ಶಿವಾಜಿ ಪ್ರತಿಮೆ ಉರುಳಿ ಬಿದ್ದಿದ್ದಕ್ಕೆ ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು: ರಾಹುಲ್ ಗಾಂಧಿ

ಕಾಂಗ್ರೆಸ್ ಸಿದ್ಧಾಂತ ಮಹಾರಾಷ್ಟ್ರದ ಡಿಎನ್ ಎಯಲ್ಲಿದೆ. ಹಿಂದೆ ರಾಜಕೀಯ ಇತ್ತು, ಆದರೆ ಇಂದು ಭಾರತದಲ್ಲಿ ಸೈದ್ಧಾಂತಿಕ ಹೋರಾಟ ನಡೆಯುತ್ತಿದೆ. ನಾವು ಸಾಮಾಜಿಕ ಪ್ರಗತಿಯನ್ನು ಬಯಸುತ್ತೇವೆ ಆದರೆ ಅವರು (ಬಿಜೆಪಿ) ಆಯ್ದ ಕೆಲವರು ಮಾತ್ರ ಎಲ್ಲಾ ಪ್ರಯೋಜನಗಳನ್ನು ಪಡೆಯಬೇಕೆಂದು ಬಯಸುತ್ತಾರೆ ಎಂದು ರಾಹುಲ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಶಿವಾಜಿ ಪ್ರತಿಮೆ ಉರುಳಿ ಬಿದ್ದಿದ್ದಕ್ಕೆ ಮೋದಿ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
|

Updated on: Sep 05, 2024 | 5:59 PM

ಮುಂಬೈ ಸೆಪ್ಟೆಂಬರ್ 05: ಮಹಾರಾಷ್ಟ್ರದ ಮಾಲ್ವಾನ್‌ನಲ್ಲಿ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಹಾರಾಷ್ಟ್ರದ (maharashtra) ಪ್ರತಿಯೊಬ್ಬ ವ್ಯಕ್ತಿಯ ಕ್ಷಮೆಯಾಚಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಗುರುವಾರ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿತ್ತು. ಇದಾದ ನಂತರ, ನರೇಂದ್ರ ಮೋದಿ ಅವರು ‘ನಾನು ಶಿವಾಜಿ ಮಹಾರಾಜರಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ಹೇಳಿದರು. ಆದರೆ, ನರೇಂದ್ರ ಮೋದಿ ಅವರು ಶಿವಾಜಿ ಮಹಾರಾಜರನ್ನು ಅವಮಾನಿಸಿದ್ದಾರೆ. ಅವರು ಶಿವಾಜಿ ಮಹಾರಾಜರ ಬಳಿ ಮಾತ್ರವಲ್ಲದೆ ಮಹಾರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಗೂ ಕ್ಷಮೆ ಕೇಳಬೇಕು ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಹಲವಾರು ಸಚಿವ ಸ್ಥಾನಗಳನ್ನು ಅಲಂಕರಿಸಿದ್ದ ದಿವಂಗತ ಕಾಂಗ್ರೆಸ್ ನಾಯಕ ಪತಂಗರಾವ್ ಕದಂ ಅವರ ಜೀವಮಾನದ ಪ್ರತಿಮೆಯನ್ನು ಅನಾವರಣಗೊಳಿಸಿದ ಸಾಂಗ್ಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಗಾಂಧಿ ಈ ಬೇಡಿಕೆಯನ್ನು ಮುಂದಿಟ್ಟರು. “… ಕದಮ್ ಜಿ (ಕಾಂಗ್ರೆಸ್ ನ ದಿವಂಗತ ಸಚಿವ ಪತಂಗರಾವ್ ಕದಂ) ಅವರ ಪ್ರತಿಮೆ ಇನ್ನೂ 50-70 ವರ್ಷಗಳ ನಂತರವೂ ಇಲ್ಲಿರುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ ರಾಹುಲ್.

ಕಾಂಗ್ರೆಸ್ ಸಿದ್ಧಾಂತ ಮಹಾರಾಷ್ಟ್ರದ ಡಿಎನ್ ಎಯಲ್ಲಿದೆ. ಹಿಂದೆ ರಾಜಕೀಯ ಇತ್ತು, ಆದರೆ ಇಂದು ಭಾರತದಲ್ಲಿ ಸೈದ್ಧಾಂತಿಕ ಹೋರಾಟ ನಡೆಯುತ್ತಿದೆ. ನಾವು ಸಾಮಾಜಿಕ ಪ್ರಗತಿಯನ್ನು ಬಯಸುತ್ತೇವೆ ಆದರೆ ಅವರು (ಬಿಜೆಪಿ) ಆಯ್ದ ಕೆಲವರು ಮಾತ್ರ ಎಲ್ಲಾ ಪ್ರಯೋಜನಗಳನ್ನು ಪಡೆಯಬೇಕೆಂದು ಬಯಸುತ್ತಾರೆ ಎಂದು ರಾಹುಲ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಶಿವಾಜಿ ಪ್ರತಿಮೆ ಕುಸಿತ

ರಾಜ್‌ಕೋಟ್ ಕೋಟೆಯಲ್ಲಿರುವ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಪ್ರತಿಮೆ ಆಗಸ್ಟ್ 26 ರಂದು ಬಿರುಗಾಳಿ ಬೀಸಿದ ಸಮಯದಲ್ಲಿ ಉರುಳಿ ಬಿದ್ದಿತು, ಇದು ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಹಾರಾಷ್ಟ್ರದಲ್ಲಿ ಭಾರಿ ರಾಜಕೀಯ ಗದ್ದಲವನ್ನು ಹುಟ್ಟುಹಾಕಿತು.

ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ), ಕಳಪೆ ಗುಣಮಟ್ಟದ ಪ್ರತಿಮೆಯನ್ನು ಸ್ಥಾಪಿಸಿದ್ದಕ್ಕಾಗಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವನ್ನು ಟೀಕಿಸಿತು ಮತ್ತು ಅದು ಭ್ರಷ್ಟಾಚಾರ ಎಂದು ಆರೋಪಿಸಿತು. ಮೋದಿ ಅವರು ಡಿಸೆಂಬರ್ 2023 ರಲ್ಲಿ ನೌಕಾಪಡೆಯ ದಿನದಂದು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

ಇದನ್ನೂ ಓದಿ: Arvind Kejriwal bail: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಬುಧವಾರ, ಈ ಪ್ರಕರಣದಲ್ಲಿ ವಾಟೆಂಡ್ ಆಗಿದ್ದ 24 ವರ್ಷದ ಶಿಲ್ಪಿ-ಗುತ್ತಿಗೆದಾರ ಜಯದೀಪ್ ಆಪ್ಟೆ ಅವರನ್ನು ಮಹಾರಾಷ್ಟ್ರ ಪೊಲೀಸರು ಕಲ್ಯಾಣ್‌ನಿಂದ ಬಂಧಿಸಿದ್ದಾರೆ.

ಕಳೆದ ವಾರ, ಪಾಲ್ಘರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋದಿ ಅವರು ಘಟನೆಗೆ ಕ್ಷಮೆಯಾಚಿಸಿದರು. “ನನಗೆ ಮತ್ತು ನನ್ನ ಸಹೋದ್ಯೋಗಿಗಳಿಗೆ, ಛತ್ರಪತಿ ಶಿವಾಜಿ ಮಹಾರಾಜರು ಒಂದು ಹೆಸರು ಅಥವಾ ರಾಜನಲ್ಲ, ಆದರೆ ಪೂಜ್ಯ ದೇವತೆ. ಇಂದು, ನಾನು ನನ್ನ ಪೂಜ್ಯ ದೇವತೆಯ ಪಾದಗಳಿಗೆ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ಛತ್ರಪತಿ ಶಿವಾಜಿ ಮಹಾರಾಜರನ್ನು ಆರಾಧಿಸುವ ಎಲ್ಲರಲ್ಲೂ ನಾನು ಕ್ಷಮೆ ಕೇಳುತ್ತೇನೆ. ಅವರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ನನಗೆ ತಿಳಿದಿದೆ ”ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?