ಕ್ಷೌರಿಕನೊಬ್ಬ ತನ್ನ ಎಂಜಲು ಉಗುಳಿ ವ್ಯಕ್ತಿಗೆ ಮಸಾಜ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲರಿಗೂ ಆಘಾತ ತಂದಿದೆ. ಉತ್ತರ ಪ್ರದೇಶದ ಕನೌಜ್ನಲ್ಲಿ ಈ ಘಟನೆ ನಡೆದಿದೆ. ಸಲೂನ್ನಲ್ಲಿ ಕೆಲಸ ಮಾಡುವ ಕ್ಷೌರಿಕನೊಬ್ಬ ಗ್ರಾಹಕರೊಬ್ಬರಿಗೆ ಎಂಜಲಿನ ಮೂಲಕ ಮಸಾಜ್ ಮಾಡುತ್ತಿರುವ ವಿಡಿಯೋವನ್ನು ಅಲ್ಲಿರುವವರು ಚಿತ್ರಿಸಿದ್ದಾರೆ ಎನ್ನಲಾಗುತ್ತಿದೆ.
ಈ ವಿಡಿಯೋ ಸುಮಾರು 15ದಿನಗಳ ಹಳೆಯದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿ ಸಲೂನ್ ಬಾಗಿಲು ಹಾಕಿ ತಲೆಮರೆಸಿಕೊಂಡಿದ್ದಾನೆ.
ಕನ್ನೌಜ್ ಪೊಲೀಸರ ಪ್ರಕಾರ, ಈ ವೀಡಿಯೊ ನಗರದ ತಾಲ್ಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬ್ರಮೌ ಬಳಿ ಇರುವ ಸಲೂನ್ ಇದಾಗಿದೆ.
ಈ ವಿಡಿಯೋವನ್ನು 15 ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಸ್ವತಃ ತಾನೇ ವಿಡಿಯೋ ಮಾಡಿ ಹರಿಬಿಟ್ಟಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವೀಡಿಯೋಕ್ಕೆ ಈ ಭಾಗದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ಈ ಘಟನೆಯನ್ನು ಸ್ಪಿಟ್ ಜಿಹಾದ್ ಎಂದು ಟ್ಯಾಗ್ ಮಾಡಿದ್ದಾರೆ. ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಮತ್ತಷ್ಟು ಓದಿ: Viral Video: ಛೀ ಎಂಥಾ ಹೇಯ ಕೃತ್ಯವಿದು, ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಕ್ಷೌರಿಕ
ಈ ಘಟನೆಯ ಕುರಿತು ಎಸ್ಪಿ ಕನೌಜ್ ಅವರು ಪ್ರಕರಣದ ತನಿಖೆಯನ್ನು ತರಬೇತಿ ಸಿಒ ಕಪೂರ್ ಕುಮಾರ್ ಅವರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಲಕ್ನೋದಲ್ಲಿ ಇಂಥದ್ದೇ ಘಟನೆಯೊಂದು ನಡೆದಿತ್ತು, ಝೈದ್ ಎಂಬಾತ ಗ್ರಾಹಕರಿಗೆ ಎಂಜಲು ಉಗುಳಿ ಮಸಾಜ್ ಮಾಡಿದ ವಿಡಿಯೋ ವೈರಲ್ ಆಗಿತ್ತು, ಬಳಿಕ ಅವರನ್ನು ಬಂಧಿಸಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:26 pm, Wed, 7 August 24