ಮುಂಬೈ: ಕ್ಯಾನ್ಸರ್​ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದು ಹೋದ ಮೊಮ್ಮಗ

ಕ್ಯಾನ್ಸರ್​ನಿಂದ ಬಳಲುತ್ತಿರುವ ಅಜ್ಜಿಯನ್ನು ಕಸದ ರಾಶಿಯಲ್ಲಿ ಮೊಮ್ಮಗನೊಬ್ಬ ಎಸೆದು ಹೋಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಯಶೋಧಾ ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಗ್ಗೆ ಆರ್​ ಕಾಲೋನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ಮಹಿಳೆಯೊಬ್ಬರು ದುರ್ಬಲ ಸ್ಥಿತಿಯಲ್ಲಿ ಮಲಗಿರುವುದನ್ನು ಅಲ್ಲೇ ಹೋಗುತ್ತಿದ್ದವರ್ಯಾರೋ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಹಿಳೆಯ ಕುಟುಂಬದವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಮುಂಬೈ:  ಕ್ಯಾನ್ಸರ್​ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದು ಹೋದ ಮೊಮ್ಮಗ
ಕ್ಯಾನ್ಸರ್ ರೋಗಿ

Updated on: Jun 24, 2025 | 10:28 AM

ಮುಂಬೈ, ಜೂನ್ 24: ಮಾನವೀಯತೆ ಎಲ್ಲಿದೆ? ಇನ್ನೆಂಥಾ ಕ್ರೂರಿ ಇರಬೇಕು ಆತ.  ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್​​(Cancer) ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್ ಅವರನ್ನು ಸ್ವಂತ ಮೊಮ್ಮಗನೇ ಕಸದ ರಾಶಿಯಲ್ಲಿ ಎಸೆದಿದ್ದಾನೆ.

ಯಶೋಧಾ ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಗ್ಗೆ ಆರ್​ ಕಾಲೋನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ಮಹಿಳೆಯೊಬ್ಬರು ದುರ್ಬಲ ಸ್ಥಿತಿಯಲ್ಲಿ ಮಲಗಿರುವುದನ್ನು ಅಲ್ಲೇ ಹೋಗುತ್ತಿದ್ದವರ್ಯಾರೋ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಹಿಳೆಯ ಕುಟುಂಬದವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಬೆಳಗ್ಗೆ ಮಹಿಳೆ ಪತ್ತೆಯಾಗಿದ್ದರೂ ಸಂಜೆ 5.30ರ ಹೊತ್ತಿಗೆ ಮಾತ್ರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಯಿತು. ಮಹಿಳೆ ತನ್ನ ಕುಟುಂಬ ಸದಸ್ಯರ ಎರಡು ನಿವಾಸಗಳ ವಿಳಾಸವನ್ನು ಹಂಚಿಕೊಂಡಿದ್ದಾರೆ. ಒಂದು ಮಲಾಡ್‌ನಲ್ಲಿ ಮತ್ತು ಇನ್ನೊಂದು ಕಾಂಡಿವಲಿಯಲ್ಲಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಒಂದೆಡೆ ವಯಸ್ಸಾದ ತಾಯಿ, ಇನ್ನೊಂದೆಡೆ ಸಾಕಲಾಗದ ಸ್ಥಿತಿಯಲ್ಲಿ ಮಗ: ಕರಳು ಚುರ್ ಎನ್ನುತ್ತೆ

ಸಂಬಂಧಿಕರನ್ನು ಪತ್ತೆಹಚ್ಚಲು ಆಕೆಯ ಚಿತ್ರವನ್ನು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಂಚಿಕೊಳ್ಳಲಾಗಿದೆ. ಮೊಮ್ಮಗ ಈ ರೀತಿಯ ಅಮಾನವೀಯ ಕೆಲಸವನ್ನು ಏಕೆ ಮಾಡಿದನೆಂದು ಸ್ಪಷ್ಟವಾಗಿಲ್ಲ.

ಮಂಡ್ಯದಲ್ಲೊಂದು ಘಟನೆ
ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ.

ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವೃದ್ಧೆಯನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:26 am, Tue, 24 June 25