AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಸಚಿವರ ವಿರುದ್ಧ 5 ಕೋಟಿ ರೂ. ಲಂಚದ ಬೇಡಿಕೆಯ ಆರೋಪ ಮಾಡಿದ ಸಂಜಯ್ ರಾವತ್

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಂಸದ ಸಂಜಯ್ ರಾವತ್ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ. ಸಣ್ಣ ಕೆಲಸಗಳಿಗೂ ಸಚಿವರು ಹಣ ಕೇಳುತ್ತಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಅನ್ನಭಾವು ಸಾಥೆ ತರಬೇತಿ ಕೇಂದ್ರಕ್ಕೆ 25 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಅನುಮೋದಿಸಲು 5 ಕೋಟಿ ರೂ. ಲಂಚ ಕೇಳಲಾಗಿತ್ತು ಎಂದು ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ಮುಂಬೈನ 72ನೇ ಮಹಡಿಯಲ್ಲಿರುವ ಖಾಸಗಿ ನಿವಾಸದಲ್ಲಿ ಈ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಲಾಗಿದೆ. ಲಂಚ ಪಾವತಿಸದ ಕಾರಣ ಅನ್ನಭಾವು ಸಾಥೆ ತರಬೇತಿ ಕೇಂದ್ರದ ಪ್ರಸ್ತಾವನೆಯನ್ನು ಅನುಮೋದಿಸಲಾಗಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರದ ಸಚಿವರ ವಿರುದ್ಧ 5 ಕೋಟಿ ರೂ. ಲಂಚದ ಬೇಡಿಕೆಯ ಆರೋಪ ಮಾಡಿದ ಸಂಜಯ್ ರಾವತ್
ಸಂಜಯ್ ರಾವತ್Image Credit source: PTI
ಸುಷ್ಮಾ ಚಕ್ರೆ
|

Updated on: Nov 25, 2026 | 3:14 PM

Share

ಮುಂಬೈ, ನವೆಂಬರ್ 25: ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆ (ಶಿಂಧೆ ಬಣ) ನಾಯಕ ಸಂಜಯ್ ಶಿರ್ಸಾಟ್ 25 ಕೋಟಿ ರೂ. ಮೊತ್ತದ ಯೋಜನೆಯ ಪ್ರಸ್ತಾವನೆಗೆ ಅನುಮೋದನೆ ನೀಡಲು 5 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಸಚಿವ ಸಂಜಯ್ ಶಿರ್ಸಾಟ್ ಈ ಎಲ್ಲಾ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇದೊಂದು ಆಧಾರರಹಿತ ಮತ್ತು ಬ್ಲ್ಯಾಕ್‌ಮೇಲ್ ತಂತ್ರ ಎಂದು ತಿರುಗೇಟು ನೀಡಿದ್ದಾರೆ.

ಸಂಜಯ್ ರಾವತ್ ಇಂದು ಛತ್ರಪತಿ ಸಂಭಾಜಿನಗರದಲ್ಲಿ ದೂರುದಾರ ಹಾಗೂ ಲಾತೂರ್ ಜಿಲ್ಲೆಯ ಉದ್ಗೀರ್ ಮೂಲದ ಸಾಮಾಜಿಕ ಕಾರ್ಯಕರ್ತ ನರಸಿಂಗ್ ಉದ್ಗೀರ್ಕರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈ ಆರೋಪ ಮಾಡಿದ್ದಾರೆ. ಉದ್ಗೀರ್‌ನಲ್ಲಿ ದಲಿತ ಮತ್ತು ಮಾತಂಗ್ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲು ‘ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ತರಬೇತಿ ಕೇಂದ್ರ’ ಸ್ಥಾಪಿಸಲು ‘ಆರತಿ ಸೇವಾಭಾವಿ ಸಂಸ್ಥೆ’ ವತಿಯಿಂದ 25 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಲಾಗಿತ್ತು ಎಂದು ಸಂಜಯ್ ರಾವತ್ ವಿವರಿಸಿದ್ದಾರೆ.

ಇದನ್ನೂ ಓದಿ: ಹೃದಯಾಘಾತದಿಂದ ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ರಾಮರಾವ್ ವಡ್ಕುಟೆ ನಿಧನ

ಈ ಪ್ರಸ್ತಾವನೆ ಸಲ್ಲಿಸಿದ ಬಳಿಕ, ಸಚಿವ ಶಿರ್ಸಾಟ್ ಅವರು ಮುಂಬೈನ ಕಟ್ಟಡವೊಂದರ 72ನೇ ಮಹಡಿಯಲ್ಲಿರುವ ತಮ್ಮ ಖಾಸಗಿ ನಿವಾಸಕ್ಕೆ ರಾತ್ರಿ ವೇಳೆ ಕರೆಸಿಕೊಂಡು, ಯೋಜನೆಯ ಶೇ. 20ರಷ್ಟು ಅಂದರೆ 5 ಕೋಟಿ ಲಂಚ ನೀಡಿದರೆ ಮಾತ್ರ ಕಡತಕ್ಕೆ ಸಹಿ ಹಾಕುವುದಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಜಯ್ ರಾವತ್ ಆರೋಪಿಸಿದ್ದು, ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಸಚಿವ ಸಂಜಯ್ ಶಿರ್ಸಾಟ್ ಹೇಳಿದ್ದೇನು?:

ಸಂಜಯ್ ರಾವತ್ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಸಂಜಯ್ ಶಿರ್ಸಾಟ್, “ಇವೆಲ್ಲವೂ ಸಂಪೂರ್ಣ ಆಧಾರರಹಿತ ಆರೋಪಗಳು. ದೂರುದಾರ ನರಸಿಂಗ್ ಉದ್ಗೀರ್ಕರ್ ಒಬ್ಬ ಬ್ಲ್ಯಾಕ್‌ಮೇಲರ್ ಆಗಿದ್ದು, ಆತನ ವಿರುದ್ಧವೇ ಹಲವಾರು ದೂರುಗಳಿವೆ” ಎಂದು ಹೇಳಿದ್ದಾರೆ. ಅಲ್ಲದೆ, ಸಚಿವರಾಗಿ ತಮಗೆ ಕೇವಲ 10 ಕೋಟಿ ರೂ.ವರೆಗಿನ ಕಡತಗಳಿಗೆ ಮಾತ್ರ ಅನುಮೋದನೆ ನೀಡುವ ಅಧಿಕಾರವಿದ್ದು, 25 ಕೋಟಿಗಿಂತ ಹೆಚ್ಚಿನ ಮೊತ್ತದ ಪ್ರಸ್ತಾವನೆಗಳು ಮುಖ್ಯಮಂತ್ರಿಗಳ ಅನುಮೋದನೆಗೆ ಹೋಗುತ್ತವೆ ಎಂದಿದ್ದಾರೆ. ಆರೋಪಗಳ ಕುರಿತು ಸಾಕ್ಷ್ಯಾಧಾರಗಳಿದ್ದರೆ ಬಹಿರಂಗಪಡಿಸುವಂತೆ ಅವರು ಸಂಜಯ್ ರಾವತ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌