AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೆಂಕಿ ಹೊತ್ತಿಕೊಂಡ ಬಸ್ ಕೆಳಗೆ ಬಿದ್ದು ಬೈಕ್ ಸವಾರ ಸಜೀವ ದಹನ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

Shocking Video: ಬೆಂಕಿ ಹೊತ್ತಿಕೊಂಡ ಬಸ್ ಕೆಳಗೆ ಬಿದ್ದು ಬೈಕ್ ಸವಾರ ಸಜೀವ ದಹನ; ದಿಕ್ಕಾಪಾಲಾಗಿ ಓಡಿದ ಪೊಲೀಸರು
ಬೆಂಕಿ ಹೊತ್ತಿಕೊಂಡಿರುವ ಬಸ್
TV9 Web
| Edited By: |

Updated on:Oct 12, 2022 | 9:57 AM

Share

ಪಾಟ್ನಾ: ಬಿಹಾರದ ಚಾಪ್ರಾ-ಸಿವಾನ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ಬಿಹಾರ ಪೊಲೀಸ್ (Bihar Police) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಈ ಅಪಘಾತದ (Accident) ನಂತರ ಬಸ್​ನ ಇಂಧನದ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಸ್​ಗೆ ಬೆಂಕಿ (Fire Accident) ಹೊತ್ತಿಕೊಂಡಿತು. ಆ ಬಸ್​ನ ಕೆಳಗೆ ಬಿದ್ದ ಓರ್ವ ಬೈಕ್ ಸವಾರನ ಮೈಗೂ ಬೆಂಕಿ ಹೊತ್ತಿಕೊಂಡು ಆತ ಸುಟ್ಟು ಕರಕಲಾಗಿದ್ದಾನೆ. ಇನ್ನಿಬ್ಬರು ಸವಾರರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ ಸವಾರರೊಬ್ಬರು ತಮ್ಮ ಬೈಕ್‌ ಸಹಿತ ಬಸ್‌ನಡಿ ಸಿಲುಕಿ 100 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೈಕ್‌ ಸವಾರ ಸಜೀವ ದಹನಗೊಂಡಿದ್ದಾನೆ.

ಇದನ್ನೂ ಓದಿ: Crime News: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ ಕೊಂದ ಯುವಕ!

ಅಪಘಾತದ ನಂತರ ಬಸ್ ಬೆಂಕಿಗೆ ಆಹುತಿಯಾಗಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಅಧಿಕಾರಿಗಳು ಬಸ್‌ನಿಂದ ಇಳಿದು ಓಡಿಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸಿತಾಬ್ದಿಯಾರಾದಲ್ಲಿ ರಾಜಕೀಯ ನಾಯಕ ದಿವಂಗತ ಜಯಪ್ರಕಾಶ್ ನಾರಾಯಣ್ ಅವರ 120ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಪೊಲೀಸರನ್ನು ಹೊತ್ತು ಬಸ್ ಹಿಂತಿರುಗುತ್ತಿತ್ತು. ಆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಪೊಲೀಸ್ ಬಸ್ ಅಪಘಾತಕ್ಕೀಡಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 am, Wed, 12 October 22

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ