AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ

ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಹಾಕಲಾಗಿತ್ತು. ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Shocking News: ಆಂಧ್ರಪ್ರದೇಶದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ 18 ನಾಯಿಗಳ ಹತ್ಯೆ
ಬೀದಿ ನಾಯಿ
TV9 Web
| Edited By: |

Updated on: Oct 17, 2022 | 8:14 AM

Share

ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಎಲೂರು ಜಿಲ್ಲೆಯಲ್ಲಿ ಶನಿವಾರ 18 ಬೀದಿನಾಯಿಗಳಿಗೆ (Dogs) ವಿಷ ನೀಡಿ ಕೊಂದು ಹಾಕಲಾಗಿದೆ. ಚೇಬ್ರೋಲೆ ಗ್ರಾಮದ ಮುಖಂಡರ ಆದೇಶದ ಮೇರೆಗೆ ಆ 18 ನಾಯಿಗಳಿಗೆ ವಿಷದ ಇಂಜೆಕ್ಷನ್ ನೀಡಿ ಸಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚೇಬ್ರೋಲೆ ಗ್ರಾಮದ ಸರಪಂಚ್ ಮತ್ತು ಕಾರ್ಯದರ್ಶಿ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಾಯಿಗಳ ಸಾವಿನ ನಂತರ ಗ್ರಾಮದ ಮುಖ್ಯಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ಪ್ರಾಣಿ ಹಕ್ಕುಗಳ ಗುಂಪುಗಳು ಕರೆ ನೀಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಎಲ್ಲ ನಾಯಿಗಳಿಗೂ ಮಾಸ್ಕ್​ ಕಡ್ಡಾಯ, ಪಿಟ್​ಬುಲ್ ಸೇರಿ ಮೂರು ನಾಯಿ ತಳಿಗಳಿಗೆ ನಿಷೇಧ

ಚೇಬ್ರೋಲೆ ಗ್ರಾಮದ ವಿವಿಧೆಡೆ ಬೀದಿ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿತ್ತು. ಈ ವಿಷಯ ತಿಳಿದು ಗ್ರಾಮಕ್ಕೆ ದೌಡಾಯಿಸಿದ ಪ್ರಾಣಿ ಪ್ರಿಯರು ಎಲ್ಲರನ್ನೂ ಈ ಬಗ್ಗೆ ವಿಚಾರಿಸಿದಾಗ ಗ್ರಾಮದ ಕಾರ್ಯದರ್ಶಿ ಹಾಗೂ ಇತರರ ಒತ್ತಾಯದ ಮೇರೆಗೆ ನಾಯಿಗಳಿಗೆ ವಿಷದ ಇಂಜೆಕ್ಷನ್ ಹಾಕಲಾಗಿದೆ ಎಂಬ ವಿಷಯ ಗೊತ್ತಾಗಿದೆ.

ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಹಾಕಲಾಗಿತ್ತು. ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ