ನವದೆಹಲಿ: ಗೆಳೆಯನೊಂದಿಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ 33 ವರ್ಷದ ಮಹಿಳೆಯೊಬ್ಬಳಿಗೆ ಗರ್ಭಪಾತ (Abortion) ಮಾಡಿಸಿಕೊಳ್ಳುವಂತೆ ಈಗಾಗಲೇ ಆತ ಸುಮಾರು 14 ಬಾರಿ ಒತ್ತಾಯಿಸಿದ್ದ. ಇದರಿಂದ ಮಾನಸಿಕವಾಗಿ ಬಹಳ ನೊಂದಿದ್ದ ಆಕೆ ಆತ್ಮಹತ್ಯೆ (Suicide) ಮಾಡಿಕೊಂಡು ಮೃತಪಟ್ಟಿದ್ದಾಳೆ. ಪ್ರಿಯಕರನಿಂದ ಗರ್ಭವತಿಯಾಗಿದ್ದ (Pregnant) ಆ ಮಹಿಳೆಗೆ ಆತ 14 ಬಾರಿ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ. ಇದರಿಂದ ಬೇಸತ್ತ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜುಲೈ 5ರಂದು ಆಗ್ನೇಯ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆಕೆಯ ಸಾವಿನ ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರಿಗೆ ಆಕೆ ಬರೆದಿಟ್ಟಿದ್ದ ಸೂಸೈಡ್ ನೋಟ್ ಸಿಕ್ಕಿದೆ. ಮದುವೆಯಾಗುವುದಾಗಿ ನಂಬಿಸಿ, ತನ್ನೊಂದಿಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ಆದರೆ, ತಾನು ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆ ಆತ ಗರ್ಭಪಾತಕ್ಕೆ ಅನೇಕ ಬಾರಿ ಒತ್ತಡ ಹೇರಿದ್ದ ಎಂದು ಆ ಪತ್ರದಲ್ಲಿ ಆಕೆ ಬರೆದಿದ್ದಾಳೆ.
ಇದನ್ನೂ ಓದಿ: Shocking News: ಮಿಸ್ ಆಗಿ 43 ಸಾವಿರದ ಬದಲು 1.43 ಕೋಟಿ ರೂ. ಸಂಬಳ ನೀಡಿದ ಕಂಪನಿ; ಶಾಕ್ ಆದ ಉದ್ಯೋಗಿ ಮಾಡಿದ್ದೇನು?
ವರದಿಗಳ ಪ್ರಕಾರ, ಸಂತ್ರಸ್ತ ಮಹಿಳೆ ಬರೆದಿರುವ ಸೂಸೈಡ್ ನೋಟ್ನಲ್ಲಿ ಆ ವ್ಯಕ್ತಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದ. ಅದೇ ಕಾರಣದಿಂದ ಸಾಯಲು ನಿರ್ಧರಿಸಿದ್ದಾಗಿ ಬರೆದಿದ್ದಾಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಜುಲೈ 5ರಂದು ಜೈತ್‌ಪುರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ಕರೆ ಬಂದಿತ್ತು. ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆ ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿತ್ತು. ತಕ್ಷಣ ಆ ಮಹಿಳೆಯನ್ನು ಎಐಐಎಂಎಸ್‌ಗೆ ಸಾಗಿಸಲಾಯಿತು. ಆದರೆ, ಅಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು ಎಂದು ಡಿಸಿಪಿ (ಆಗ್ನೇಯ) ಇಶಾ ಪಾಂಡೆ ತಿಳಿಸಿದ್ದಾರೆ.
ಇದನ್ನೂ ಓದಿ: Shocking News: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಕೊಂದ ಕ್ರೂರ ಪತಿ
ಪೊಲೀಸರು ಆ ಮಹಿಳೆಯ ಮೊಬೈಲ್ ಫೋನ್ ಹಾಗೂ ನೇಣು ಹಾಕಿಕೊಳ್ಳಲು ಬಳಸಿದ ಸ್ಟೂಲ್ ಅನ್ನು ವಶಪಡಿಸಿಕೊಂಡಿದ್ದಾರೆ. ನೆರೆಹೊರೆಯವರ ಮಾಹಿತಿ ಪ್ರಕಾರ, ಆ ಮಹಿಳೆಯು ಕಳೆದ 7-8 ವರ್ಷಗಳಿಂದ ಪತಿಯಿಂದ ದೂರವಾಗಿ ವಾಸಿಸುತ್ತಿದ್ದಳು. ನಂತರ ಇನ್ನೋರ್ವ ವ್ಯಕ್ತಿಯ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಳು.