AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪಾನ್​ ಶಾಪ್​ನಿಂದ ಟಾರ್ಚ್​ ತಂದು ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿದ ಡಾಕ್ಟರ್!

ಧನ್‌ಬಾದ್‌ನ ಸರ್ಕಾರಿ ಆಸ್ಪತ್ರೆಯ ಹತ್ತಿರದ ಪಾನ್ ಅಂಗಡಿಯಿಂದ ಖರೀದಿಸಿದ ಟಾರ್ಚ್‌ಲೈಟ್‌ನಲ್ಲಿ ವೈದ್ಯರು ಸಿಸೇರಿಯನ್ ಮಾಡಿದ್ದಾರೆ. ಅದೃಷ್ಟವಶಾತ್ ಆಪರೇಷನ್ ಸಕ್ಸಸ್ ಆಗಿದ್ದು, ತಾಯಿ- ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.

Shocking News: ಪಾನ್​ ಶಾಪ್​ನಿಂದ ಟಾರ್ಚ್​ ತಂದು ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿದ ಡಾಕ್ಟರ್!
ಮಗುವಿನ ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 18, 2022 | 8:20 AM

Share

ಧನ್‌ಬಾದ್: ತಮ್ಮ ಸರ್ಕಾರ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದಾಗಿ ಜಾರ್ಖಂಡ್ ಸರ್ಕಾರ (Jharkhand Government) ಘೋಷಿಸಿಕೊಂಡಿದೆ. ಆದರೆ, ವಾಸ್ತವ ವಿಚಾರ ಬೇರೆಯೇ ಇದೆ. ಜಾರ್ಖಂಡ್​ನ ಧನ್‌ಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ (Delivery) ಬಂದು ಅಡ್ಮಿಟ್ ಆಗಿದ್ದ ಮಹಿಳೆಯೊಬ್ಬರು ನೋವಿನಿಂದ ನರಳುತ್ತಿದ್ದರು. ಆದರೆ, ಆ ಆಸ್ಪತ್ರೆಯಲ್ಲಿ ಆಪರೇಷನ್ ಥಿಯೇಟರ್​​ನಲ್ಲಿ (OT) ಲೈಟ್ ಇರಲಿಲ್ಲ. ಲೈಟ್ ಇಲ್ಲದೆ ಆಪರೇಷನ್ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದಾಗ ಹೇಗಾದರೂ ಮಾಡಿ ತಾಯಿ ಮತ್ತು ಮಗುವನ್ನು ಉಳಿಸಿಕೊಡಿ ಎಂದು ಮಹಿಳೆಯ ಮನೆಯವರು ಬೇಡಿಕೊಂಡರು. ಹೀಗಾಗಿ, ಆಸ್ಪತ್ರೆಯ ಪಕ್ಕದಲ್ಲಿದ್ದ ಪಾನ್​ ಶಾಪ್​ನಿಂದ ಟಾರ್ಚ್​ ತಂದ ವೈದ್ಯರು ಅದೇ ಟಾರ್ಚ್​ ಬೆಳಕಿನಲ್ಲಿ ಸಿಸೇರಿಯನ್ ಆಪರೇಷನ್ ಮಾಡಿ, ಮಗುವನ್ನು ಹೊರತೆಗೆದಿದ್ದಾರೆ.

ಧನ್‌ಬಾದ್‌ನ ಸರ್ಕಾರಿ ಆಸ್ಪತ್ರೆಯ ಹತ್ತಿರದ ಪಾನ್ ಅಂಗಡಿಯಿಂದ ಖರೀದಿಸಿದ ಟಾರ್ಚ್‌ಲೈಟ್‌ನಲ್ಲಿ ವೈದ್ಯರು ಸಿಸೇರಿಯನ್ ಮಾಡಿದ್ದಾರೆ. ಅದೃಷ್ಟವಶಾತ್ ಆಪರೇಷನ್ ಸಕ್ಸಸ್ ಆಗಿದ್ದು, ತಾಯಿ- ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ. ಓಟಿ ಲೈಟ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಟಾರ್ಚ್‌ಲೈಟ್‌ನಲ್ಲಿ ಆಪರೇಷನ್ ಮಾಡಲಾಗಿದೆ. ಈ ವಿಷಯ ಹೊರಬೀಳುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಮತ್ತು ಸಾರ್ವಜನಿಕರು ಆ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಪ್ಪನ ಜೀವ ಉಳಿಸಲು ಕಿಡ್ನಿ ನೀಡಲಿರುವ ಲಾಲೂ ಪ್ರಸಾದ್ ಯಾದವ್ ಮಗಳು; ಈ ತಿಂಗಳಾಂತ್ಯದಲ್ಲಿ ಸಿಂಗಾಪುರದಲ್ಲಿ ಆಪರೇಷನ್

ಆದರೆ, ತಮ್ಮ ಆಸ್ಪತ್ರೆಯಲ್ಲಿ ಆಪರೇಷನ್ ಥಿಯೇಟರ್​ನಲ್ಲಿ ಲೈಟ್ ಇಲ್ಲ ಎಂಬುದಕ್ಕೆ ತಲೆಕೆಡಿಸಿಕೊಳ್ಳದ, ಆ ವ್ಯವಸ್ಥೆಯನ್ನು ಸರಿ ಮಾಡಿಸದ ಆಸ್ಪತ್ರೆಯ ಆಡಳಿತ ವರ್ಗದವರು ತಮ್ಮ ಆಸ್ಪತ್ರೆಯಲ್ಲಿ ಟಾರ್ಚ್​ ಬೆಳಕಿನಲ್ಲಿ ಹೆರಿಗೆ ಮಾಡಿದ್ದು ದೊಡ್ಡ ಸಾಧನೆ ಎಂದು ಹೇಳುತ್ತಿದ್ದಾರೆ. ಆಸ್ಪತ್ರೆಯ ಉಪಕರಣಗಳನ್ನು ದುರಸ್ತಿ ಮಾಡಲು ಆಸಕ್ತಿ ತೋರದ ಆಸ್ಪತ್ರೆಯ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವು ದಿನಗಳಿಂದ ಓಟಿ ಲೈಟ್ ಕೆಟ್ಟು ನಿಂತಿದ್ದರೂ ದುರಸ್ತಿಗೆ ಯಾರೂ ಕಾಳಜಿ ವಹಿಸಿಲ್ಲ ಎಂಬ ಆರೋಪವಿದೆ. ಹಲವಾರು ಸೌಲಭ್ಯಗಳಿಲ್ಲದಿದ್ದರೂ ಆ ಮಹಿಳೆಯನ್ನು ಅನಿವಾರ್ಯವಾಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅದೃಷ್ಟವಶಾತ್ ಸಿಸೇರಿಯನ್ ಆಪರೇಷನ್ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಆರೋಗ್ಯವಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 am, Fri, 18 November 22

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ