AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ

ಶಿಮ್ಲಾದಲ್ಲಿ ಮೇಘಸ್ಫೋಟ ಸಂಭವಿಸಿದ್ದು 20 ಮಂದಿ ನಾಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇನ್ನು ಉತ್ತರಾಖಂಡದಲ್ಲಿ ಕೂಡ ಪ್ರವಾಹ ಪರಿಸ್ಥಿತಿ ಇದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಕೇರಳ, ಕರ್ನಾಟಕ, ದೆಹಲಿಯಲ್ಲೂ ಕೂಡ ಭಾರಿ ಮಳೆಯು ಅನಾಹುತವನ್ನು ಸೃಷ್ಟಿಸಿವೆ.

ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ
ಶಿಮ್ಲಾ ಮೇಘಸ್ಫೋಟImage Credit source: Amarujala.com
Follow us
ನಯನಾ ರಾಜೀವ್
|

Updated on: Aug 01, 2024 | 8:13 AM

ದೇಶಾದ್ಯಂತ ಭಾರಿ ಮಳೆಯಾಗುತ್ತಿದೆ, ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಲ್ಲಿ ಶಿಮ್ಲಾದಿಂದ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ.

ಸದ್ಯ ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ಇಲ್ಲಿ ಒಟ್ಟು 20 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್‌ಡಿಎಸ್‌ಆರ್‌ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.

ನಮಗೆ ಬಂದಿರುವ ಮಾಹಿತಿಯ ಪ್ರಕಾರ ಮೇಘ ಸಿಡಿತದಿಂದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದರು. ಎಸ್‌ಡಿಎಂ ರಾಂಪುರ ನಿಶಾಂತ್ ತೋಮರ್ ಘಟನಾ ಸ್ಥಳಕ್ಕೆ ತಲುಪುತ್ತಿದ್ದಾರೆ. ಹಲವೆಡೆ ರಸ್ತೆ ಮುಚ್ಚಿದ ಕಾರಣ ರಕ್ಷಣಾ ತಂಡವು ಎರಡು ಕಿಲೋಮೀಟರ್ ದೂರದವರೆಗೆ ಉಪಕರಣಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಬೇಕಾಯಿತು ಎಂದು ತಿಳಿಸಿದ್ದಾರೆ.

ಕೂಡಲೇ ಪರಿಹಾರ ಕಾರ್ಯ ಆರಂಭಿಸಲಾಗಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ. ರಕ್ಷಣಾ ತಂಡದಲ್ಲಿ ಐಟಿಬಿಪಿ ಮತ್ತು ವಿಶೇಷ ಗೃಹ ರಕ್ಷಕ ದಳದವರನ್ನು ಕೂಡ ಸೇರಿಸಲಾಗಿದೆ ಎಂದು ಅವರು ಹೇಳಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಎಲ್ಲಾ ತಂಡಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು. ಆಂಬ್ಯುಲೆನ್ಸ್ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ರಕ್ಷಣಾ ಕಾರ್ಯಾಚರಣೆಗೆ ಒಳಪಡಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಮತ್ತಷ್ಟು ಓದಿ: ವಯನಾಡ್ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 238; ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ

ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಚಾರ್ ಧಾಮ್ ಯಾತ್ರೆಗೆ ಬರುವ ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ರುದ್ರಪ್ರಯಾಗದಲ್ಲಿ ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಭೀಮಾಲಿಯ ಕೇದಾರನಾಥ ಕಾಲುದಾರಿ ಮತ್ತು ಎರಡು ಸೇತುವೆಗಳು ಕೊಚ್ಚಿಹೋಗಿವೆ. ಭೀಮಾಲಿಯಲ್ಲಿ ಸಿಲುಕಿರುವ 200 ಮಂದಿಯನ್ನು ಹೊರತರುವ ಕಾರ್ಯ ನಡೆಯುತ್ತಿದೆ.

ಇನ್ನು ಕೇರಳದಲ್ಲೂ ಗುಡ್ಡಗಳು ಕುಸಿದು 170ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ. ಕರ್ನಾಟಕ ಹಾಗೂ ದೆಹಲಿಯಲ್ಲೂ ಕೂಡ ವರುಣನ ಆರ್ಭಟ ಜೋರಾಗಿ ಹಲವೆಡೆ ಭಾರಿ ಅನಾಹುಗಳನ್ನೇ ಸೃಷ್ಟಿ ಮಾಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್