Sign In

By signing in or creating an account, you agree with Associated Broadcasting Company's Terms & Conditions and Privacy Policy.

Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ; ಭಾರತದಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ

ಜಪಾನ್​ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ 67 ವರ್ಷವಾಗಿತ್ತು. ಚುನಾವಣಾ ಪ್ರಚಾರದ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಶಿಂಜೋ ಅಬೆ ಮೃತಪಟ್ಟಿದ್ದರು.

Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ; ಭಾರತದಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ
ಶಿಂಜೋ ಅಬೆImage Credit source: indiatv news
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 09, 2022 | 11:42 AM

ನವದೆಹಲಿ: ಜಪಾನ್​ನ ಮಾಜಿ ಪ್ರಧಾನಮಂತ್ರಿ ಶಿಂಜೋ ಅಬೆ (Shinzo Abe) ಅವರನ್ನು ಗುಂಡಿಕ್ಕಿ ಶುಕ್ರವಾರ ಹತ್ಯೆ ಮಾಡಲಾಗಿತ್ತು. ಅವರ ಗೌರವಾರ್ಥ ಭಾರತದಲ್ಲಿ ಇಂದು (ಜುಲೈ 9) ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ಇಂದು ದೇಶಾದ್ಯಂತ ಭಾರತ ಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲು ಆದೇಶಿಸಲಾಗಿದೆ. ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿಯಾಗಿದ್ದರು, ಅತ್ಯುತ್ತಮ ನಾಯಕ ಮತ್ತು ಆಡಳಿತಗಾರರಾಗಿದ್ದರು. ಜಪಾನ್ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆಯಿಂದ ವಿಶ್ವಕ್ಕೆ ಭಾರೀ ದೊಡ್ಡ ನಷ್ಟ ಉಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ ಮಾಡಿದ್ದಾರೆ.

ಶಿಂಜೋ ಅಬೆ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅಬೆ ಜೊತೆಗಿನ ತಮ್ಮ ಒಡನಾಟದ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿದ್ದರು. ನನ್ನ ಇತ್ತೀಚಿನ ಜಪಾನ್ ಭೇಟಿಯ ಸಂದರ್ಭದಲ್ಲಿ ಮತ್ತೊಮ್ಮೆ ನಾನು ಶಿಂಜೋ ಅಬೆ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿತ್ತು. ಆದರೆ, ಅದೇ ನಮ್ಮ ಕೊನೆಯ ಸಭೆ ಎಂದು ನನಗೆ ತಿಳಿದಿರಲಿಲ್ಲ. ಅವರ ಕುಟುಂಬಕ್ಕೆ ಮತ್ತು ಜಪಾನಿನ ಜನರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಾರತದ ಅತ್ಯಾಪ್ತ ಮಿತ್ರ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ; ಪ್ರಧಾನಿ ಮೋದಿ ಜೊತೆಗಿನ ಶಿಂಜೋ ಫೋಟೋಗಳು ಇಲ್ಲಿವೆ

ಇದನ್ನೂ ಓದಿ
Image
Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಗೌರವಾರ್ಥ ಶನಿವಾರ ಭಾರತದಲ್ಲಿ ಶೋಕಾಚರಣೆ
Image
Shinzo Abe: ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ
Image
Shinzo Abe: ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಥಿತಿ ಚಿಂತಾಜನಕ, ಜೀವ ಉಳಿಸಲು ವೈದ್ಯರ ಶತಪ್ರಯತ್ನ; ಜಪಾನ್ ಪಿಎಂ ಮಾಹಿತಿ
Image
ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ಅಸ್ಪತ್ರೆಗೆ ದಾಖಲು

ಜಪಾನ್​ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ 67 ವರ್ಷವಾಗಿತ್ತು. ಚುನಾವಣಾ ಪ್ರಚಾರದ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಶಿಂಜೋ ಅಬೆ ಮೃತಪಟ್ಟಿದ್ದಾರೆ. ಜಪಾನ್​ನ ಪಶ್ಚಿಮ ಪ್ರಾಂತ್ಯದ ನಾರಾ ನಗರದಲ್ಲಿ ಅವರನ್ನು ಶೂಟ್ ಮಾಡಲಾಗಿತ್ತು. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಿಂಜೋ ಅಬೆ ಜಪಾನ್​​ನಲ್ಲಿ ಅತಿ ಹೆಚ್ಚು ಆಡಳಿತ ನಡೆಸಿರುವ ಪ್ರಧಾನಿ ಎಂಬ ಹೆಗ್ಗೆಳಿಕೆಗೆ ಪಾತ್ರರಾಗಿದ್ದರು. 2006-2007, 2012-2020ರವರೆಗೂ ಅವರು ಪ್ರಧಾನಿ ಆಗಿದ್ದರು.

ಇದನ್ನೂ ಓದಿ: ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ಅಸ್ಪತ್ರೆಗೆ ದಾಖಲು

ಜಪಾನ್​ನ ಪಶ್ಚಿಮ ಪ್ರಾಂತ್ಯದ ನಾರಾ ನಗರದಲ್ಲಿ ಅವರನ್ನು ಶೂಟ್ ಮಾಡಲಾಗಿತ್ತು. ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಭಾನುವಾರ (ಜುಲೈ 10) ಜಪಾನ್ ಸಂಸತ್​ನ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು, ಶಿಂಜೋ ಅಬೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಶಿಂಜೋ ಅಬೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Published On - 8:26 am, Sat, 9 July 22

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ