Shocking News: ಹಸು ಕದ್ದವನ ಅರ್ಧ ತಲೆ, ಮೀಸೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಮೆರವಣಿಗೆ

ಹಸುವನ್ನು ಕದ್ದಿರುವುದರಿಂದ ದಾಮೋಹ್ ಜಿಲ್ಲೆಯ ಮಾರುತಲ್ ಗ್ರಾಮದ ವ್ಯಕ್ತಿಯ ಅರ್ಧ ತಲೆ ಮತ್ತು ಅರ್ಧ ಮೀಸೆಯನ್ನು ಬೋಳಿಸಿರುವ ಗ್ರಾಮಸ್ಥರು ಆತನ ಮುಖಕ್ಕೆ ಮಸಿ ಬಳಿದು, ಮೆರವಣಿಗೆ ನಡೆಸಿದ್ದಾರೆ.

Shocking News: ಹಸು ಕದ್ದವನ ಅರ್ಧ ತಲೆ, ಮೀಸೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಮೆರವಣಿಗೆ
ಹಸು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 12, 2022 | 6:07 PM

ಭೂಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಹಸುವನ್ನು ಕದ್ದ ಆರೋಪದ ಮೇಲೆ ಗ್ರಾಮಸ್ಥರು ವ್ಯಕ್ತಿಯ ಅರ್ಧ ಮೀಸೆ ಬೋಳಿಸಿ, ಅರ್ಧ ತಲೆ ಬೋಳಿಸಿ ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಮೋಹ್ ಜಿಲ್ಲೆಯ ಮಾರುತಲ್ ಗ್ರಾಮದ ನಿವಾಸಿಗಳು ಹಸುವನ್ನು ಕದ್ದವನಿಗೆ ಈ ವಿಚಿತ್ರ ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆ ವ್ಯಕ್ತಿ ಹಸುವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಗ್ರಾಮಸ್ಥರ ಗುಂಪು ಅವನ ಮೀಸೆಯನ್ನು ಅರ್ಧ ಬೋಳಿಸಿ, ಅವನ ತಲೆಯನ್ನು ಅರ್ಧ ಬೋಳಿಸಲು ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಗ್ರಾಮಸ್ಥರು ಅವರ ಮುಖಕ್ಕೆ ಕಪ್ಪು ಮಸಿ ಬಳಿದು ಗ್ರಾಮದಲ್ಲಿ ಸುತ್ತಾಡುವಂತೆ ಒತ್ತಾಯಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಹಸು ನಾಪತ್ತೆಯಾಗಿದೆ ಎಂದು ದನದ ಮಾಲೀಕರು ದೂರು ನೀಡಿದ್ದು, ಆ ಅನುಮಾನದ ಆಧಾರದ ಮೇಲೆ ಗ್ರಾಮಸ್ಥರು ಸೀತಾರಾಮ್ ಎಂಬಾತನನ್ನು ಬಂಧಿಸಿದ್ದಾರೆ. ಅವರು ಇನ್ನೊಬ್ಬ ವ್ಯಕ್ತಿಯೊಂದಿಗೆ ಸೇರಿ ಪ್ರಾಣಿಯನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಜಬಲ್‌ಪುರ ನಾಕಾ ಪೊಲೀಸ್ ಪೋಸ್ಟ್‌ನ ಉಸ್ತುವಾರಿ ಆರ್.ಬಿ. ಪಾಂಡೆ ಗ್ರಾಮಕ್ಕೆ ತಲುಪಿ ಆರೋಪಿಯನ್ನು ಕರೆತಂದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಲಾಗಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಗ್ರಾಮದ ಉದಲ್ ಸಿಂಗ್ ಎಂಬಾತ ಸೀತಾರಾಮ್ ರಜಪೂತ್ ಎಂಬ ವ್ಯಕ್ತಿಯನ್ನು ಗ್ರಾಮದಲ್ಲಿ ಹಸುಗಳನ್ನು ಕದಿಯುತ್ತಿದ್ದ ಎಂದು ಹೇಳಿ ಪೊಲೀಸರಿಗೆ ಒಪ್ಪಿಸಿದ್ದಾನೆ. ಐವರು ಗ್ರಾಮಸ್ಥರು ಆತನನ್ನು ಅಮಾನುಷವಾಗಿ ಥಳಿಸಿ ಅಪರಾಧವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು ಎಂದು ಸೀತಾರಾಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಅವನ ತಲೆಯನ್ನು ಅರ್ಧ ಬೋಳಿಸಿ, ಮೀಸೆಯನ್ನು ಕೂಡ ಅರ್ಧ ಬೋಳಿಸಿದ್ದಾರೆ. ಬಳಿಕ ಆತನ ಮುಖಕ್ಕೆ ಮಸಿ ಬಳಿದು ಮೆರವಣಿಗೆ ನಡೆಸಿದ್ದಾರೆ ಎಂದು ತನಿಖಾಧಿಕಾರಿ ಮತ್ತು ಹೊರಠಾಣೆ ಉಸ್ತುವಾರಿ ಆರ್.ಬಿ. ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಮದುವೆಯಾದ ಕೂಡಲೆ ಗಂಡನ ಬಿಟ್ಟು ಪ್ರಿಯಕರನ ಜೊತೆ ವಧು ಪರಾರಿ; ಲವ್ ಸ್ಟೋರಿಗೆ ಹೊಸ ಟ್ವಿಸ್ಟ್​!

Viral News: ಮದುವೆಯಾಗಿ 11 ವರ್ಷ ಕಾದರೂ ಮೊದಲ ರಾತ್ರಿಗೆ ಸಿಗಲೇ ಇಲ್ಲ ಮುಹೂರ್ತ; ಆಮೇಲೇನಾಯ್ತು?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್