Shocking Video: ಬಸ್ ಚಲಾಯಿಸುವಾಗಲೇ ಡ್ರೈವರ್​​ಗೆ ಹೃದಯಾಘಾತ; ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರೂ ಸಾವು

ಗುರುವಾರ ಹಠಾತ್ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ನಂತರ ಸಿಟಿ ಬಸ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವೀಡಿಯೊ ವೈರಲ್ ಆಗಿದ್ದು, ಟ್ರಾಫಿಕ್ ಸಿಗ್ನಲ್‌ನಲ್ಲಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

Shocking Video: ಬಸ್ ಚಲಾಯಿಸುವಾಗಲೇ ಡ್ರೈವರ್​​ಗೆ ಹೃದಯಾಘಾತ; ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರೂ ಸಾವು
ಮಧ್ಯಪ್ರದೇಶದಲ್ಲಿ ಬಸ್ ಅಪಘಾತದ ದೃಶ್ಯ
Edited By:

Updated on: Dec 03, 2022 | 4:05 PM

ಜಬಲ್ಪುರ: ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ (Bus Driver) ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ (Jabalpur) ನಡೆದಿದೆ. ಇನ್ನೂ ದುರಾದೃಷ್ಟವೆಂದರೆ ಚಾಲಕನಿಗೆ ಹೃದಯಾಘಾತವಾಗಿದ್ದರಿಂದ (Heart Attack) ಬಸ್​ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.

ಗುರುವಾರ ಹಠಾತ್ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ನಂತರ ಸಿಟಿ ಬಸ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವೀಡಿಯೊ ವೈರಲ್ ಆಗಿದ್ದು, ಟ್ರಾಫಿಕ್ ಸಿಗ್ನಲ್‌ನಲ್ಲಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಬಸ್ ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರಿಂದಾಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಇನ್ನೂ ಹಲವರಿಗೆ ಗಾಯಗಳಾಗಿವೆ.

ಇದನ್ನೂ ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ಸಿಟಿ ಬಸ್ ಗೋಹಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದಾಗ ಹಠಾತ್ತನೆ ನಿಯಂತ್ರಣ ಕಳೆದುಕೊಂಡಿತು. ಅಕ್ಕಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಮೋಟಾರ್‌ಬೈಕ್‌ಗಳ ಮೇಲೆ ಹತ್ತಿತು. ಸರ್ಕಲ್​ನಲ್ಲಿ ರೆಡ್ ಸಿಗ್ನಲ್​ಬಿದ್ದಾಗ ಬಸ್ ಅಲ್ಲಿ ನಿಂತಿದ್ದ ವಾಹನಗಳತ್ತ ನುಗ್ಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್​ನ ಅಡಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಗಾಯಾಳುಗಳು ಹಾಗೂ ಸೀಟಿನಲ್ಲಿ ಮಲಗಿದ್ದ ಚಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ