AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಯುವಕನಿಂದ ಅತ್ಯಾಚಾರ!

ಮಧ್ಯಪ್ರದೇಶದಲ್ಲಿ ನಡೆದ ಶಾಕಿಂಗ್ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ. ಆಸ್ಪತ್ರೆಯ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ಯುವಕ ಮಹಿಳೆಯ ಮೃತದೇಹವನ್ನು ಸ್ಟ್ರೆಚರ್‌ನಿಂದ ಎಳೆದುಕೊಂಡು ಹೋಗಿ ಶವದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮಧ್ಯಪ್ರದೇಶದ ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಯುವಕನಿಂದ ಅತ್ಯಾಚಾರ!
Sexual Harassment
ಸುಷ್ಮಾ ಚಕ್ರೆ
|

Updated on: Oct 11, 2025 | 5:35 PM

Share

ನವದೆಹಲಿ, ಅಕ್ಟೋಬರ್ 11: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಅಥವಾ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದರೆ ಅತ್ಯಂತ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದಿದ್ದರೂ ಈ ಘೋರ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ.

ವರದಿಗಳ ಪ್ರಕಾರ, ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ ಅಪರಾಧಿ ಆವರಣಕ್ಕೆ ನುಗ್ಗಿ, ಮಹಿಳೆಯ ಶವವನ್ನು ಎಳೆದುಕೊಂಡು ಹೋಗಿ ಆ ಹೆಣದ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಈ ಕೃತ್ಯವನ್ನು ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಪಡಿಸಿವೆ. ನಂತರ ಆತನನ್ನು ಭೌರಘಾಟ್ ಪ್ರದೇಶದ ತಂಗಿಯಾಪತ್ ಗ್ರಾಮದ 25 ವರ್ಷದ ನೀಲೇಶ್ ಭಿಲಾಲ ಎಂದು ಗುರುತಿಸಲಾಯಿತು. ಎಕ್ಸ್​ನಲ್ಲಿ ವೈರಲ್ ಆಗಿರುವ ವಿಡಿಯೋದ ಪ್ರಕಾರ, ಆರೋಪಿಯು ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದ್ದ ಸ್ಟ್ರೆಚರ್‌ನಿಂದ ಎಳೆದೊಯ್ದಿದ್ದಾನೆ.

ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಆ ಮಹಿಳೆಯ ಶವವನ್ನು ಪಕ್ಕಕ್ಕೆ ತೆಗೆದುಕೊಂಡು ಹೋಗಿ ಸಿಸಿಟಿವಿಯ ವ್ಯಾಪ್ತಿಯಿಂದ ದೂರಕ್ಕೆ ಎಳೆದುಕೊಂಡು ಹೋಗಿ ಅಲ್ಲಿ ಆ ವ್ಯಕ್ತಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ, ಅವನು ಮತ್ತೆ ಶವವನ್ನು ಸ್ಟ್ರೆಚರ್ ಬಳಿ ನೆಲದ ಮೇಲೆ ಎಳೆದುಕೊಂಡು ಬಂದಿದ್ದಾನೆ. ಈ ವರ್ಷ ಅಕ್ಟೋಬರ್‌ನಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ನಂತರ ವೈದ್ಯಕೀಯ ಅಧಿಕಾರಿಯೊಬ್ಬರು. ಡಾ. ಆದಿಯಾ ದಾವರ್ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ನಂತರ, ನಿಲೇಶ್ ಭಿಲಾಲ ಎಂಬ ಯುವಕನನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ