AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು.

ಮುಂಬೈ ವಿಮಾನ ನಿಲ್ದಾಣದ ಬಳಿಯಿದ್ದ ‘ಅದಾನಿ ಏರ್​ಪೋರ್ಟ್’ ಸೂಚನಾ ಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು..
ನಾಮಫಲಕ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು
TV9 Web
| Edited By: |

Updated on: Aug 02, 2021 | 7:07 PM

Share

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Chhatrapati Shivaji Maharaj International Airport) ದ ನಿಯಂತ್ರಣಾ ಹಕ್ಕನ್ನು ಜುಲೈನಲ್ಲಿ ಅದಾನಿ ಗ್ರೂಪ್​ ಪಡೆದಿದ್ದು ಗೊತ್ತೇ ಇದೆ. ಹಾಗೆ ನಿಯಂತ್ರಣಕ್ಕೆ ಪಡೆದ ಬಳಿಕ ಏರ್​ಪೋರ್ಟ್ ಬಳಿಯೇ ಇರುವ ಶಿವಾಜಿ ಪ್ರತಿಮೆಯ ಸಮೀಪ ಅದಾನಿ ಏರ್​ಪೋರ್ಟ್(Adani Airport) ಎಂಬ ನಿಯಾನ್​ ಸೂಚನಾ ಫಲಕವನ್ನು ಹಾಕಲಾಗಿತ್ತು. ಅದನ್ನೀಗ ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಕೂಡ ವೈರಲ್​ ಆಗಿದೆ.

ಅದಾನಿ ಏರ್​ಪೋರ್ಟ್​ ಸೂಚನಾ ಫಲಕವನ್ನು ನಾಶ ಮಾಡಿದ ಶಿವಸೇನೆ ಕಾರ್ಯಕರ್ತರು ನಂತರ ದಕ್ಷಿಣ ಎಕ್ಸ್​ಪ್ರೆಸ್​ ಹೆದ್ದಾರಿಗೆ ಬಂದಿದ್ದರಿಂದ ಅಲ್ಲಿ, ಕೆಲಹೊತ್ತು ಟ್ರಾಫಿಕ್​ ಉಂಟಾಗಿತ್ತು. ನಗರದ ಉತ್ತರ-ದಕ್ಷಿಣ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಹಾಗೇ ಈ ಕೆಲಸದಲ್ಲಿ ಭಾಗಿಯಾದವರಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿವಿಕೆ ಗ್ರೂಪ್​​ ನಿಯಂತ್ರಣದಲ್ಲಿದ್ದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜುಲೈನಲ್ಲಿ ಅದಾನಿ ಗ್ರೂಪ್​ನ ಪಾಲಾಗಿದೆ. ಅದಕ್ಕೂ ಮೊದಲು 2020ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯೂ ಅದಾನಿ ಗ್ರೂಪ್​ ಕೈಸೇರಿತ್ತು. ಮುಂಬೈ ವಿಮಾನ ನಿಲ್ದಾಣಕ್ಕೆ ಅದಾನಿ ಏರ್​ಪೋರ್ಟ್ ಎಂದು ಹೆಸರಿಡುವುದನ್ನು ಶಿವಸೇನೆ ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ.

ಇದನ್ನೂ ಓದಿ: Bidar: ನಕಲಿ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ; 1 ಲಕ್ಷದ 37 ಸಾವಿರ ರೂ., ಲ್ಯಾಪ್​ಟಾಪ್, ಪ್ರಿಂಟರ್ ವಶಕ್ಕೆ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು