ಕೊರೊನಾ ಅಟ್ಟಹಾಸದ ನಡುವೆ ವಿಶ್ವ ಸಂಸ್ಥೆಯಿಂದ ಹೊರ ಬಿತ್ತು ಶಾಕಿಂಗ್ ನ್ಯೂಸ್

ನವದೆಹಲಿ: ಜಗತ್ತಿನಾದ್ಯಂತ ಕೊರೊನಾ ಅಟ್ಟಹಾಸದ ನಡುವೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಮ್ಮಾರಿ ಕೊರೊನಾ ವೈರಸ್ ಜಗತ್ತನ್ನ ಮತ್ತಷ್ಟು ದೀರ್ಘಕಾಲದವರೆಗೂ ಕಾಡಲಿದೆಯಂತೆ. ಯಾವುದೇ ತಪ್ಪು ಮಾಡಬೇಡಿ, ನಿರ್ಲಕ್ಷ್ಯ ಬೇಡ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್‌ ಅಧಾನಾಮ್‌ ಗೆಬ್ರಿಯೆಸಸ್ ಎಚ್ಚರಿಕೆ ನೀಡಿದ್ದಾರೆ. ಬಹಳಷ್ಟು ದೇಶಗಳು ಸಾಂಕ್ರಾಮಿಕ ರೋಗದ ಆರಂಭಿಕ ಹಂತದಲ್ಲಿವೆ. ಕೆಲ ರಾಷ್ಟ್ರಗಳು ಕೊರೊನಾ ನಿಯಂತ್ರಣದಲ್ಲಿದೆ ಎಂದು ಭಾವಿಸಿವೆ. ಆಫ್ರಿಕಾ, ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಆಫ್ರಿಕಾ, ದಕ್ಷಿಣ […]

ಕೊರೊನಾ ಅಟ್ಟಹಾಸದ ನಡುವೆ ವಿಶ್ವ ಸಂಸ್ಥೆಯಿಂದ ಹೊರ ಬಿತ್ತು ಶಾಕಿಂಗ್ ನ್ಯೂಸ್
ಸಾಧು ಶ್ರೀನಾಥ್​

Updated on: Apr 23, 2020 | 7:41 AM

ನವದೆಹಲಿ: ಜಗತ್ತಿನಾದ್ಯಂತ ಕೊರೊನಾ ಅಟ್ಟಹಾಸದ ನಡುವೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಹೆಮ್ಮಾರಿ ಕೊರೊನಾ ವೈರಸ್ ಜಗತ್ತನ್ನ ಮತ್ತಷ್ಟು ದೀರ್ಘಕಾಲದವರೆಗೂ ಕಾಡಲಿದೆಯಂತೆ. ಯಾವುದೇ ತಪ್ಪು ಮಾಡಬೇಡಿ, ನಿರ್ಲಕ್ಷ್ಯ ಬೇಡ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್‌ ಅಧಾನಾಮ್‌ ಗೆಬ್ರಿಯೆಸಸ್ ಎಚ್ಚರಿಕೆ ನೀಡಿದ್ದಾರೆ.

ಬಹಳಷ್ಟು ದೇಶಗಳು ಸಾಂಕ್ರಾಮಿಕ ರೋಗದ ಆರಂಭಿಕ ಹಂತದಲ್ಲಿವೆ. ಕೆಲ ರಾಷ್ಟ್ರಗಳು ಕೊರೊನಾ ನಿಯಂತ್ರಣದಲ್ಲಿದೆ ಎಂದು ಭಾವಿಸಿವೆ. ಆಫ್ರಿಕಾ, ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಆಫ್ರಿಕಾ, ದಕ್ಷಿಣ ಅಮೆರಿಕ, ಪೂರ್ವ ಯುರೋಪ್‌ನಲ್ಲಿ ಸೋಂಕಿನ ವೇಗ ಹೆಚ್ಚಿದೆ. ವೇಗವಾಗಿ ಕೊರೊನಾ ಸೋಂಕು ಹರಡುತ್ತಿರುವುದು ಆತಂಕ ಸೃಷ್ಟಿಸಿದೆ ಎಂದು WHO ತಿಳಿಸಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us