ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ

ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್​ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದಿಂದ ಹೊರನಡೆದಿತ್ತು.

ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ
ಬಿಜೆಪಿ ಸೇರಿದ ಮಂಜಿಂದರ್ ಸಿಂಗ್ ಸಿರ್ಸಾ
Follow us
TV9 Web
| Updated By: Lakshmi Hegde

Updated on: Dec 02, 2021 | 12:25 PM

ಶಿರೋಮಣಿ ಅಕಾಲಿ ದಳ (SAD)ದ ನಾಯಕ ಮಂಜಿಂದರ್​ ಸಿಂಗ್ ಸಿರ್ಸಾ ಬುಧವಾರ ಬಿಜೆಪಿಯನ್ನು ಸೇರಿದ್ದಾರೆ. ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಮುಖ್ಯಸ್ಥ ಸ್ಥಾನದಿಂದ ತಾವು ಕೆಳಗೆ ಇಳಿಯುತ್ತಿರುವ ಬಗ್ಗೆ ಇತ್ತೀಚೆಗಷ್ಟೇ ಘೋಷಿಸಿದ್ದ ಸಿರ್ಸಾ, ನಿನ್ನೆ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಕಮಲ ಪಾಳಯಕ್ಕೆ ಸೇರ್ಪಡೆಗೊಂಡಿದ್ದಾರೆ. ಇದು ಮುಂದಿನ ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಸಿಖ್​ ಸಮುದಾಯದ ಮತದಾರರನ್ನು ಸೆಳೆಯುವ ಬಿಜೆಪಿಯ ಪ್ರಯತ್ನ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.  

ಸಿರ್ಸಾ ರಾಜೌರಿ ಗಾರ್ಡನ್​​ನ ಮಾಜಿ ಶಾಸಕರು. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿ ಭಾಗಗಳಲ್ಲಿ ಹೋರಾಡುತ್ತಿರುವ ರೈತರಿಗೆ ಬೆಂಬಲ ನೀಡುತ್ತಿದ್ದ ಸಂಘಟನೆಗಳಲ್ಲಿ ಒಂದಾಗಿದ್ದ ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿಯ ಮುಖ್ಯಸ್ಥರಾಗಿದ್ದರು. ಹಾಗೇ, ಕೃಷಿ ಕಾಯ್ದೆಗಳನ್ನು ತೀವ್ರವಾಗಿ ವಿರೋಧಿಸಿದ್ದರು. ಇತ್ತೀಚೆಗೆ ಕಮಿಟಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ನಾನು ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಮತ್ತು ಕಮಿಟಿಯ ಮುಂಬರುವ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ನನ್ನ ಸಮುದಾಯ, ರಾಷ್ಟ್ರಕ್ಕೆ ಸೇವೆ ಮುಂದುವರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಮಾತನಾಡಿದ ಸಿರ್ಸಾ, ದೇಶಾದ್ಯಂತ ಸಿಖ್​ ಸಮುದಾಯಕ್ಕೆ ಹಲವು ಸಮಸ್ಯೆಗಳು ಇವೆ. ಅದರ ಬಗ್ಗೆ ಅಮಿತ್​ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲದೆ ಪ್ರಧಾನಿ ಮೋದಿಯವರ ಬಳಿಯೂ ಮಾತನಾಡಲು ಅವಕಾಶ ಸಿಕ್ಕಿದ್ದು ತುಂಬ ಖುಷಿಕೊಟ್ಟಿತು.  ಸಿಖ್ಖರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಅಮಿತ್ ಶಾ  ಕೂಡ ತಮ್ಮ ಟ್ವಿಟರ್​​ನಲ್ಲಿ ಸಿರ್ಸಾ ಅವರು ಬಿಜೆಪಿಗೆ ಸೇರ್ಪಡೆಯಾದ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್​ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್​ಡಿಎ ಒಕ್ಕೂಟದಿಂದ ಹೊರನಡೆದು, ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವಿಲ್ಲ ಎಂದಿತ್ತು. ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್​ ಸಿಂಗ್​ ಬಾದಲ್​​ರ ಆಪ್ತರೆನಿಸಿಕೊಂಡಿದ್ದ ಮಂಜಿಂದರ್​ ಸಿಂಗ್ ಸಿರ್ಸಾ ಕೃಷಿ ಕಾಯ್ದೆಗಳನ್ನು ತುಂಬ ಸಲ ಟೀಕಿಸಿದ್ದಾರೆ. ಇದೀಗ ಆ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡ ಬೆನ್ನಲ್ಲೇ ಅವರು ಬಿಜೆಪಿ ಪಕ್ಷ ಸೇರಿದ್ದಾರೆ. ಆದರೆ ಸಿರ್ಸಾ ಯೂ ಟರ್ನ್ ತೆಗೆದುಕೊಂಡಿದ್ದನ್ನು ಅವರದ್ದೇ ಪಕ್ಷದ ಅನೇಕ ಸದಸ್ಯರು ಟೀಕಿಸುತ್ತಿದ್ದಾರೆ.

ಇದನ್ನೂ ಓದಿ: India vs South Africa: ಓಮಿಕ್ರಾನ್ ಭೀತಿ: ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್