Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಗೌರವಾರ್ಥ ಶನಿವಾರ ಭಾರತದಲ್ಲಿ ಶೋಕಾಚರಣೆ

ಭಾರತದೊಂದಿಗೆ ಬಹಳ ಉತ್ತಮ ಒಡನಾಟ ಹೊಂದಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಗೌರವಾರ್ಥ ಶನಿವಾರ ಒಂದು ದಿನ ರಾಷ್ಟ್ರೀಯ ಶೋಕಾಚರಣೆ ನಡೆಸಲು ಆದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಗೌರವಾರ್ಥ ಶನಿವಾರ ಭಾರತದಲ್ಲಿ ಶೋಕಾಚರಣೆ
ಶಿಂಜೋ ಅಬೆ ಜೊತೆ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 08, 2022 | 3:23 PM

ನವದೆಹಲಿ: ಜಪಾನ್​ನ ಮಾಜಿ ಪ್ರಧಾನಮಂತ್ರಿ ಶಿಂಜೋ ಅಬೆ (Shinzo Abe) ಅವರ ನಿಧನದ ಹಿನ್ನೆಲೆಯಲ್ಲಿ ಸಂತಾಪದ ಸೂಚಕವಾಗಿ ಭಾರತದಾದ್ಯಂತ ನಾಳೆ (ಜುಲೈ 9) ಶೋಕಾಚರಣೆ ಆಚರಿಸಲಾಗುವುದು. ಭಾರತದೊಂದಿಗೆ ಬಹಳ ಉತ್ತಮ ಒಡನಾಟ ಹೊಂದಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಗೌರವಾರ್ಥ ಶನಿವಾರ ಒಂದು ದಿನ ರಾಷ್ಟ್ರೀಯ ಶೋಕಾಚರಣೆ ನಡೆಸಲು ಆದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಘೋಷಿಸಿದ್ದಾರೆ.

ಶಿಂಜೋ ಅಬೆ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅಬೆ ಜೊತೆಗಿನ ತಮ್ಮ ಒಡನಾಟದ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ
Image
Shinzo Abe: ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ
Image
Shinzo Abe: ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಥಿತಿ ಚಿಂತಾಜನಕ, ಜೀವ ಉಳಿಸಲು ವೈದ್ಯರ ಶತಪ್ರಯತ್ನ; ಜಪಾನ್ ಪಿಎಂ ಮಾಹಿತಿ
Image
ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ಅಸ್ಪತ್ರೆಗೆ ದಾಖಲು
Image
ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ

ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿಯಾಗಿದ್ದರು, ಅತ್ಯುತ್ತಮ ನಾಯಕ ಮತ್ತು ಆಡಳಿತಗಾರರಾಗಿದ್ದರು. ಜಪಾನ್ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆಯಿಂದ ವಿಶ್ವಕ್ಕೆ ಭಾರೀ ದೊಡ್ಡ ನಷ್ಟ ಉಂಟಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶಿಂಜೋ ಅಬೆ ಅವರೊಂದಿಗಿನ ನನ್ನ ಒಡನಾಟವು ಹಲವು ವರ್ಷಗಳ ಹಿಂದಿನದು. ನಾನು ಗುಜರಾತ್ ಸಿಎಂ ಆಗಿದ್ದಾಗ ಅವರನ್ನು ಪರಿಚಯ ಮಾಡಿಕೊಂಡಿದ್ದೆ. ನಾನು ಪ್ರಧಾನಿಯಾದ ನಂತರ ನಮ್ಮ ಸ್ನೇಹ ಮುಂದುವರೆಯಿತು. ಆರ್ಥಿಕತೆ ಮತ್ತು ಜಾಗತಿಕ ವ್ಯವಹಾರಗಳ ಬಗ್ಗೆ ಶಿಂಜೋ ಅಬೆ ಅವರ ತೀಕ್ಷ್ಣವಾದ ಒಳನೋಟಗಳು ನನ್ನ ಮೇಲೆ ಆಳವಾದ ಪ್ರಭಾವ ಬೀರಿದ್ದವು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

narendra modi- shinzo abe 2

ಶಿಂಜೋ ಅಬೆ ಜೊತೆ ಪ್ರಧಾನಿ ನರೇಂದ್ರ ಮೋದಿ

ನನ್ನ ಇತ್ತೀಚಿನ ಜಪಾನ್ ಭೇಟಿಯ ಸಂದರ್ಭದಲ್ಲಿ ಮತ್ತೊಮ್ಮೆ ನಾನು ಶಿಂಜೋ ಅಬೆ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿತು. ಆಗ ನಾನು ಅವರಿಂದಿಗೆ ಅನೇಕ ವಿಷಯಗಳನ್ನು ಚರ್ಚಿಸಿದ್ದೆ. ಆದರೆ, ಅದೇ ನಮ್ಮ ಕೊನೆಯ ಸಭೆ ಎಂದು ನನಗೆ ತಿಳಿದಿರಲಿಲ್ಲ. ಅವರ ಕುಟುಂಬಕ್ಕೆ ಮತ್ತು ಜಪಾನಿನ ಜನರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹಳೆಯ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ.

ಶಿಂಜೋ ಅಬೆ ಅವರು ಭಾರತ-ಜಪಾನ್ ಸಂಬಂಧಗಳನ್ನು ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲು ಅಪಾರ ಕೊಡುಗೆ ನೀಡಿದ್ದಾರೆ. ಇಂದು ಅವರ ನಿಧನದಿಂದ ಇಡೀ ಭಾರತವೇ ಜಪಾನ್‌ನೊಂದಿಗೆ ದುಃಖಿಸುತ್ತಿದೆ. ಈ ದುಃಖದ ಕ್ಷಣದಲ್ಲಿ ನಾವು ನಮ್ಮ ಜಪಾನಿನ ಸಹೋದರ- ಸಹೋದರಿಯರ ಜೊತೆಗಿರುತ್ತೇವೆ ಎಂದು ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

narendra modi- shinzo abe 1

ಶಿಂಜೋ ಅಬೆ ಜೊತೆ ಪ್ರಧಾನಿ ನರೇಂದ್ರ ಮೋದಿ

ಜಪಾನ್​ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ 67 ವರ್ಷವಾಗಿತ್ತು. ಚುನಾವಣಾ ಪ್ರಚಾರದ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಶಿಂಜೋ ಅಬೆ ನಿಧನರಾಗಿದ್ದಾರೆ. ಜಪಾನ್​ನ ಪಶ್ಚಿಮ ಪ್ರಾಂತ್ಯದ ನಾರಾ ನಗರದಲ್ಲಿ ಅವರನ್ನು ಶೂಟ್ ಮಾಡಲಾಗಿತ್ತು. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಿಂಜೋ ಅಬೆ ಜಪಾನ್​​ನಲ್ಲಿ ಅತಿ ಹೆಚ್ಚು ಆಡಳಿತ ನಡೆಸಿರುವ ಪ್ರಧಾನಿ ಎಂಬ ಹೆಗ್ಗೆಳಿಕೆಗೆ ಪಾತ್ರರಾಗಿದ್ದರು. 2006-2007, 2012-2020ರವರೆಗೂ ಅವರು ಪ್ರಧಾನಿ ಆಗಿದ್ದರು.

ಶಿಂಜೊ ಅಬೆ ನಿಧನದ ಬಗ್ಗೆ ಮಾಹಿತಿ ನೀಡಿದ ಜಪಾನ್ ವೈದ್ಯರು, ‘ಗುಂಡು ಹೃದಯವನ್ನು ಹೊಕ್ಕಿತ್ತು. ಹೀಗಾಗಿ ಹೃದಯ ಸ್ತಂಭನವಾಯಿತು. ತೀರಾ ಹತ್ತಿರದಿಂದ ಗುಂಡು ಹಾರಿಸಲಾಗಿದೆ. ಆಸ್ಪತ್ರೆಗೆ ಅವರನ್ನು ಕರೆತರುವ ಹೊತ್ತಿಗೆ ನಾಡಿಬಡಿತ ಕ್ಷೀಣಿಸಿತ್ತು. ಹೃದಯದಿಂದ ಗುಂಡು ಹೊರತೆಗೆಯಲು ಸಾಧ್ಯವಾಗಲಿಲ್ಲ’ ಎಂದು ಹೇಳಿದರು.

Published On - 3:05 pm, Fri, 8 July 22

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ