ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ನೀಡುವುದಾಗಿ ಘೋಷಿಸಿದ ಶಿವಸೇನಾ ಶಾಸಕ

ಗಾಯಕ್ವಾಡ್ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಶಿವಸೇನಾ ಶಾಸಕರ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಅಥವಾ ಅನುಮೋದಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ.  “ಆದಾಗ್ಯೂ, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮೀಸಲಾತಿಯನ್ನು ವಿರೋಧಿಸಿದರು, ಇದು ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ನಾವು ಮರೆಯುವಂತಿಲ್ಲ.

ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ನೀಡುವುದಾಗಿ ಘೋಷಿಸಿದ ಶಿವಸೇನಾ ಶಾಸಕ
ಸಂಜಯ್ ಗಾಯಕ್ವಾಡ್
Follow us
ರಶ್ಮಿ ಕಲ್ಲಕಟ್ಟ
|

Updated on: Sep 16, 2024 | 4:44 PM

ದೆಹಲಿ ಸೆಪ್ಟೆಂಬರ್ 16: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ನಾಲಿಗೆಯನ್ನು “ಕತ್ತರಿಸಿದ”ವರಿಗೆ ₹ 11 ಲಕ್ಷ ನೀಡುವುದಾಗಿ ಶಿವಸೇನಾ  (ಶಿಂಧೆ ಬಣ) ಶಾಸಕ ಸಂಜಯ್ ಗಾಯಕ್ವಾಡ್  ಸೋಮವಾರ  ಕಿಡಿ ಕಾರಿದ್ದಾರೆ. ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳ ಬಗ್ಗೆ ಗಾಯಕ್ವಾಡ್ ಈ ರೀತಿ ಗುಡುಗಿದ್ದಾರೆ. ರಾಹುಲ್ ಗಾಂಧಿ ಅವರು ವಿದೇಶದಲ್ಲಿದ್ದಾಗ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಮುಗಿಸಲು ಬಯಸುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಬಯಲು ಮಾಡಿದೆ.ಇತ್ತೀಚಿನ ಅಮೆರಿಕ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ್ದರು. ಇದು ಮೀಸಲಾತಿಯನ್ನು ಅಂತರ್ಗತವಾಗಿ ವಿರೋಧಿಸುವ ಮನಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ ₹11 ಲಕ್ಷ ಬಹುಮಾನ ನೀಡುತ್ತೇನೆ ಎಂದು ಗಾಯಕ್ವಾಡ್ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ವಿಡಿಯೊದಲ್ಲಿದೆ.

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು “ಜನರಿಗೆ ಮಾಡುವ ದೊಡ್ಡ ವಿಶ್ವಾಸಘಾತುಕತನ” ಎಂದು ಕರೆದ ಶಿವಸೇನಾ ಶಾಸಕ, “ಮರಾಠರು, ಧಂಗಾರ್‌ಗಳು ಮತ್ತು ಒಬಿಸಿಗಳಂತಹ ಸಮುದಾಯಗಳು ಮೀಸಲಾತಿಗಾಗಿ ಹೋರಾಡುತ್ತಿವೆ ಆದರೆ ಅದಕ್ಕೂ ಮೊದಲು, ಗಾಂಧಿ ಅದರ ಪ್ರಯೋಜನಗಳನ್ನು ಕೊನೆಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ”

ಗಾಯಕ್ವಾಡ್ ಹೇಳಿಕೆಯ ವಿಡಿಯೊ

“ರಾಹುಲ್ ಗಾಂಧಿಯವರು ಸಂವಿಧಾನದ ಪುಸ್ತಕವನ್ನು ತೋರಿಸುತ್ತಿದ್ದರು ಮತ್ತು ಬಿಜೆಪಿ ಅದನ್ನು ಬದಲಾಯಿಸುತ್ತದೆ ಎಂದು ನಕಲಿ ನಿರೂಪಣೆಯನ್ನು ಹರಡುತ್ತಿದ್ದರು. ಆದರೆ ದೇಶವನ್ನು 400 ವರ್ಷ ಹಿಂದಕ್ಕೆ ಕೊಂಡೊಯ್ಯುವ ಯೋಜನೆ ಕಾಂಗ್ರೆಸ್‌ನದ್ದು. ಒಂದೆಡೆ, ಮಹಾರಾಷ್ಟ್ರದಲ್ಲಿ ಮೀಸಲಾತಿಯ ಬೇಡಿಕೆಗಳು ಹೆಚ್ಚುತ್ತಿವೆ. ಅಲ್ಲಿ ರಾಹುಲ್ ಗಾಂಧಿ ದೇಶದಲ್ಲಿ ಮೀಸಲಾತಿಯನ್ನು ಕೊನೆಗೊಳಿಸುವ ಹೇಳಿಕೆಯನ್ನು ನೀಡಿದರು”ಎಂದಿದ್ದಾರೆ ಗಾಯಕ್ವಾಡ್.

ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ

ರಾಹುಲ್ ಗಾಂಧಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರು ಶಿವಸೇನಾ ಶಾಸಕರ ಹೇಳಿಕೆಯನ್ನು “ಅಸಂಬದ್ಧ” ಎಂದಿದ್ದು ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

“ಇಂತಹ ಟೀಕೆಗಳನ್ನು ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಇಲ್ಲದಿದ್ದರೆ, ಮಹಾರಾಷ್ಟ್ರದ ಸಾರ್ವಜನಿಕರು ಮುಂದಿನ ದಿನಗಳಲ್ಲಿ ನಿಮ್ಮ ಸ್ಥಾನವನ್ನು ತೋರಿಸುತ್ತಾರೆ” ಎಂದಿದ್ದಾರೆ ವಡೆತ್ತಿವಾರ್.

ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಮಾತನಾಡಿ, ಸಂಜಯ್ ಗಾಯಕ್ವಾಡ್ ಸಮಾಜ ಮತ್ತು ರಾಜಕೀಯದಲ್ಲಿ ಬದುಕಲು ಅರ್ಹರಲ್ಲ. ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರು ಗಾಯಕ್ವಾಡ್ ವಿರುದ್ಧ ಅಪರಾಧಿ ನರಹತ್ಯೆಯ ಆರೋಪವನ್ನು ಹೊರಿಸುತ್ತಾರೆಯೇ ಎಂದು ನಾವು ನೋಡಬೇಕಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಎಂಎಲ್ಸಿ ಭಾಯಿ ಜಗತಾಪ್ ಅವರು “ಇವರು ರಾಜ್ಯದ ರಾಜಕೀಯವನ್ನು ಹಾಳು ಮಾಡಿದ್ದಾರೆ” ಎಂದು ಹೇಳಿ ಗಾಯಕ್ವಾಡ್ ಹೇಳಿಕೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಬೆಳಿಗ್ಗೆ ಕಾಶಿ, ಮಧ್ಯಾಹ್ನ ಭುವನೇಶ್ವರ, ಸಂಜೆ ನಾಗ್ಪುರ: ಹುಟ್ಟುಹಬ್ಬದಂದು ಮೋದಿ ಭಾಗವಹಿಸುವ ಕಾರ್ಯಕ್ರಮಗಳು ಹೀಗಿವೆ

ಗಾಯಕ್ವಾಡ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

ಗಾಯಕ್ವಾಡ್ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಶಿವಸೇನಾ ಶಾಸಕರ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಅಥವಾ ಅನುಮೋದಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ.  “ಆದಾಗ್ಯೂ, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮೀಸಲಾತಿಯನ್ನು ವಿರೋಧಿಸಿದರು, ಇದು ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ನಾವು ಮರೆಯುವಂತಿಲ್ಲ. ಮೀಸಲಾತಿ ನೀಡುವುದು ಎಂದರೆ ಮೂರ್ಖರನ್ನು ಬೆಂಬಲಿಸುವುದು ಎಂದು ರಾಜೀವ್ ಗಾಂಧಿ ಹೇಳಿದ್ದರು. ಈಗ ರಾಹುಲ್ ಗಾಂಧಿ ಅವರು ಮೀಸಲಾತಿಯನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ. ನಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಸಂವೇದನಾಶೀಲಗೊಳಿಸುತ್ತೇವೆ. ನೆಹರು, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಹೇಳಿಕೆ ಬಗ್ಗೆ ಅವರಿಗೆ ತಿಳಿಸುತ್ತೇವೆ. ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಜ್ ಕೂಡ ಇದರ ಬಗ್ಗೆ ಯೋಚಿಸಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು