ತೆಲಂಗಾಣ: ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ, ಮಹಿಳೆ ಸಾವು
ನ್ಯಾಯಾಲಯದ ಕಟ್ಟಡದಿಂದ ಇಡೀ ಕುಟುಂಬವೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಹಿಳೆ ತಕ್ಷಣವೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದಕಿನ ಮಧ್ಯೆ ಹೋರಾಡುತ್ತಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಮೇಡಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಅವರ ಸ್ಥಿತಿ ಗಂಭೀರವಾಗಿದ್ದರಿಂದ, ವೈದ್ಯರು ಅವರನ್ನು ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕಳುಹಿಸಿದರು

ಮೇದಕ್, ಜೂನ್ 30: ಕುಟುಂಬವೊಂದು ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಪತಿ ಮತ್ತು ಇಬ್ಬರು ಮಕ್ಕಳು ಗಂಭೀರಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಮೇದಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಅವರ ಸ್ಥಿತಿ ಗಂಭೀರವಾಗಿದ್ದರಿಂದ, ವೈದ್ಯರು ಅವರನ್ನು ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕಳುಹಿಸಿದರು. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.
ರಮ್ಯಾ ಎಂಬ ಮಹಿಳೆ ರಾಮಯಂಪೇಟೆ ಮಂಡಲದ ಲಕ್ಷ್ಮಾಪುರ ಗ್ರಾಮದವರಾಗಿದ್ದು, ಅವರ ಪತಿ ನವೀನ್ ದೌಲತಾಬಾದ್ನವರು, ಇಬ್ಬರೂ ಪ್ರೇಮ ವಿವಾಹವಾಗಿದ್ದರು ಆದರೆ ಜಗಳಗಳಿಂದಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಳೆದ ವರ್ಷ, ನವೀನ್ ಲಕ್ಷ್ಮಪುರದಲ್ಲಿರುವ ರಮ್ಯಾ ಅವರ ಮನೆಯ ಮೇಲೆ ದೇಶೀಯ ಬಾಂಬ್ ಎಸೆದು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.
ರಾಮಯಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನವೀನ್‌ನನ್ನು ಜೈಲಿಗೆ ಕಳುಹಿಸಲಾಗಿತ್ತು. ಅಂದಿನಿಂದ ದಂಪತಿಗಳ ನಡುವೆ ಜಗಳ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ, ತನಿಖೆ ನಡೆಯುತ್ತಿದೆ. ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ವರದಿಯಾದ ಮತ್ತೊಂದು ಪ್ರಕರಣದಲ್ಲಿ, ವೈವಾಹಿಕ ಸಮಸ್ಯೆಗಳಿಂದಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ಓದಿ: Swetcha Votarkar: ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಇನ್ಸ್ಟಾಗ್ರಾಮ್ ಪೋಸ್ಟ್
ಮೃತರನ್ನು ಸುಭಾಷ್ (42), ಅವರ ಮಗ ರಿತಿಕ್ ಮರಿಯನ್ (13) ಮತ್ತು ಮಗಳು ಆರಾಧ್ಯ (9) ಎಂದು ಗುರುತಿಸಲಾಗಿದೆ. ಪತ್ನಿ ಮಂಜುಳಾ (35) ತಮ್ಮ ಪತಿ ಸುಭಾಷ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅನುಮಾನಿಸಿ ಪದೇ ಪದೇ ಜಗಳವಾಡುತ್ತಿದ್ದರು ಒಮ್ಮೆ ಜಗಳವಾಡಿ ಹೆತ್ತವರ ಮನೆಗೆ ಹೋಗಿದ್ದರು.
ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಬಾಗಿಲು ತೆಗೆದು ನೋಡಿದಾಗ ಸುಭಾಷ್ ಮತ್ತು ಅವರ ಇಬ್ಬರು ಮಕ್ಕಳ ಶವಗಳು ಕೊಳೆತ ಸ್ಥಿತಯಲ್ಲಿದ್ದವು. ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು.
ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




