Shocking Video: ನದಿಯಲ್ಲಿ ಸ್ನಾನ ಮಾಡುವಾಗ ಹೆಂಡತಿಗೆ ಮುತ್ತು ಕೊಟ್ಟ ಗಂಡನಿಗೆ ಹಿಗ್ಗಾಮುಗ್ಗ ಥಳಿಸಿದ ಜನ!

ವೈರಲ್ ಆಗಿರುವ ವಿಡಿಯೋದಲ್ಲಿ ಅಯೋಧ್ಯೆಯ ಸರಯೂ ನದಿಯಲ್ಲಿ ತನ್ನ ಹೆಂಡತಿಯೊಂದಿಗೆ ಮುಳುಗೇಳುತ್ತಿದ್ದ ವ್ಯಕ್ತಿ ಆಕೆಗೆ ಮುತ್ತು ನೀಡಿದ್ದಕ್ಕೆ ಆ ಪುರುಷನನ್ನು ಎಳೆದೊಯ್ದು, ಸುತ್ತಮುತ್ತಲಿನ ಹಲವಾರು ಜನರು ಥಳಿಸಿದ್ದಾರೆ.

Shocking Video: ನದಿಯಲ್ಲಿ ಸ್ನಾನ ಮಾಡುವಾಗ ಹೆಂಡತಿಗೆ ಮುತ್ತು ಕೊಟ್ಟ ಗಂಡನಿಗೆ ಹಿಗ್ಗಾಮುಗ್ಗ ಥಳಿಸಿದ ಜನ!
ಅಯೋಧ್ಯೆಯ ಸರಯೂ ನದಿImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 23, 2022 | 9:20 AM

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಸರಯೂ ನದಿಯಲ್ಲಿ (Sarayu River) ಸ್ನಾನ ಮಾಡುತ್ತಿದ್ದ ವೇಳೆ ತನ್ನ ಪತ್ನಿಗೆ ಮುತ್ತು ಕೊಟ್ಟಿದ್ದಕ್ಕೆ ವ್ಯಕ್ತಿಯೋರ್ವನನ್ನು ನಿಂದಿಸಿ ಥಳಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಯೋಧ್ಯೆಯ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಅಯೋಧ್ಯೆಯ ಸರಯೂ ನದಿಯಲ್ಲಿ ತನ್ನ ಹೆಂಡತಿಯೊಂದಿಗೆ ಮುಳುಗೇಳುತ್ತಿದ್ದ ವ್ಯಕ್ತಿ ಆಕೆಗೆ ಮುತ್ತು ನೀಡಿದ್ದಕ್ಕೆ ಆ ಪುರುಷನನ್ನು ಎಳೆದೊಯ್ದು, ಸುತ್ತಮುತ್ತಲಿನ ಹಲವಾರು ಜನರು ಥಳಿಸಿದ್ದಾರೆ. ಅಯೋಧ್ಯೆಯಲ್ಲಿ ಇಂತಹ ಅಸಭ್ಯತೆಯನ್ನು ಸಹಿಸುವುದಿಲ್ಲ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಆ ವೇಳೆ ಆತನ ಹೆಂಡತಿ ತಡೆಯಲು ಬಂದರೂ ಜನರು ಅವರಿಬ್ಬರಿಗೂ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.

ಇದನ್ನೂ ಓದಿ
Image
Viral Video: ಚಾಕೊಲೇಟ್‌ನಿಂದ ತಯಾರಿಸಿದ ಡಾರ್ಟ್‌ಬೋರ್ಡ್‌! ಇಲ್ಲಿದೆ ನೋಡಿ ವಿಡಿಯೋ
Image
Viral Video: ಸ್ಕೂಟಿಯಲ್ಲಿ ಕೂರಲೂ ಜಾಗವಿಲ್ಲದಷ್ಟು ಸಾಮಾನು ತುಂಬಿಕೊಂಡು ಹೊರಟ ಯುವಕ; ವಿಡಿಯೋ ನೋಡಿದ ಪೊಲೀಸರು ಮಾಡಿದ್ದೇನು?
Image
Viral Video: ಮಿಲಿಟರಿ ಡ್ರೆಸ್ ತೊಟ್ಟು ಮದುವೆಯಾದ ವಧು-ವರರು; ವೈರಲ್ ಆಯ್ತು ವಿಡಿಯೋ
Image
Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ

ಹೆಂಡತಿ ತನ್ನ ಗಂಡನನ್ನು ರಕ್ಷಿಸಲು ಪ್ರಯತ್ನಿಸಿ, ವಿಫಲಳಾಗಿದ್ದಾಳೆ. ಕೊನೆಗೆ ಆ ದಂಪತಿಯನ್ನು ಅಲ್ಲಿದ್ದ ಜನರು ನದಿಯಿಂದ ಹೊರಗೆ ಹೋಗಲು ಸೂಚಿಸಿದರು. ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಯೋಧ್ಯಾ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಕಣ್ಣಿಗೆ ಕಚ್ಚಿದ ಇಲಿ; ಆಮೇಲೇನಾಯ್ತು?

ಪ್ರಭಾರಿ ಇನ್ಸ್‌ಪೆಕ್ಟರ್ ಕೊತ್ವಾಲಿ ಅಯೋಧ್ಯೆಗೆ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅಯೋಧ್ಯೆ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸರಯೂ ಗಂಗೆಯ ಏಳು ಉಪನದಿಗಳಲ್ಲಿ ಒಂದಾಗಿದೆ. ಇದನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯು ಸರಯೂ ನದಿಯ ದಡದಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Thu, 23 June 22