ಪಾಟ್ನಾ: ಪೆರೋಲ್​ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ಗುಂಡು ಹಾರಿಸಿದ ದುಷ್ಕರ್ಮಿಗಳು

ಪೆರೋಲ್ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಶಾಸ್ತ್ರಿ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಪ್ಯಾರಾಸ್ ಆಸ್ಪತ್ರೆ ಆವರಣದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಅಪರಿಚಿತ ದುಷ್ಕರ್ಮಿಗಳು ಕೈದಿಯ ಮೇಲೆ ಗುಂಡು ಹಾರಿಸಿದ್ದಾರೆ.  ದಾಳಿಕೋರರನ್ನು ಗುರುತಿಸಲು ಮತ್ತು ಹಲ್ಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಘಟನೆಯು ಆಸ್ಪತ್ರೆಯೊಳಗೆ ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಯಿತು. ಗಾಯಗೊಂಡ ಕೈದಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ಪಾಟ್ನಾ: ಪೆರೋಲ್​ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ಗುಂಡು ಹಾರಿಸಿದ ದುಷ್ಕರ್ಮಿಗಳು
ಚಂದನ್ ಮಿಶ್ರಾ
Image Credit source: India TV

Updated on: Jul 17, 2025 | 11:48 AM

ಪಾಟ್ನಾ, ಜುಲೈ 17: ಪೆರೋಲ್(Parole) ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಶಾಸ್ತ್ರಿ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಪ್ಯಾರಾಸ್ ಆಸ್ಪತ್ರೆ ಆವರಣದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಅಪರಿಚಿತ ದುಷ್ಕರ್ಮಿಗಳು ಕೈದಿಯ ಮೇಲೆ ಗುಂಡು ಹಾರಿಸಿದ್ದಾರೆ.  ದಾಳಿಕೋರರನ್ನು ಗುರುತಿಸಲು ಮತ್ತು ಹಲ್ಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಈ ಘಟನೆಯು ಆಸ್ಪತ್ರೆಯೊಳಗೆ ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಯಿತು. ಗಾಯಗೊಂಡ ಕೈದಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ಬಕ್ಸಾರ್ ಮೂಲದ ಕೈದಿ ಚಂದನ್ ಮಿಶ್ರಾ, ಕೇಸರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಪ್ರಸ್ತುತ ಬೇವೂರ್ ಜೈಲಿನಲ್ಲಿದ್ದಾನೆ. ವೈದ್ಯಕೀಯ ಚಿಕಿತ್ಸೆಗಾಗಿ ಆತನನ್ನು ಪೆರೋಲ್ ಮೇಲೆ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆಯ ನಂತರ, ಶಾಸ್ತ್ರಿ ನಗರ ಪೊಲೀಸ್ ಠಾಣೆಯ ತಂಡವೊಂದು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿತು.

ಮತ್ತಷ್ಟು ಓದಿ:  Surendra Kewat : ಪಾಟ್ನಾದಲ್ಲಿ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಗುಂಡಿನ ದಾಳಿಯ ನಂತರ ದಾಳಿಕೋರರು ಪರಾರಿಯಾಗಿದ್ದು, ಪೊಲೀಸರು ಅವರ ಚಲನವಲನಗಳನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ.

ಬಕ್ಸರ್ ಜಿಲ್ಲೆಯ ನಿವಾಸಿ ಚಂದನ್ ಮಿಶ್ರಾ ಎಂಬ ಆರೋಪಿ ವಿರುದ್ಧ ಕೊಲೆ ಪ್ರಕರಣ ಸೇರಿ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಆತನನ್ನು ಬಕ್ಸರ್ ನಿಂದ ಭಾಗಲ್ಪುರ್ ಜೈಲಿಗೆ ವರ್ಗಾಯಿಸಲಾಗಿತ್ತು, ಚಂದನ್ ಪೆರೋಲ್ ಮೇಲೆ ಬಂದು ಚಿಕಿತ್ಸೆಗಾಗಿ ಪರಾಸ್ ಆಸ್ಪತ್ರೆಗೆ ದಾಖಲಾಗಿದ್ದ.

ಎದುರಾಳಿ ಗ್ಯಾಂಗ್ ಆತನ ಮೇಲೆ ಗುಂಡು ಹಾರಿಸಿದೆ. ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಮತ್ತು ಬಕ್ಸರ್ ಪೊಲೀಸರ ಸಹಾಯದಿಂದ   ಚಂದನ್ ಶೇರು ಗ್ಯಾಂಗ್ಸದಸ್ಯರನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದೆ. ಶೂಟರ್ಗಳ ಛಾಯಾಚಿತ್ರಗಳು ನಮ್ಮ ಬಳಿ ಇವೆ ಎಂದು ಪಾಟ್ನಾ ಎಸ್ ಎಸ್ ಪಿ ಕಾರ್ತಿಕೇಯ ಕೆ ಶರ್ಮಾ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ನಡೆದ ಈ ದಾಳಿಯು ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Thu, 17 July 25