Shocking News: 100 ಜನ ಮನೆಗೆ ನುಗ್ಗಿ ಯುವತಿಯ ಕಿಡ್ನಾಪ್; ತೆಲಂಗಾಣದಲ್ಲೊಂದು ಆಘಾತಕಾರಿ ಘಟನೆ

Telangana Crime News: ತೆಲಂಗಾಣದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 24 ವರ್ಷದ ಯುವತಿಯನ್ನು ಶುಕ್ರವಾರ ಪುರುಷರ ದೊಡ್ಡ ಗುಂಪೊಂದು ಮನೆಯಿಂದ ಅಪಹರಿಸಿದೆ.

Shocking News: 100 ಜನ ಮನೆಗೆ ನುಗ್ಗಿ ಯುವತಿಯ ಕಿಡ್ನಾಪ್; ತೆಲಂಗಾಣದಲ್ಲೊಂದು ಆಘಾತಕಾರಿ ಘಟನೆ
ತೆಲಂಗಾಣದಲ್ಲಿ ಮನೆಗೆ ನುಗ್ಗಿ ಮನೆ ಧ್ವಂಸ ಮಾಡುತ್ತಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 10, 2022 | 11:03 AM

ಹೈದರಾಬಾದ್: ತೆಲಂಗಾಣದ (Telangana) ರಂಗಾ ರೆಡ್ಡಿ ಜಿಲ್ಲೆಯ ಆದಿಬಟ್ಲಾದಲ್ಲಿ ಮನೆಗೆ ನುಗ್ಗಿದ ಸುಮಾರು 100 ಜನರು ಶುಕ್ರವಾರ 24 ವರ್ಷದ ಯುವತಿಯನ್ನು ಆಕೆಯ ಮನೆಯಿಂದ ಅಪಹರಿಸಿದ್ದಾರೆ. ವೈಶಾಲಿ ಎಂಬ ಯುವತಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಸುಮಾರು 100 ಪುರುಷರು ಅವರ ಮನೆಗೆ ನುಗ್ಗಿ ಅವರ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ನಂತರ ಬಲವಂತವಾಗಿ ಅವರ ಮಗಳನ್ನು ಮನೆಯಿಂದ ಎಳೆದುಕೊಂಡು ಹೋಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುರುಷರು ಆ ಯುವತಿಯ ಸಂಬಂಧಿಕರಿಗೆ ಥಳಿಸುವ ದೃಶ್ಯ ಕಂಡು ಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಟಾಲಿವುಡ್​ಗೆ ಡಬ್ಬಿಂಗ್​ ಭಯ; ತೆಲಂಗಾಣ, ಆಂಧ್ರದಲ್ಲಿ ಸಂಕ್ರಾಂತಿ ವೇಳೆ ಬೇರೆ ಭಾಷೆಯ ಚಿತ್ರಗಳಿಗೆ ಸಂಕಷ್ಟ

ತೆಲಂಗಾಣದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 24 ವರ್ಷದ ಯುವತಿಯನ್ನು ಶುಕ್ರವಾರ ಪುರುಷರ ದೊಡ್ಡ ಗುಂಪೊಂದು ಮನೆಯಿಂದ ಅಪಹರಿಸಿದೆ. ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 16 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಗಂಟೆಯೊಳಗೆ ಯುವತಿಯನ್ನು ರಕ್ಷಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿಯಾಗಿರುವ 26 ವರ್ಷದ ನವೀನ್ ರೆಡ್ಡಿ ಈಗಾಗಲೇ ವೈಶಾಲಿಯೊಂದಿಗೆ ಮದುವೆಯಾಗಿರುವುದಾಗಿ ತಿಳಿಸಿದ್ದಾನೆ. ನಾನು ನನ್ನ ಹೆಂಡತಿಯನ್ನು ಮನೆಗೆ ಕರೆದುಕೊಂಡು ಹೋಗಲು ಸಾಕಷ್ಟು ಪ್ರಯತ್ನಿಸಿದೆ. ಆಕೆ ಡೆಂಟಿಸ್ಟ್​ ಆದ ಬಳಿಕ ಆಕೆಯ ಅಪ್ಪ-ಅಮ್ಮ ಅವಳ ಮನಸನ್ನು ಬದಲಾಯಿಸಿ, ನನ್ನಿಂದ ದೂರ ಮಾಡಿದ್ದಾರೆ. ಹೀಗಾಗಿ, ಅವರ ಮನೆಗೆ ನುಗ್ಗಿ ಆಕೆಯನ್ನು ಎಳೆದುಕೊಂಡು ಹೋಗಿದ್ದೇವೆ ಎಂದು ನವೀನ್ ರೆಡ್ಡಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಪ್ರಭಾವಿ ವ್ಯಕ್ತಿಗಳ ಮನೆಗಳ ಮೇಲೆ ಐಟಿ ಆಧಿಕಾರಿಗಳ ದಾಳಿ

ಆರೋಪಿಗಳ ವಿರುದ್ಧ ಕೊಲೆ ಯತ್ನ ಮತ್ತು ಅಪಹರಣ ಸೇರಿದಂತೆ ಇತರೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಪಹರಣಕ್ಕೆ ಒಳಗಾದ ಯುವತಿ ದಂತ ವೈದ್ಯೆ ಎನ್ನಲಾಗಿದೆ. ಎಎನ್‌ಐ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಗುಂಪೊಂದು ಆ ಯುವತಿಯ ಮನೆಯೊಳಗೆ ನುಗ್ಗುತ್ತಿರುವುದನ್ನು ನೋಡಬಹುದು. ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಮನೆಯ ಬಳಿ ನಿಲ್ಲಿಸಿದ್ದ ಕಾರಿಗೆ ಹಾನಿ ಮಾಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್​ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Sat, 10 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್