ಹೈದರಾಬಾದ್: ತೆಲಂಗಾಣದ (Telangana) ರಂಗಾ ರೆಡ್ಡಿ ಜಿಲ್ಲೆಯ ಆದಿಬಟ್ಲಾದಲ್ಲಿ ಮನೆಗೆ ನುಗ್ಗಿದ ಸುಮಾರು 100 ಜನರು ಶುಕ್ರವಾರ 24 ವರ್ಷದ ಯುವತಿಯನ್ನು ಆಕೆಯ ಮನೆಯಿಂದ ಅಪಹರಿಸಿದ್ದಾರೆ. ವೈಶಾಲಿ ಎಂಬ ಯುವತಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಸುಮಾರು 100 ಪುರುಷರು ಅವರ ಮನೆಗೆ ನುಗ್ಗಿ ಅವರ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ನಂತರ ಬಲವಂತವಾಗಿ ಅವರ ಮಗಳನ್ನು ಮನೆಯಿಂದ ಎಳೆದುಕೊಂಡು ಹೋಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುರುಷರು ಆ ಯುವತಿಯ ಸಂಬಂಧಿಕರಿಗೆ ಥಳಿಸುವ ದೃಶ್ಯ ಕಂಡು ಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಟಾಲಿವುಡ್ಗೆ ಡಬ್ಬಿಂಗ್ ಭಯ; ತೆಲಂಗಾಣ, ಆಂಧ್ರದಲ್ಲಿ ಸಂಕ್ರಾಂತಿ ವೇಳೆ ಬೇರೆ ಭಾಷೆಯ ಚಿತ್ರಗಳಿಗೆ ಸಂಕಷ್ಟ
ತೆಲಂಗಾಣದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 24 ವರ್ಷದ ಯುವತಿಯನ್ನು ಶುಕ್ರವಾರ ಪುರುಷರ ದೊಡ್ಡ ಗುಂಪೊಂದು ಮನೆಯಿಂದ ಅಪಹರಿಸಿದೆ. ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 16 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಗಂಟೆಯೊಳಗೆ ಯುವತಿಯನ್ನು ರಕ್ಷಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Ranga Reddy, Telangana | A 24-yr-old woman was kidnapped from her house in Adibatla y’day. Her parents alleged that around 100 youths barged into their house, forcibly took their daughter Vaishali away & vandalised the house. Police say, case registered & probe underway. pic.twitter.com/s1lKdJzd2B
— ANI (@ANI) December 10, 2022
ಪ್ರಮುಖ ಆರೋಪಿಯಾಗಿರುವ 26 ವರ್ಷದ ನವೀನ್ ರೆಡ್ಡಿ ಈಗಾಗಲೇ ವೈಶಾಲಿಯೊಂದಿಗೆ ಮದುವೆಯಾಗಿರುವುದಾಗಿ ತಿಳಿಸಿದ್ದಾನೆ. ನಾನು ನನ್ನ ಹೆಂಡತಿಯನ್ನು ಮನೆಗೆ ಕರೆದುಕೊಂಡು ಹೋಗಲು ಸಾಕಷ್ಟು ಪ್ರಯತ್ನಿಸಿದೆ. ಆಕೆ ಡೆಂಟಿಸ್ಟ್ ಆದ ಬಳಿಕ ಆಕೆಯ ಅಪ್ಪ-ಅಮ್ಮ ಅವಳ ಮನಸನ್ನು ಬದಲಾಯಿಸಿ, ನನ್ನಿಂದ ದೂರ ಮಾಡಿದ್ದಾರೆ. ಹೀಗಾಗಿ, ಅವರ ಮನೆಗೆ ನುಗ್ಗಿ ಆಕೆಯನ್ನು ಎಳೆದುಕೊಂಡು ಹೋಗಿದ್ದೇವೆ ಎಂದು ನವೀನ್ ರೆಡ್ಡಿ ಪೊಲೀಸರಿಗೆ ತಿಳಿಸಿದ್ದಾನೆ.
ಇದನ್ನೂ ಓದಿ: ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಪ್ರಭಾವಿ ವ್ಯಕ್ತಿಗಳ ಮನೆಗಳ ಮೇಲೆ ಐಟಿ ಆಧಿಕಾರಿಗಳ ದಾಳಿ
ಆರೋಪಿಗಳ ವಿರುದ್ಧ ಕೊಲೆ ಯತ್ನ ಮತ್ತು ಅಪಹರಣ ಸೇರಿದಂತೆ ಇತರೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಪಹರಣಕ್ಕೆ ಒಳಗಾದ ಯುವತಿ ದಂತ ವೈದ್ಯೆ ಎನ್ನಲಾಗಿದೆ. ಎಎನ್ಐ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಗುಂಪೊಂದು ಆ ಯುವತಿಯ ಮನೆಯೊಳಗೆ ನುಗ್ಗುತ್ತಿರುವುದನ್ನು ನೋಡಬಹುದು. ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಮನೆಯ ಬಳಿ ನಿಲ್ಲಿಸಿದ್ದ ಕಾರಿಗೆ ಹಾನಿ ಮಾಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.
Published On - 11:02 am, Sat, 10 December 22