AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗರ್ಭಪಾತ ಮಾಡಿಸಿಕೊಳ್ಳಲು ಪ್ರಿಯಕರನಿಂದ 14 ಬಾರಿ ಒತ್ತಾಯ; ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Delhi News: ಮದುವೆಯಾಗುವುದಾಗಿ ನಂಬಿಸಿ, ಆ ಮಹಳೆಯೊಂದಿಗೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ ವ್ಯಕ್ತಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ಆದರೆ, ಆಕೆ ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆ ಆತ ಗರ್ಭಪಾತಕ್ಕೆ ಒತ್ತಡ ಹೇರಿದ್ದ.

Shocking News: ಗರ್ಭಪಾತ ಮಾಡಿಸಿಕೊಳ್ಳಲು ಪ್ರಿಯಕರನಿಂದ 14 ಬಾರಿ ಒತ್ತಾಯ; ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ಸಾಂದರ್ಭಿಕ ಚಿತ್ರImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Jul 15, 2022 | 12:08 PM

Share

ನವದೆಹಲಿ: ಗೆಳೆಯನೊಂದಿಗೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ 33 ವರ್ಷದ ಮಹಿಳೆಯೊಬ್ಬಳಿಗೆ ಗರ್ಭಪಾತ (Abortion)  ಮಾಡಿಸಿಕೊಳ್ಳುವಂತೆ ಈಗಾಗಲೇ ಆತ ಸುಮಾರು 14 ಬಾರಿ ಒತ್ತಾಯಿಸಿದ್ದ. ಇದರಿಂದ ಮಾನಸಿಕವಾಗಿ ಬಹಳ ನೊಂದಿದ್ದ ಆಕೆ ಆತ್ಮಹತ್ಯೆ (Suicide) ಮಾಡಿಕೊಂಡು ಮೃತಪಟ್ಟಿದ್ದಾಳೆ. ಪ್ರಿಯಕರನಿಂದ ಗರ್ಭವತಿಯಾಗಿದ್ದ (Pregnant) ಆ ಮಹಿಳೆಗೆ ಆತ 14 ಬಾರಿ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ. ಇದರಿಂದ ಬೇಸತ್ತ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜುಲೈ 5ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆಕೆಯ ಸಾವಿನ ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರಿಗೆ ಆಕೆ ಬರೆದಿಟ್ಟಿದ್ದ ಸೂಸೈಡ್ ನೋಟ್ ಸಿಕ್ಕಿದೆ. ಮದುವೆಯಾಗುವುದಾಗಿ ನಂಬಿಸಿ, ತನ್ನೊಂದಿಗೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ಆದರೆ, ತಾನು ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆ ಆತ ಗರ್ಭಪಾತಕ್ಕೆ ಅನೇಕ ಬಾರಿ ಒತ್ತಡ ಹೇರಿದ್ದ ಎಂದು ಆ ಪತ್ರದಲ್ಲಿ ಆಕೆ ಬರೆದಿದ್ದಾಳೆ.

ಇದನ್ನೂ ಓದಿ: Shocking News: ಮಿಸ್ ಆಗಿ 43 ಸಾವಿರದ ಬದಲು 1.43 ಕೋಟಿ ರೂ. ಸಂಬಳ ನೀಡಿದ ಕಂಪನಿ; ಶಾಕ್ ಆದ ಉದ್ಯೋಗಿ ಮಾಡಿದ್ದೇನು?

ವರದಿಗಳ ಪ್ರಕಾರ, ಸಂತ್ರಸ್ತ ಮಹಿಳೆ ಬರೆದಿರುವ ಸೂಸೈಡ್ ನೋಟ್​ನಲ್ಲಿ ಆ ವ್ಯಕ್ತಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದ. ಅದೇ ಕಾರಣದಿಂದ ಸಾಯಲು ನಿರ್ಧರಿಸಿದ್ದಾಗಿ ಬರೆದಿದ್ದಾಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಜುಲೈ 5ರಂದು ಜೈತ್‌ಪುರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ಕರೆ ಬಂದಿತ್ತು. ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆ ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿತ್ತು. ತಕ್ಷಣ ಆ ಮಹಿಳೆಯನ್ನು ಎಐಐಎಂಎಸ್‌ಗೆ ಸಾಗಿಸಲಾಯಿತು. ಆದರೆ, ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು ಎಂದು ಡಿಸಿಪಿ (ಆಗ್ನೇಯ) ಇಶಾ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಕೊಂದ ಕ್ರೂರ ಪತಿ

ಪೊಲೀಸರು ಆ ಮಹಿಳೆಯ ಮೊಬೈಲ್ ಫೋನ್ ಹಾಗೂ ನೇಣು ಹಾಕಿಕೊಳ್ಳಲು ಬಳಸಿದ ಸ್ಟೂಲ್ ಅನ್ನು ವಶಪಡಿಸಿಕೊಂಡಿದ್ದಾರೆ. ನೆರೆಹೊರೆಯವರ ಮಾಹಿತಿ ಪ್ರಕಾರ, ಆ ಮಹಿಳೆಯು ಕಳೆದ 7-8 ವರ್ಷಗಳಿಂದ ಪತಿಯಿಂದ ದೂರವಾಗಿ ವಾಸಿಸುತ್ತಿದ್ದಳು. ನಂತರ ಇನ್ನೋರ್ವ ವ್ಯಕ್ತಿಯ ಜೊತೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದಳು.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ