Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಬಿಹಾರದಲ್ಲಿ ಇಡೀ ದೇಶವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ 14 ವರ್ಷದ ದಲಿತ ಬಾಲಕಿಯ ಮೇಲೆ 41 ವರ್ಷದ ವ್ಯಕ್ತಿ ಮತ್ತು ಆತನ ಗೆಳೆಯರು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸ್ತನಗಳು ಮತ್ತು ಗುಪ್ತಾಂಗವನ್ನು ಕತ್ತರಿಸಿ ಕೊಲೆ ಮಾಡಿದ್ದಾರೆ.

Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 15, 2024 | 9:11 PM

ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಾಳಿಕೋರರು ಆ ಬಾಲಕಿಯ ಸ್ತನಗಳನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿ ಕತ್ತರಿಸಿದ್ದಾರೆ. ಆಕೆಯ ಅರೆಬೆತ್ತಲೆ ಮೃತದೇಹವು ಸೋಮವಾರ ಕೊಳದಲ್ಲಿ ಪತ್ತೆಯಾಗಿದ್ದು, ಆಕೆಯ ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿತ್ತು.

ಸಂತ್ರಸ್ತೆಯ ಪೋಷಕರು ಅದೇ ಗ್ರಾಮದ 41 ವರ್ಷದ ಸಂಜಯ್ ರೈ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪೋಲೀಸರ ಪ್ರಕಾರ, 14 ವರ್ಷದ ಬಾಲಕಿ ಹಾಗೂ ಆಕೆಯ ಪೋಷಕರು ದಿನಗೂಲಿಯನ್ನು ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಗ್ರಾಮದ ಕೊಳದೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಂಜಯ್ ರೈ ಈ ಹಿಂದೆ ಆ ಬಾಲಕಿಗೆ ತನ್ನನ್ನು ಮದುವೆಯಾಗಲು ಒಪ್ಪದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮರ್ಯಾದಾ ಹತ್ಯೆ; ಹಿಂದೂ ಯುವಕನನ್ನು ಪ್ರೀತಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಅಣ್ಣ

ಭಾನುವಾರ ರಾತ್ರಿ ರೈ ಮತ್ತು ಅವರ ಸಹಚರರು ಅವರ ಮನೆಗೆ ನುಗ್ಗಿ, ತಂದೆ ಮತ್ತು ಸಹೋದರನನ್ನು ನಿಂದಿಸಿ, ಆ ಹುಡುಗಿಯನ್ನು ಅಪಹರಿಸಿದ್ದಾರೆ. ಮರುದಿನ ಆಕೆಯ ಛಿದ್ರಗೊಂಡ ದೇಹ ಪತ್ತೆಯಾಗಿದೆ.

ಈ ಘಟನೆಯು ರಾಜ್ಯದಲ್ಲಿ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ. ವಿರೋಧ ಪಕ್ಷಗಳಾದ ಆರ್‌ಜೆಡಿ ಮತ್ತು ಬಿಎಸ್‌ಪಿ ಈ ಕ್ರೂರ ಅಪರಾಧದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್