ಅಮಿತ್ ಶಾ ಗೃಹ ಸಚಿವರಾಗಿದ್ದ ಅವಧಿಯಲ್ಲೇ ಅತೀ ಹೆಚ್ಚು ಭದ್ರತಾ ಸಿಬ್ಬಂದಿ, ನಾಗರಿಕರ ಹತ್ಯೆಯಾಗಿದ್ದು: ಸಂಜಯ್ ರಾವತ್

ಮಣಿಪುರ ಮುಖ್ಯಮಂತ್ರಿ ಬೆಂಗಾವಲು ಪಡೆಯ ಮೇಲೆ ನಕ್ಸಲರು ದಾಳಿ ಮಾಡಿದ್ದಾರೆ. ಮೋದಿ ಸರ್ಕಾರದಲ್ಲಿ ಮತ್ತೊಮ್ಮೆ ಗೃಹ ಸಚಿವರಾಗಿರುವ ಅಮಿತ್ ಶಾ ಅವರಿಂದ ದೇಶವು ಅಪಾಯದಲ್ಲಿದೆ. ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿರುವುದರಿಂದ ಅವರು ಅಮಿತ್ ಶಾ ರಾಜೀನಾಮೆ  ನೀಡುವಂತೆ ಒತ್ತಾಯಿಸಬೇಕು ಎಂದಿದ್ದಾರೆ ರಾವತ್.

ಅಮಿತ್ ಶಾ ಗೃಹ ಸಚಿವರಾಗಿದ್ದ ಅವಧಿಯಲ್ಲೇ ಅತೀ ಹೆಚ್ಚು ಭದ್ರತಾ ಸಿಬ್ಬಂದಿ, ನಾಗರಿಕರ ಹತ್ಯೆಯಾಗಿದ್ದು: ಸಂಜಯ್ ರಾವತ್
ಸಂಜಯ್ ರಾವತ್
Follow us
|

Updated on: Jun 12, 2024 | 8:37 PM

ಮುಂಬೈ ಜೂನ್ 12: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and kashmir) ಭಯೋತ್ಪಾದಕ ದಾಳಿ ಬಗ್ಗೆ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ (Sanjay Raut)ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ನಾಯಕ “ಪ್ರತಿಪಕ್ಷಗಳನ್ನು ನಾಶಮಾಡುವಲ್ಲಿ ನಿರತರಾಗಿದ್ದಾರೆ” ಎಂದು ಆರೋಪಿಸಿದ ರಾವತ್, ಶಾ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ  ಭದ್ರತಾ ಪಡೆ ಸಿಬ್ಬಂದಿ ಮತ್ತು ನಾಗರಿಕರ ಹತ್ಯೆಯಾಗಿದೆ ಎಂದಿದ್ದಾರೆ.

ಅಮಿತ್ ಶಾ ಅವರ ಅಧಿಕಾರಾವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿ ಹೆಚ್ಚು ಭದ್ರತಾ ಪಡೆಗಳು ಮತ್ತು ನಾಗರಿಕರು ಕೊಲ್ಲಲ್ಪಟ್ಟರು. ಅವರು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸುವಾಗ, 10 ಜನರ ಹತ್ಯೆಯಾಗಿದೆ. ಇಂದು ಮತ್ತೆ, ಸಿಆರ್‌ಪಿಎಫ್ ಯೋಧನ ಹತ್ಯೆಯಾಗಿದೆ. ಅಮಿತ್ ಶಾ ಅವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ತಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡಿದರೆ, ಇದು ದೇಶಕ್ಕೆ ಒಳ್ಳೆಯದು ಎಂದು ರಾವತ್ ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಬೆಂಗಾವಲು ಪಡೆಯ ಮೇಲೆ ನಕ್ಸಲರು ದಾಳಿ ಮಾಡಿದ್ದಾರೆ. ಮೋದಿ ಸರ್ಕಾರದಲ್ಲಿ ಮತ್ತೊಮ್ಮೆ ಗೃಹ ಸಚಿವರಾಗಿರುವ ಅಮಿತ್ ಶಾ ಅವರಿಂದ ದೇಶವು ಅಪಾಯದಲ್ಲಿದೆ. ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿರುವುದರಿಂದ ಅವರು ಅಮಿತ್ ಶಾ ರಾಜೀನಾಮೆ  ನೀಡುವಂತೆ ಒತ್ತಾಯಿಸಬೇಕು ಎಂದಿದ್ದಾರೆ ರಾವತ್.

ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದಾಳಿಗಳ ಬಗ್ಗೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದರು. ಜನರ ಹತ್ಯೆಯಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಯಾರು ಹೊಣೆ? “ನನಗೆ ದೇಶದ ಭವಿಷ್ಯದ ಬಗ್ಗೆ ಕಾಳಜಿ ಇದೆಯೇ ಹೊರತು ಎನ್‌ಡಿಎ ಸರ್ಕಾರದ ಭವಿಷ್ಯದ ಬಗ್ಗೆ ಅಲ್ಲ” ಎಂದು ಠಾಕ್ರೆ ಹೇಳಿದ್ದಾರೆ.

ಭಾನುವಾರ, ಭಯೋತ್ಪಾದಕರು ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಮೇಲೆ ದಾಳಿ ಮಾಡಿದ್ದು, ಅದು ರಸ್ತೆಯಿಂದ ಆಚೆ ಬಂದು ಆಳವಾದ ಕಂದರಕ್ಕೆ ಬಿದ್ದಿತು. ಇದರಲ್ಲಿ ಒಂಬತ್ತು ಮಂದಿ ಸಾವಿಗೀಡಾಗಿದ್ದು ಮತ್ತು 41 ಮಂದಿ ಗಾಯಗೊಂಡರು. ಎರಡು ದಿನಗಳ ನಂತರ, ದೋಡಾದಲ್ಲಿನ ಜಂಟಿ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದರು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡರು.

ಅದೇ ರಾತ್ರಿ, ಹಿರಾನಗರದ ಸೈದಾ ಸುಖಲ್ ಗ್ರಾಮದ ಮನೆಯ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಕಥುವಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಒಬ್ಬ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದು, ಒಬ್ಬ ಭಯೋತ್ಪಾದಕನ ಹತ್ಯೆಯಾಗಿದೆ.

ಇದನ್ನೂ ಓದಿ: Kathua Terrorists Encounter: ಜಮ್ಮು ಕಾಶ್ಮೀರದ ಕಥುವಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌

ದಾಳಿಯ ಹಿಂದೆ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕೈವಾಡವಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ರಿಯಾಸಿಯಲ್ಲಿ ನಡೆದ ದಾಳಿಯ ಹಿಂದೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಕೈವಾಡವಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ದಾಳಿಯ ತನಿಖೆಗಾಗಿ ಜೆ-ಕೆ ಪೊಲೀಸರು 11 ತಂಡಗಳನ್ನು ರಚಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ