ಹೈದರಾಬಾದ್: ರ್ಯಾಗಿಂಗ್ ಮಾಡಿದರೆ ಕಠಿಣ ಶಿಕ್ಷೆ ನೀಡಲಾಗುವುದು ಎಂಬ ಅರಿವಿದ್ದರೂ ಹೈದರಾಬಾದ್‌ನ ಹಾಸ್ಟೆಲ್ (Hyderabad Hostel) ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಥಳಿಸಿ, ಆತನಿಗೆ ಅಲ್ಲಾಹು ಅಕ್ಬರ್ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿರುವ ಅಮಾನವೀಯ ಘಟನೆಯ ವಿಡಿಯೋ ವೈರಲ್ (Video Viral) ಆಗಿದೆ.
ಹೈದರಾಬಾದ್‌ನ ಐಸಿಎಫ್‌ಎಐ ಫೌಂಡೇಷನ್ ಫಾರ್ ಹೈಯರ್ ಎಜುಕೇಶನ್ (ಐಎಫ್‌ಹೆಚ್‌ಇ)ಯಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಹಿಮಾಂಕ್ ಬನ್ಸಾಲ್ ಎಂಬಾತನಿಗೆ ಹಾಸ್ಟೆಲ್ ರೂಂನಲ್ಲಿ ಕಪಾಳಮೋಕ್ಷ ಮಾಡಲಾಗಿದ್ದು, ಆತನಿಗೆ ಒದ್ದು, ಕೈಗಳನ್ನು ತಿರುಚಲಾಗಿದೆ. ಇದರ ವಿಡಿಯೋ ವೈರಲ್ ಆಗಿದೆ. ಏಳೆಂಟು ಯುವಕರು ಆತನನ್ನು ಥಳಿಸುವುದನ್ನು ನಿಲ್ಲಿಸದ ಕಾರಣ ಆತ ಅವರು ಹೇಳಿದಂತೆ “ಜೈ ಮಾತಾ ದಿ” ಮತ್ತು “ಅಲ್ಲಾಹು ಅಕ್ಬರ್” ಘೋಷಣೆಗಳನ್ನು ಕೂಗಿದ್ದಾನೆ.
Irrespective of how hard the lobby is trying to spin this as regular senior -junio banter, it is not. Himank Bansal is being forced to chant “Allah Hu Akbar” and is being assaulted for his ideology. His freedom to religion is being violated in a masquerading secular nation. pic.twitter.com/AJX9ISWrnb
— Rashmi Samant (@RashmiDVS) November 12, 2022
ಕೊಲೆ ಯತ್ನದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳ ಪೈಕಿ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ 7 ಮಂದಿ ಪರಾರಿಯಾಗಿದ್ದಾರೆ. ಇವರೆಲ್ಲರನ್ನೂ ಬಿಸಿನೆಸ್ ಸ್ಕೂಲ್ ಕಾಲೇಜಿನಿಂದ ಸಸ್ಪೆಂಡ್ ಮಾಡಿದೆ. ಕಾಲೇಜಿನ ಆಡಳಿತ ಮಂಡಳಿಯ ಐವರಿಗೆ ಪೊಲೀಸರ ಮುಂದೆ ಹಾಜರಾಗುವಂತೆ ಆದೇಶ ನೀಡಲಾಗಿದೆ.
ನವೆಂಬರ್ 1ರಂದು ಹಿಮಾಂಕ್ ಪ್ರವಾದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ ನಂತರ ಈ ಘಟನೆ ನಡೆದಿದೆ. ಈ ಬಗ್ಗೆ ಆ ಯುವಕರು ಪೊಲೀಸರಿಗೆ ದೂರು ನೀಡಿ, ದೈಹಿಕವಾಗಿ ಮತ್ತು ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ಯಾಂಟ್ ತೆಗೆಯದಿದ್ದರೆ ಥಳಿಸಿ ಸಾಯಿಸುವುದಾಗಿ ವಿದ್ಯಾರ್ಥಿಗಳು ಹಿಮಾಂಕ್ಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತೆಲಂಗಾಣದ ಸಚಿವ ಕೆಟಿ ರಾಮರಾವ್ ಮತ್ತು ಹೈದರಾಬಾದ್ ಪೊಲೀಸ್ ಕಮಿಷನರ್ ಅವರನ್ನು ಟ್ಯಾಗ್ ಮಾಡಿರುವ ಹಿಮಾಂಕ್ ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದ್ದು, ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Published On - 11:50 am, Mon, 14 November 22