ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬಿರ್ಭುಮ್ ಜಿಲ್ಲೆಯಲ್ಲಿ ಶಾಲೆಯೊಂದರ ಬಿಸಿಯೂಟದಲ್ಲಿ (Mid-Day Meal) ಸತ್ತ ಹಾವು ಪತ್ತೆಯಾಗಿದೆ. ಈ ಊಟವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿರ್ಭುಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಬಿಸಿಯೂಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ.
ಊಟವನ್ನು ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಬಿಸಿಯೂಟ ತಿಂದ ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಿದೆವು ಎಂದು ಶಾಲಾ ಸಿಬ್ಬಂದಿ ಹೇಳಿದ್ದಾರೆ.
State of West Bengal A whole snake in the mid-day meal of p.s Mayureshwar Mandalpur Primary School in Birbhum.
Many children are sick after eating this cooked food.
Who is responsible for this ?? @MajiDevDutta @jdhankhar1 @rashtrapatibhvn @SuvenduWB @anjanaomkashyap @aajtak pic.twitter.com/RyBJBJKvl0— Rajesh Dutta (@RajeshD35635873) January 9, 2023
ಇದನ್ನೂ ಓದಿ: ಶಾಲಾ ಆವರಣದೊಳಗೆ ಬಂದಿದ್ದ ಮಂಗನಿಗೆ ಬಿಸಿಯೂಟ: ಶಿಕ್ಷಕನ ಕೈ ತುತ್ತು ವಿಡಿಯೋ ವೈರಲ್
ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಕ್ಕಳು ಅಸ್ವಸ್ಥರಾಗಿದ್ದರಿಂದ ಕೋಪಗೊಂಡ ಪೋಷಕರು ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಅವರ ಬೈಕನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published On - 2:07 pm, Tue, 10 January 23