ರಾಷ್ಟ್ರಪತಿ ಚುನಾವಣೆ ಬಗ್ಗೆ ಮಮತಾ ಬ್ಯಾನರ್ಜಿ ಕರೆದಿರುವ ಮೀಟಿಂಗ್​ಗೆ ಉದ್ಧವ್ ಠಾಕ್ರೆ ಗೈರು

Presidential Election: ದೇಶವನ್ನು ಒಡೆಯಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಎಲ್ಲ ವಿರೋಧ ಪಕ್ಷಗಳೂ ಒಂದಾಗಿ ನಿಲ್ಲಬೇಕಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆ ಬಗ್ಗೆ ಮಮತಾ ಬ್ಯಾನರ್ಜಿ ಕರೆದಿರುವ ಮೀಟಿಂಗ್​ಗೆ ಉದ್ಧವ್ ಠಾಕ್ರೆ ಗೈರು
ಉದ್ಧವ್ ಠಾಕ್ರೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 12, 2022 | 3:06 PM

ಮುಂಬೈ: ರಾಷ್ಟ್ರಪತಿ ಚುನಾವಣೆ ಸಂಬಂಧ (Presidential Polls) ಚರ್ಚಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ (TMC Leader Mamata Banerjee) ಕರೆದಿರುವ ಸಭೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ (Uddhav Thackeray) ಪಾಲ್ಗೊಳ್ಳುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ. ಜೂನ್ 15ರಂದು ಉದ್ಧವ್ ಅಯೋಧ್ಯೆಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಅವರು ಮಮತಾ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

‘ಜೂನ್ 15ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಉದ್ಧವ್ ಠಾಕ್ರೆ ಅವರಿಗೆ ಆಹ್ವಾನವಿದೆ. ಆದರೆ ಅವರು ಆ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಇರುತ್ತಾರೆ. ಮಮತಾ ಅವರ ಆಹ್ವಾನ ನಮಗೆ ತಲುಪಿದೆ. ನಮ್ಮ ಪಕ್ಷದ ಪರವಾಗಿ ಹಿರಿಯ ನಾಯಕರೊಬ್ಬರು ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಎಎನ್​ಐ ಸುದ್ದಿಸಂಸ್ಥೆಯು ತಿಳಿಸಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯ ಅಯೋಧ್ಯೆ ಭೇಟಿಯ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ರಾಷ್ಟ್ರಪತಿ ಚುನಾವಣೆ ಬಗ್ಗೆ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಜೂನ್ 15ರಂದು ದೆಹಲಿಯಲ್ಲಿ ಟಿಎಂಸಿ ನಾಯಕಿ ಮತ್ತು ಮಮತಾ ಬ್ಯಾನರ್ಜಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಹಲವು ನಾಯಕರಿಗೆ ಈಗಾಗಲೇ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ 22 ಪ್ರತಿಪಕ್ಷಗಳ ನಾಯಕರಿಗೆ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದರು. ದೇಶವನ್ನು ವಿಭಜಕ ಶಕ್ತಿಗಳು ಆಳುತ್ತಿರುವ ಸಂದರ್ಭದಲ್ಲಿ ರಾಷ್ಟ್ರಪತಿ ಚುನಾವಣೆಯು ಎಲ್ಲ ಪ್ರಗತಿಪರ ವಿರೋಧ ಪಕ್ಷಗಳಿಗೂ ಅತ್ಯುತ್ತಮ ಅವಕಾಶ ಕೊಟ್ಟಿದೆ. ಮುಂದಿನ ರಾಜಕೀಯದ ರೂಪುರೇಷೆ ನಿರ್ಧರಿಸಲು ಈ ಅವಕಾಶವನ್ನು ನಾವು ಬಳಸಿಕೊಳ್ಳಬೇಕು ಎಂದು ಅವರು ಹೇಳಿದ್ದರು. ರಾಷ್ಟ್ರಪತಿ ಚುನಾವಣೆಯು ಜುಲೈ 18ರಂದು ನಡೆಯಲಿದೆ. ಸಂಸದರು, ಶಾಸಕರು ಸೇರಿದಂತೆ 4,809 ಮಂದಿಗೆ ಮತದಾನದ ಹಕ್ಕು ಇದೆ.

ದೇಶವನ್ನು ಒಡೆಯಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಎಲ್ಲ ವಿರೋಧ ಪಕ್ಷಗಳೂ ಒಂದಾಗಿ ನಿಲ್ಲಬೇಕಿದೆ. ದೇಶಕ್ಕೆ ಪ್ರಬಲ ಪ್ರತಿಪಕ್ಷದ ಅವಶ್ಯಕತೆ ಇದೆ ಎಂದು ಮಮತಾ ಹೇಳಿದ್ದಾರೆ. ವಿರೋಧ ಪಕ್ಷಗಳ ನಾಯಕರನ್ನು ಕೇಂದ್ರ ಸರ್ಕಾರದ ವಿವಿಧ ಏಜೆನ್ಸಿಗಳು ಗುರಿಯಾಗಿಸಿ ಕಾರ್ಯಾಚರಣೆ ನಡೆಸುತ್ತಿವೆ. ವಿಶ್ವದಲ್ಲಿ ಭಾರತದ ಗೌರವಕ್ಕದ ಧಕ್ಕೆಯೊದಗಿದೆ. ದೇಶದ ಒಳಗೂ ವಿಭಜನೆಯ ಮನಸ್ಥಿತಿ ವಿಜೃಂಭಿಸುತ್ತಿದೆ. ನಮ್ಮ ಪ್ರತಿರೋಧವನ್ನು ತೋರಲು ಇದು ಅತ್ಯುತ್ತಮ ಅವಕಾಶ ಎಂದು ಮಮತಾ ಹೇಳಿದ್ದಾರೆ.

‘ಭಾರತೀಯ ಪ್ರಜಾಪ್ರಭುತ್ವದ ರಕ್ಷಕರಾಗಿರುವ ಸ್ಥಾನಕ್ಕೆ ಆಯ್ಕೆ ಮಾಡಲು ಈ ಚುನಾವಣೆ ಅತ್ಯುತ್ತಮ ಅವಕಾಶ ನೀಡಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯೊದಗಿರುವ ಸನ್ನಿವೇಶದಲ್ಲಿ ಪ್ರಬಲ ಪ್ರತಿಪಕ್ಷ ಈ ಕ್ಷಣದ ತುರ್ತಾಗಿದೆ. ನೊಂದ ಮತ್ತು ಶೋಷಿತ ಜನಸಮುದಾಯಗಳ ಪರವಾಗಿ ಧ್ವನಿ ಎತ್ತಬೇಕಿದೆ’ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿಎಂಕೆ, ಸಿಪಿಐ, ಸಿಪಿಐ (ಎಂ) ಮತ್ತು ಆಮ್ ಆದ್ಮಿ ಪಕ್ಷದ ನಾಯಕರೊಂದಿಗೆ ಮಮತಾ ಬ್ಯಾನರ್ಜಿಯನ್ನು ಇತ್ತೀಚೆಗೆ ಭೇಟಿಯಾಗಿದ್ದರು. ಮಮತಾ ಬ್ಯಾನರ್ಜಿ ಪ್ರಯತ್ನಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ಟೀಕಿಸಿದೆ. ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾಯಿತ ಪ್ರತಿನಿಧಿಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಇದನ್ನು ಜನಸಂಖ್ಯೆ ಆಧರಿಸಿದ ಲೆಕ್ಕಾಚಾರದ ಪ್ರಕಾರ ವಿಶ್ಲೇಷಿಸಿ, ಮತಗಳನ್ನು ಲೆಕ್ಕ ಹಾಕುತ್ತಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Sun, 12 June 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ