AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿರ್ಜನ ಪ್ರದೇಶದಲ್ಲಿ ದಿವ್ಯಾಂಗ ಮಹಿಳೆಯನ್ನು ಬೈಕ್​​ನಲ್ಲಿ ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ

ದಿವ್ಯಾಂಗ ಮಹಿಳೆಯನ್ನು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳನ್ನು ಬೈಕ್​​ನಲ್ಲಿ ಬೆನ್ನಟ್ಟಿ ಬಂದಿದ್ದರು. ಆಕೆ ಕಷ್ಟ ಪಟ್ಟು ತಪ್ಪಿಸಿಕೊಂಡು ಓಡಲು ಪ್ರಯತ್ನಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿರ್ಜನ ರಸ್ತೆಯಲ್ಲಿ ದಿವ್ಯಾಂಗ ಮಹಿಳೆ ಅಸಹಾಯಕಳಾಗಿ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸಗಳಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.

Video: ನಿರ್ಜನ ಪ್ರದೇಶದಲ್ಲಿ ದಿವ್ಯಾಂಗ ಮಹಿಳೆಯನ್ನು ಬೈಕ್​​ನಲ್ಲಿ ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ
ಕ್ರೈಂ
ನಯನಾ ರಾಜೀವ್
|

Updated on: Aug 13, 2025 | 8:13 AM

Share

ಬಲರಾಂಪುರ, ಆಗಸ್ಟ್​ 13: ದಿವ್ಯಾಂಗ ಮಹಿಳೆಯನ್ನು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳನ್ನು ಬೈಕ್​​ನಲ್ಲಿ ಬೆನ್ನಟ್ಟಿ ಬಂದಿದ್ದರು. ಆಕೆ ಕಷ್ಟ ಪಟ್ಟು ತಪ್ಪಿಸಿಕೊಂಡು ಓಡಲು ಪ್ರಯತ್ನಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿರ್ಜನ ರಸ್ತೆಯಲ್ಲಿ ದಿವ್ಯಾಂಗ ಮಹಿಳೆ ಅಸಹಾಯಕಳಾಗಿ ಓಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸಗಳಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.

ಸೋಮವಾರ ಮಹಿಳೆ ತನ್ನ ಚಿಕ್ಕಪ್ಪನ ಮನೆಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮಹಿಳೆಯನ್ನು ತಡೆದು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಆಕೆಯ ಕುಟುಂಬ ಸದಸ್ಯರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿಯ ನಿವಾಸದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಮಹಿಳೆ ನಿರ್ಜನ ರಸ್ತೆಯಲ್ಲಿ ಓಡಿಹೋಗಿ ಹಿಂತಿರುಗಿ ನೋಡುತ್ತಿರುವುದನ್ನು ಕಾಣಬಹುದು, ಮೂರರಿಂದ ನಾಲ್ಕು ಬೈಕ್‌ಗಳಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅವಳನ್ನು ಬೆನ್ನಟ್ಟಿದ್ದಾರೆ.

ಮತ್ತಷ್ಟು ಓದಿ: Video: ಊರಿಗೆ ರಸ್ತೆಯಿಲ್ಲ ಎಂದು ಕೇಳಲು ಬಂದ ದಿವ್ಯಾಂಗನನ್ನು ಕಲೆಕ್ಟರ್ ಕಚೇರಿಯಿಂದ ಹೊರದಬ್ಬಿದ ಸಿಬ್ಬಂದಿ

ಮಹಿಳೆ ಮನೆಗೆ ಹಿಂತಿರುಗದಿದ್ದಾಗ, ಆಕೆಯ ಕುಟುಂಬ ಸದಸ್ಯರು ಅವಳನ್ನು ಹುಡುಕಲು ಪ್ರಾರಂಭಿಸಿದರು. ಕೊನೆಗೆ ಪೊಲೀಸ್ ಠಾಣೆ ಬಳಿಯ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಪ್ರಜ್ಞೆ ಮರಳಿ ಬಂದಾಗ, ಅತ್ಯಾಚಾರಕ್ಕೊಳಗಾದ ಮಹಿಳೆ ತನ್ನ ಮೇಲೆ ಬೈಕ್‌ನಲ್ಲಿದ್ದ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದಾಳೆ. ಪೊಲೀಸ್ ಠಾಣೆಯ ಬಳಿಯ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಆಕೆಯ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿತ್ತು.\

ಘಟನೆಯ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಈಗ ಸ್ಥಿರವಾಗಿದ್ದಾರೆ ಎಂದು ಹೇಳಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟ ನಂತರ ಎಎಸ್ಪಿ ಹೇಳಿದರು. ಅತ್ಯಾಚಾರ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹಿಡಿಯಲು ಶೋಧ ಆರಂಭಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್, ಎಸ್‌ಪಿ ಮತ್ತು ನ್ಯಾಯಮೂರ್ತಿಗಳು ಸೇರಿದಂತೆ ಉನ್ನತ ಅಧಿಕಾರಿಗಳ ನಿವಾಸಗಳು ಇರುವ ಸ್ಥಳದಲ್ಲಿ ಈ ಘಟನೆ ನಡೆದಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ