ಸೇನಾ ವಿಮಾನ, ಹೊಸ ವಿಚಾರಣೆ; ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶಕ್ಕೆ ಭಾರತ ವಿಧಿಸಿದ ಷರತ್ತುಗಳಿವು!

ಬಾಂಗ್ಲಾದೇಶ ಸರ್ಕಾರದ ನಿಲುವೇನು? ಹಸೀನಾ ಮರಳುವ ವಿಚಾರಕ್ಕೆ ಬಾಂಗ್ಲಾದೇಶ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಅವರು ದೇಶಕ್ಕೆ ವಾಪಸಾದರೆ ಬಂಧಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಬಾಂಗ್ಲಾದೇಶದ ಸಚಿವರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಹಸೀನಾ ಅವರನ್ನು ಭಾರತದಿಂದ ಹಸ್ತಾಂತರಿಸುವಂತೆ ಬಾಂಗ್ಲಾದೇಶ ಸರ್ಕಾರ ಒತ್ತಾಯಿಸುತ್ತಿದೆ. ಆದರೆ ಈ ಸಂಬಂಧ ಭಾರತ ಮತ್ತು ಬಾಂಗ್ಲಾದೇಶದ ನಡುವೆ ವಿಮಾನ ವ್ಯವಸ್ಥೆ ಕುರಿತು ಯಾವುದೇ ಅಧಿಕೃತ ಮಾತುಕತೆ ನಡೆದಿಲ್ಲ ಎಂದು ವರದಿಯಾಗಿದೆ.

2024ರಲ್ಲಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಸರ್ಕಾರಿ ಉದ್ಯೋಗಗಳ ಮೀಸಲಾತಿ ನೀತಿ ವಿರೋಧಿಸಿ ಪ್ರತಿಭಟನೆ ಆರಂಭವಾಗಿತ್ತು. ಈ ಪ್ರತಿಭಟನೆ ದೇಶಾದ್ಯಂತ ದೊಡ್ಡ ಮಟ್ಟದ ಹಿಂಸಾಚಾರಕ್ಕೆ ತಿರುಗಿತ್ತು. ಆಗಿನ ಹಸೀನಾ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳನ್ನು ಬಳಸಿತ್ತು.

ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ, ಪ್ರತಿಭಟನೆ ಮತ್ತು ಹಿಂಸಾಚಾರದ ಸಂದರ್ಭದಲ್ಲಿ ಸುಮಾರು 1,400 ಜನರು ಸಾವನ್ನಪ್ಪಿದ್ದರು. ಪ್ರತಿಭಟನಾಕಾರರ ವಿರುದ್ಧ ಮಾರಕ ಕ್ರಮ ಕೈಗೊಳ್ಳಲು ಆದೇಶಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ 2025ರ ನವೆಂಬರ್ 17ರಂದು ಹಸೀನಾ ಅವರಿಗೆ ಅವರ ಅನುಪಸ್ಥಿತಿಯಲ್ಲೇ ಮರಣದಂಡನೆ ವಿಧಿಸಿತ್ತು. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ಹಸೀನಾ ನಿರಾಕರಿಸಿದ್ದಾರೆ.

ಅವಾಮಿ ಲೀಗ್ ಪಕ್ಷದ ಸ್ಥಿತಿ ಏನು? ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಚಟುವಟಿಕೆಗಳನ್ನು ಬಾಂಗ್ಲಾದೇಶದಲ್ಲಿ ನಿಷೇಧಿಸಲಾಗಿದೆ. ಪಕ್ಷದ ಹಲವು ನಾಯಕರು ದೇಶ ತೊರೆದಿದ್ದಾರೆ ಅಥವಾ ಬಂಧನದಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಕ್ಷದ ಬೆಂಬಲಿಗರ ಪ್ರತಿಭಟನೆಗಳಿಂದ ದೇಶದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ