ರಾಮಮಂದಿರದ ಶಿಲಾನ್ಯಾಸ ನಡೆದಿದ್ದು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ: ಶರದ್ ಪವಾರ್

ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ಕೈಗೊಂಡಿರುವ ಕುರಿತು ಮಾತನಾಡಿದ ಶರದ್ ಪವಾರ್ ಅವರು, "ರಾಮನಲ್ಲಿ ಅವರ ನಂಬಿಕೆಯನ್ನು ನಾನು ಗೌರವಿಸುತ್ತೇನೆ, ಆದರೆ ಅವರು ಬಡತನವನ್ನು ತೊಡೆದುಹಾಕಲು ಉಪವಾಸವನ್ನು ಆಚರಿಸಲು ನಿರ್ಧರಿಸಿದ್ದರೆ, ಜನರು ಅದನ್ನು ಮೆಚ್ಚುತ್ತಿದ್ದರು" ಎಂದಿದ್ದಾರೆ.

ರಾಮಮಂದಿರದ ಶಿಲಾನ್ಯಾಸ ನಡೆದಿದ್ದು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ: ಶರದ್ ಪವಾರ್
ಶರದ್ ಪವಾರ್
Follow us
|

Updated on: Jan 16, 2024 | 8:45 PM

ಪುಣೆ ಜನವರಿ 16 : ರಾಜೀವ್ ಗಾಂಧಿ (Rajiv Gandhi) ಅವರು ದೇಶದ ಪ್ರಧಾನಿಯಾಗಿದ್ದಾಗ ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram mandir)ನಿರ್ಮಾಣದ ಪ್ರಮುಖ ಸಮಾರಂಭವಾದ ‘ಶಿಲಾನ್ಯಾಸ’ ನಡೆಸಲಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಹೇಳಿದ್ದಾರೆ. ಕರ್ನಾಟಕದ ನಿಪ್ಪಾಣಿ ನಡೆದ ಸಾರ್ವಜನಿಕ ಸಭೆಯಲ್ಲಿ ಹಿರಿಯ ನಾಯಕ ಶರದ್ ಪವಾರ್ ಮಾತನಾಡುತ್ತಿದ್ದರು. ಜನವರಿ 22 ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ನಡೆಯಲಿದೆ.

“ಶಿಲಾನ್ಯಾಸವನ್ನು ರಾಜೀವ್ ಗಾಂಧಿಯವರ ಅವಧಿಯಲ್ಲಿ ನಡೆಸಲಾಯಿತು, ಆದರೆ ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ಭಗವಾನ್ ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದಿದ್ದಾರೆ ಪವಾರ್.

ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ಕೈಗೊಂಡಿರುವ ಕುರಿತು ಮಾತನಾಡಿದ ಪವಾರ್ ಅವರು, “ರಾಮನಲ್ಲಿ ಅವರ ನಂಬಿಕೆಯನ್ನು ನಾನು ಗೌರವಿಸುತ್ತೇನೆ, ಆದರೆ ಅವರು ಬಡತನವನ್ನು ತೊಡೆದುಹಾಕಲು ಉಪವಾಸವನ್ನು ಆಚರಿಸಲು ನಿರ್ಧರಿಸಿದ್ದರೆ, ಜನರು ಅದನ್ನು ಮೆಚ್ಚುತ್ತಿದ್ದರು” ಎಂದಿದ್ದಾರೆ.

ಮಂಗಳವಾರ ಕೊಹಿಮಾದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿದ  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇದು ನರೇಂದ್ರ ಮೋದಿ  ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ( ಜನವರಿ 22 ರ ಕಾರ್ಯವನ್ನು ಸಂಪೂರ್ಣವಾಗಿ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದೆ. ಇದು ಆರ್‌ಎಸ್‌ಎಸ್ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ನಾವು ಎಲ್ಲಾ ಧರ್ಮಗಳು, ಎಲ್ಲಾ ಆಚರಣೆಗಳಿಗೆ ಮುಕ್ತರಾಗಿದ್ದೇವೆ ಎಂದಿದ್ದಾರೆ ಅವರು.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಕಾರ್ಯ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್ ಗಾಂಧಿ

ಹಿಂದೂ ಧರ್ಮದ ವರಿಷ್ಠರು, ಹಿಂದೂ ಧರ್ಮದ ಮಠಾಧಿಪತಿಗಳು ಸಹ ಜನವರಿ 22 ರ ಸಮಾರಂಭ ರಾಜಕೀಯ ಕಾರ್ಯ ಎಂದು ತಮ್ಮ ಅಭಿಪ್ರಾಯವನ್ನು ಎಂದು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಭಾರತದ ಪ್ರಧಾನ ಮಂತ್ರಿಯ ಸುತ್ತ ವಿನ್ಯಾಸಗೊಳಿಸಲಾದ ಮತ್ತು ಆರೆಸ್ಸೆಸ್ ಸುತ್ತ ವಿನ್ಯಾಸಗೊಳಿಸಲಾದ ರಾಜಕೀಯ ಕಾರ್ಯಕ್ರಮಕ್ಕೆ ಹೋಗುವುದು ನಮಗೆ ಸರಿಯನಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿ, ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ನಿರಾಕರಿಸಿದ ಕೆಲವು ದಿನಗಳ ನಂತರ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ