ರಸ್ತೆ ಬದಿ ಮೂತ್ರ ವಿಸರ್ಜಿಸಲು ಹೋದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಒಡಿಶಾದಲ್ಲಿ ತನ್ನ ಸಂಬಂಧಿಕರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆ ಮೂತ್ರ ವಿಸರ್ಜಿಸಲು ರಸ್ತೆಬದಿಯಲ್ಲಿರುವ ಕಾಡಿನ ಬಳಿ ಹೋದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಮುಖ್ಯ ರಸ್ತೆಯಿಂದ ಸ್ವಲ್ಪ ದೂರದಲ್ಲಿರುವ ನಿರ್ಜನ ಸ್ಥಳಕ್ಕೆ ಮೂವರು ಪುರುಷರು ತನ್ನನ್ನು ಬಲವಂತವಾಗಿ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಭುವನೇಶ್ವರ, ಆಗಸ್ಟ್ 8: ಒಡಿಶಾದಲ್ಲೊಂದು ಆಘಾತಕಾರಿ ಘಟನೆ (Shocking News) ನಡೆದಿದೆ. ಇಲ್ಲಿನ ಅಂಗುಲ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಬುಡಕಟ್ಟು ಸಮುದಾಯದ ಮಹಿಳೆಯ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ (Sexual Harassment) ಎಸಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಮೂವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಕೂಡ ಸೇರಿದ್ದಾರೆ. ಮೂತ್ರ ವಿಸರ್ಜಿಸಲು ಕಾಡಿನ ಬದಿ ಹೋದಾಗ ಟ್ರ್ಯಾಕ್ಟರ್‌ನಲ್ಲಿ ಬಂದ ಮೂವರು ಆಕೆಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ್ದಾರೆ.
ಆ ಮಹಿಳೆಯ ದೂರಿನ ಪ್ರಕಾರ, ಆಕೆ ತನ್ನ ಸೋದರಳಿಯನೊಂದಿಗೆ ಅಂಗುಲ್‌ನ ಛೇಂಡಿಪಾಡ ಪ್ರದೇಶದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮಧ್ಯಾಹ್ನ ಸುಮಾರು 3 ಗಂಟೆಗೆ ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಆ ಮಹಿಳೆ ಮತ್ತು ಅವರ ಸೋದರಳಿಯ ಕಾರಿಗೆ ಪೆಟ್ರೋಲ್ ತುಂಬಿಸಿ, ಊಟ ಮಾಡಲು ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದರು. ಆಗ ಸೋದರಳಿಯನಿಗೆ ಅಲ್ಲೇ ನಿಲ್ಲಲು ಹೇಳಿ ಆಕೆ ಮೂತ್ರ ವಿಸರ್ಜಿಸಲು ಅಲ್ಲೇ ಪಕ್ಕದಲ್ಲಿದ್ದ ಕಾಡಿನ ಬಳಿ ಹೋದರು. ಆಗ ಆಕೆ ಒಂಟಿಯಾಗಿದ್ದಾಗ ಟ್ರ್ಯಾಕ್ಟರ್‌ನಲ್ಲಿ ಮೂವರು ಪುರುಷರು ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಮಧ್ಯಪ್ರದೇಶ: ಯುವತಿ ಮದುವೆಯಾಗಬೇಕಿದ್ದ ಹುಡುಗನನ್ನು ಥಳಿಸಿ ಆಕೆಯ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ
ಮುಖ್ಯ ರಸ್ತೆಯಿಂದ ಸ್ವಲ್ಪ ದೂರದಲ್ಲಿರುವ ನಿರ್ಜನ ಸ್ಥಳಕ್ಕೆ ಆಕೆಯನ್ನು ಬಲವಂತವಾಗಿ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಅತ್ಯಾಚಾರ ನಡೆದ ತಕ್ಷಣ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಹಿಳೆ ಮನೆಗೆ ತಲುಪಿ ಈ ಘಟನೆಯ ಬಗ್ಗೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾಳೆ.
ಆಗಸ್ಟ್ 5ರಂದು ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ. ಆಗಸ್ಟ್ 6ರಂದು ದೂರು ದಾಖಲಾದ 24 ಗಂಟೆಗಳ ಒಳಗೆ, ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಳಸಿದ ಟ್ರ್ಯಾಕ್ಟರ್, ಎರಡು ಮೊಬೈಲ್ ಫೋನ್‌ಗಳು ಮತ್ತು ಅಪರಾಧದ ಸಮಯದಲ್ಲಿ ಆರೋಪಿಗಳು ಮತ್ತು ಆ ಮಹಿಳೆ ಧರಿಸಿದ್ದ ಬಟ್ಟೆ ಸೇರಿದಂತೆ ಹಲವಾರು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




