Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು

ಮನೆಯ ಹೊರಗೆ ಆಟವಾಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು ಒಂದೇ ಸಮನೆ ದಾಳಿ ನಡೆಸಿದ್ದಾವೆ. ಆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ.

Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು
ನಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 07, 2022 | 4:04 PM

ಲಕ್ನೋ: ಲಕ್ನೋದ ಠಾಕೂರ್‌ಗಂಜ್‌ನ ಮುಸಾಹಿಬ್‌ಗಂಜ್ ಪ್ರದೇಶದಲ್ಲಿ ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳು (Street Dogs) ದಾಳಿ ಮಾಡಿರುವ ಆಘಾತಕಾರಿ ಘಟನೆ (Shocking Incident) ನಡೆದಿದೆ. ಈ ದಾಳಿಯಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಮತ್ತು ಅವನ ಸಹೋದರಿ ತೀವ್ರವಾಗಿ ಗಾಯಗೊಂಡಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ಅಣ್ಣ-ತಂಗಿಯನ್ನು ಕೆಜಿಎಂಯುನ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಆದರೆ ಬಾಲಕ ಮೊಹಮ್ಮದ್ ಹೈದರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಅವರ 5 ವರ್ಷದ ಸಹೋದರಿ ಜನ್ನತ್ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ.

ಮೃತ ಬಾಲಕನ ಪೋಷಕರು ಲಕ್ನೋದ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ಧ ಧ್ವನಿ ಎತ್ತಿದ್ದಾರೆ. ಇಲ್ಲಿನ ಬೀದಿ ನಾಯಿಗಳು ಸ್ಥಳೀಯರಿಗೆ ಅಪಾಯ ಉಂಟುಮಾಡುತ್ತಿರುವ ಬಗ್ಗೆ ಪದೇಪದೆ ದೂರು ನೀಡಿದ್ದರೂ, ಲಕ್ನೋ ಮಹಾನಗರ ಪಾಲಿಕೆ (ಎಲ್‌ಎಂಸಿ) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಬೀದಿ ನಾಯಿಗಳನ್ನು ಹಿಡಿಯಲು ಆದೇಶ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಈ ಹಿಂದೆಯೇ ಮನವಿ ಮಾಡಿದ್ದರು. ಆದರೆ, ಎನ್‌ಜಿಒಗಳು ಅದಕ್ಕೆ ವಿರೋಧಿಸುವುದರಿಂದ ನಾಯಿಗಳನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಎಲ್‌ಎಂಸಿ ನಿರಾಕರಿಸಿತ್ತು. ಸಂತ್ರಸ್ತೆಯ ತಂದೆ ಮುನ್ಸಿಪಲ್ ಕಾರ್ಪೊರೇಷನ್ ವಲಯ 6ರ ಅಧಿಕಾರಿಗಳು ಮತ್ತು ಇತರರ ವಿರುದ್ಧ ಠಾಕೂರ್‌ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

Shocking News: ಗಂಡ ಸತ್ತ ಮೇಲೆ ತವರುಮನೆಯಲ್ಲಿದ್ದ ವಿಧವೆಗೆ ತಮ್ಮನ ಮೇಲೇ ಲವ್ ಆಯ್ತು; ಹೀಗೊಂದು ವಿಚಿತ್ರ ಪ್ರೇಮಕತೆ!

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ