ಮತ್ತೊಮ್ಮೆ.. ಸರ್ಕಾರ ರಚನೆಗೆ ಅರ್ಜಿ ಹಾಕಿದ ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ!

|

Updated on: Nov 25, 2019 | 12:24 PM

ಮುಂಬೈ: ಕುತೂಹಲಕಾರಿ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ನೀಡಿರುವ ಬೆನ್ನಿಗೇ ಇತರೆ ಮೂರು ಪಕ್ಷಗಳ ಶಾಸಕರು ಇದೀಗತಾನೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿವೆ. ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಬಹುಮತ ಸಾಬೀತಿಗೆ ಅಗತ್ಯವಿರುವಷ್ಟು ಸಂಖ್ಯೆಯಲ್ಲಿ ತಮಗೆ ಬೆಂಬಲ ಸೂಚಿಸಿ, ಶಾಸಕರ ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ […]

ಮತ್ತೊಮ್ಮೆ.. ಸರ್ಕಾರ ರಚನೆಗೆ ಅರ್ಜಿ ಹಾಕಿದ ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ!
Follow us on

ಮುಂಬೈ: ಕುತೂಹಲಕಾರಿ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ನೀಡಿರುವ ಬೆನ್ನಿಗೇ ಇತರೆ ಮೂರು ಪಕ್ಷಗಳ ಶಾಸಕರು ಇದೀಗತಾನೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿವೆ. ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಬಹುಮತ ಸಾಬೀತಿಗೆ ಅಗತ್ಯವಿರುವಷ್ಟು ಸಂಖ್ಯೆಯಲ್ಲಿ ತಮಗೆ ಬೆಂಬಲ ಸೂಚಿಸಿ, ಶಾಸಕರ ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ರಿಟ್‌ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿದೆ.

Published On - 12:20 pm, Mon, 25 November 19