AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾದ ಆರ್​ಜಿ ಕರ್ ಆಸ್ಪತ್ರೆಯನ್ನು ಮುಚ್ಚುವುದೇ ಸೂಕ್ತ: ಹೈಕೋರ್ಟ್​

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ವಿಧ್ವಂಸಕ ಕೃತ್ಯದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಆರ್​ ಜಿ ಕರ್ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸುವುದು ಮತ್ತು ಅದನ್ನು ಮುಚ್ಚುವುದು ಉತ್ತಮ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕೋಲ್ಕತ್ತಾದ ಆರ್​ಜಿ ಕರ್ ಆಸ್ಪತ್ರೆಯನ್ನು ಮುಚ್ಚುವುದೇ ಸೂಕ್ತ: ಹೈಕೋರ್ಟ್​
ಕೋಲ್ಕತ್ತಾ ಹೈಕೋರ್ಟ್​
ನಯನಾ ರಾಜೀವ್
|

Updated on: Aug 16, 2024 | 2:37 PM

Share

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ವಿಧ್ವಂಸಕ ಕೃತ್ಯದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಆರ್​ ಜಿ ಕರ್ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸುವುದು ಮತ್ತು ಅದನ್ನು ಮುಚ್ಚುವುದು ಉತ್ತಮ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸುವ ರಾಜ್ಯದ ಸಾಮರ್ಥ್ಯವನ್ನು ನ್ಯಾಯಾಲಯ ಪ್ರಶ್ನಿಸಿದೆ. ಇಂತಹ ಘಟನೆಗಳು ವೃತ್ತಿಪರರಲ್ಲಿ ಭಯ ಹಾಗೂ ಅನಿಶ್ಚಿತತೆಯ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಒತ್ತಿ ಹೇಳಿದೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಕ್ಷಣದ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯವು ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ತುರ್ತು ಅಗತ್ಯವನ್ನು ನ್ಯಾಯಾಲಯ ಹೇಳಿದೆ.

ಮತ್ತಷ್ಟು ಓದಿ: ಕೋಲ್ಕತ್ತಾದ ಆಸ್ಪತ್ರೆ ಮೇಲಿನ ದಾಳಿಯಲ್ಲಿ ಕೆಲವು ರಾಜಕೀಯ ಪಕ್ಷಗಳು ಭಾಗಿಯಾಗಿವೆ: ಮಮತಾ ಬ್ಯಾನರ್ಜಿ

ಹಿಂಸಾಚಾರ ಅಥವಾ ಭಯವಿಲ್ಲದೆ ಆರೋಗ್ಯ ವಲಯದಲ್ಲಿರುವವರು ತಮ್ಮ ಕರ್ತವ್ಯವನ್ನು ನಿರ್ವಹಿಸುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಆಸ್ಪತ್ರೆಯಲ್ಲಿ ವಾರದ ಹಿಂದಷ್ಟೇ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಬಳಿಕ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ