AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Raut: ನಾನು ಸತ್ತರೂ ಸರಿ; ಇಡಿ ದಾಳಿಯ ನಂತರ ಬಾಳಾ ಠಾಕ್ರೆ ಮೇಲೆ ಪ್ರಮಾಣ ಮಾಡಿದ ಶಿವಸೇನೆ ನಾಯಕ ಸಂಜಯ್ ರಾವುತ್

ED Raid" ‘ಬಾಳಾಸಾಹೇಬರು ಹೋರಾಡುವುದು ಕಲಿಸಿದ್ದಾರೆ. ನಾನು ನನ್ನ ಹೋರಾಟ ಮುಂದುವರಿಸುತ್ತೇನೆ. ಸತ್ತರೂ ಸರಿ, ಶರಣಾಗುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

Sanjay Raut: ನಾನು ಸತ್ತರೂ ಸರಿ; ಇಡಿ ದಾಳಿಯ ನಂತರ ಬಾಳಾ ಠಾಕ್ರೆ ಮೇಲೆ ಪ್ರಮಾಣ ಮಾಡಿದ ಶಿವಸೇನೆ ನಾಯಕ ಸಂಜಯ್ ರಾವುತ್
ಸಂಜಯ್ ರಾವುತ್Image Credit source: NDTV
TV9 Web
| Edited By: |

Updated on:Jul 31, 2022 | 10:22 AM

Share

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (Enforcement Directorate – ED) ಅಧಿಕಾರಿಗಳು ಭಾನುವಾರ ತಮ್ಮ ನಿವಾಸದಲ್ಲಿ ತಪಾಸಣೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ ಸಂಸದ ಸಂಜಯ್ ರಾವುತ್ (Sanjay Raut) ತಾವು ಏನೂ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂಬೈ ಮರುಅಭಿವೃದ್ಧಿಗೆ ಸಂಬಂಧಿಸಿದ ‘ಚಾಲ್’ ಯೋಜನೆಯ ಅವ್ಯವಹಾರ ಮತ್ತು ರಾವುತ್ ಅವರ ಪತ್ನಿಯ ಸಹಚರರು ನಡೆಸಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾವುತ್ ಅವರ ಮನೆಯ ಮೇಲೆ ದಾಳಿ ನಡೆಸಿ, ಲೆಕ್ಕಪತ್ರಗಳಿಗಾಗಿ ಹುಡುಕಾಡುತ್ತಿದ್ದಾರೆ.

ಮರಾಠಿಯಲ್ಲಿ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರಾವುತ್, ಕೇಂದ್ರೀಯ ತನಿಖಾ ದಳಗಳು ಎಷ್ಟೇ ಕಿರುಕುಳ ನೀಡಿದರೂ ನಾನು ಶಿವಸೇನೆ ಬಿಡುವುದಿಲ್ಲ. ರಾಜಕೀಯ ಕಾರಣಗಳಿಗಾಗಿಯೇ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ‘ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಮಾಣ ಮಾಡಿ ಹೇಳುತ್ತಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ. ಬಾಳಾಸಾಹೇಬರು ನನಗೆ ಹೋರಾಡಲು ಕಲಿಸಿದ್ದಾರೆ. ಶಿವಸೇನೆಗಾಗಿ ನಾನು ನನ್ನ ಹೋರಾಟ ಮುಂದುವರಿಸುತ್ತೇನೆ. ಸತ್ತರೂ ಸರಿ, ಶರಣಾಗುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ಜುಲೈ 1ರಂದು ರಾವುತ್ ಅವರನ್ನು ಸತತ 10 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತ್ತು. ಈ ವೇಳೆ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (Prevention of Money Laundering Act – PMLA) ಕ್ರಿಮಿನಲ್ ಸೆಕ್ಷನ್​ಗಳ ಅಡಿಯಲ್ಲಿ ದಾಖಲಿಸಲಾಗಿತ್ತು.

ಕಳೆದ ಏಪ್ರಿಲ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯವು ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್ ಅವರಿಗೆ ಸೇರಿದ್ದ ₹ 11.15 ಕೋಟಿ ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದರಲ್ಲಿ ದಾದರ್​ನಲ್ಲಿರುವ ಫ್ಲಾಟ್​, ಕಿಹಿಂಮ್ ಬೀಚ್​ನಲ್ಲಿದ್ದ 9 ನಿವೇಶನಗಳು ಸೇರಿದ್ದವು. ವರ್ಷಾ ರಾವುತ್ ಅವರು ಪ್ರವೀಣ್ ರಾವುತ್ ಮತ್ತು ಸುಜಿತ್ ಪಟ್ಕಾರ್ ಅವರೊಂದಿಗೆ ಹೊಂದಿರುವ ವ್ಯಾಪಾರ ಮತ್ತು ಇತರ ಸಂಪರ್ಕಗಳ ಬಗ್ಗೆ ಸಂಜಯ್ ರಾವುತ್ ಅವರನ್ನು ಪ್ರಶ್ನಿಸಲು ತನಿಖಾದಳವು ಪ್ರಯತ್ನಿಸುತ್ತಿದೆ.

Published On - 10:18 am, Sun, 31 July 22

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?