ಅನರ್ಹತೆ ವಿಚಾರ: ಸ್ಪೀಕರ್, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಬಾಂಬೆ ಹೈಕೋರ್ಟ್ ನೋಟಿಸ್
ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಹಾಗೂ ಉದ್ಧವ್ ಠಾಕ್ರೆ ಬಣದ 14 ಶಾಸಕರ ವಿರುದ್ಧ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ. ಉದ್ಧವ್ ಠಾಕ್ರೆ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರವನ್ನು ಏಕನಾಥ್ ಶಿಂಧೆ ಬಣದ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಹಾಗೂ ಉದ್ಧವ್ ಠಾಕ್ರೆ(Uddhav Thackeray) ಬಣದ 14 ಶಾಸಕರ ವಿರುದ್ಧ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ. ಉದ್ಧವ್ ಠಾಕ್ರೆ ಬಣದ 14 ಶಾಸಕರನ್ನು ಅನರ್ಹಗೊಳಿಸದಿರುವ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರವನ್ನು ಏಕನಾಥ್ ಶಿಂಧೆ(Eknath Shinde) ಬಣದ ಮುಖ್ಯ ಸಚೇತಕ ಭರತ್ ಗೊಗವಾಲೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಈ ಸಂಬಂಧ ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನ್ಯಾಯಾಲಯ ಬುಧವಾರ ನೋಟಿಸ್ ಜಾರಿ ಮಾಡಿದೆ. ಪೀಠವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ನಿಗದಿಪಡಿಸಿದೆ.
ಜೂನ್ 2022 ರಲ್ಲಿ ವಿಭಜನೆಯಾದ ನಂತರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣವನ್ನು ನಿಜವಾದ ಶಿವಸೇನೆ ಎಂದು ಘೋಷಿಸಿದ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಎರಡೂ ಬಣಗಳು ಅನರ್ಹತೆಗೆ ಆಗ್ರಹಿಸಿದ್ದವು, 2022ರಲ್ಲಿ ಪಕ್ಷ ಇಬ್ಭಾಗವಾದ ನಂತರ ಪಕ್ಷಾಂತರ ನಿಷೇಧ ಕಾಯ್ದೆಯಡಿ ಪರಸ್ಪರ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಬೇಡಿಕೆ ಇತ್ತು. ಶಿಂಧೆ ಸೇರಿದಂತೆ ಆಡಳಿತಾರೂಢ ಗುಂಪಿನ 16 ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಠಾಕ್ರೆ ಗುಂಪು ಮನವಿ ಮಾಡಿತ್ತು.
ಮತ್ತಷ್ಟು ಓದಿ: ಶಿಂಧೆ ಬಣವೇ ನಿಜವಾದ ಶಿವಸೇನಾ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆಹೋದ ಉದ್ಧವ್ ಬಣ
ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಶಿಂಧೆ ಅವರು ಉದ್ಧವ್ ಠಾಕ್ರೆ ಬಣದ 14 ಶಾಸಕರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿದ್ದಾರೆ. ಆದಾಗ್ಯೂ, ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಜನವರಿ 10 ರಂದು ತಮ್ಮ ತೀರ್ಪಿನಲ್ಲಿ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳನ್ನು ತಿರಸ್ಕರಿಸಿದ್ದರು.
ನ್ಯಾಯಮೂರ್ತಿ ಗಿರೀಶ್ ಕುಲಕರ್ಣಿ ಮತ್ತು ನ್ಯಾಯಮೂರ್ತಿ ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠವು ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಯ ಬಗ್ಗೆ ತಮ್ಮ ಅಫಿಡವಿಟ್ ಸಲ್ಲಿಸಲು ಎಲ್ಲಾ ಪ್ರತಿವಾದಿಗಳಿಗೆ ಸೂಚಿಸಿದೆ.
ಜುಲೈ 4, 2022 ರಂದು ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ಶಿಂಧೆ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಎಲ್ಲಾ ಶಿವಸೇನೆ ಸದಸ್ಯರಿಗೆ ಜುಲೈ 3, 2022 ರಂದು ವಿಪ್ ನೀಡಿದ್ದಾಗಿ ಗೋಗವಾಲೆ ಅರ್ಜಿಯಲ್ಲಿ ತಿಳಿಸಿದ್ದಾರೆ.
ಆದರೆ, 14 ಉದ್ಧವ್ ಠಾಕ್ರೆ ಶಾಸಕರು ವಿಪ್ ಉಲ್ಲಂಘಿಸಿದ್ದು ಮಾತ್ರವಲ್ಲದೆ ಶಿವಸೇನಾ ರಾಜಕೀಯ ಪಕ್ಷದ ಸದಸ್ಯತ್ವವನ್ನೂ ತೊರೆದಿದ್ದಾರೆ. ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಒತ್ತಾಯಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ