Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಾಕಷ್ಟು ಹಣ ಹಂಚಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ಇದರಿಂದ ಕೋಪಗೊಂಡ ಅವರು ತನಗೆ ಮತ ಹಾಕದ ಅನಿಲ್ ಕುಮಾರ್ ಮತ್ತು ಮಂಜೀತ್ ಕುಮಾರ್​ಗೆ ರಸ್ತೆಯಲ್ಲೇ ಬಸ್ಕಿ ಹೊಡೆಸಿ, ತಾವು ಉಗುಳಿದ ಎಂಜಲನ್ನು ನೆಕ್ಕಿಸಿದ್ದಾರೆ.

Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಯುವಕರಿಂದ ಎಂಜಲು ನೆಕ್ಕಿಸಿದ ಚುನಾವಣಾ ಅಭ್ಯರ್ಥಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 13, 2021 | 2:09 PM

ಪಾಟ್ನಾ: ಬಿಹಾರದ ಔರಂಗಾಬಾದ್‌ನ ಕುಟುಂಬ ಬ್ಲಾಕ್‌ನ ಸಿಂಘನಾ ಗ್ರಾಮದ ಮುಖ್ಯಸ್ಥರ ಚುನಾವಣೆಗೆ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸದ ಕಾರಣಕ್ಕೆ ಇಬ್ಬರು ಯುವಕರನ್ನು ನಿರ್ದಯವಾಗಿ ಥಳಿಸಿರುವ ಹೀನಾಯ ಘಟನೆ ನಡೆದಿದೆ. ಇಲ್ಲಿನ ಪ್ರಮುಖ ಅಭ್ಯರ್ಥಿಯಾದ ಬಲವಂತ್ ಸಿಂಗ್ ಇಬ್ಬರು ತನಗೆ ಮತ ಹಾಕಲು ನಿರಾಕರಿಸಿದ್ದರಿಂದ ಕೋಪಗೊಂಡು ರಸ್ತೆಗೆ ಉಗುಳಿದ್ದಾರೆ. ಅಲ್ಲದೆ, ಆ ಇಬ್ಬರಲ್ಲಿ ಒಬ್ಬನ ಬಳಿ ತಾವು ಉಗುಳಿದ್ದನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ. ಹಾಗೇ, ನಡು ರಸ್ತೆಯಲ್ಲಿ ಅವರಿಬ್ಬರ ಬಳಿ ಬಸ್ಕಿ ಹೊಡೆಸಿದ್ದಾರೆ.

ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಾಕಷ್ಟು ಹಣ ಹಂಚಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ಇದರಿಂದ ಕೋಪಗೊಂಡ ಅವರು ತನಗೆ ಮತ ಹಾಕದ ಅನಿಲ್ ಕುಮಾರ್ ಮತ್ತು ಮಂಜೀತ್ ಕುಮಾರ್​ಗೆ ರಸ್ತೆಯಲ್ಲೇ ಬಸ್ಕಿ ಹೊಡೆಸಿದ್ದಾರೆ. ಅಲ್ಲದೆ, ರಸ್ತೆಯಲ್ಲಿ ಕಫವನ್ನು ಉಗುಳಿ ಅದನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಅಗಿದ್ದು, ಆ ರಾಜಕಾರಣಿಯ ಅಮಾನವೀಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ನಡೆದಿರುವುದು ಔರಂಗಾಬಾದ್ ಜಿಲ್ಲೆಯಲ್ಲಿ. ಇಲ್ಲಿನ ಪ್ರಮುಖ ಅಭ್ಯರ್ಥಿಯಾಗಿದ್ದ ಬಲವಂತ್ ಸಿಂಗ್ ಚುನಾವಣೆಯಲ್ಲಿ ಸೋತಿದ್ದರು. ಅವರ ಎದುರು ಅನಿಲ್ ಕುಮಾರ್ ಹಾಗೂ ಮಂಜೀತ್ ಗೇಲಿ ಮಾಡಿದ್ದರಿಂದ ತನಗೆ ಮತ ಹಾಕದ ಕಾರಣಕ್ಕೆ ಅವರಿಬ್ಬರಿಗೂ ಶಿಕ್ಷೆ ಕೊಟ್ಟಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾಹಿತಿ ಪಡೆದು ಔರಂಗಾಬಾದ್ ಎಸ್​ಪಿ ಕಾಂತೇಶ್ ಕುಮಾರ್ ಮಿಶ್ರಾ ಸೂಚನೆ ಮೇರೆಗೆ ಅಂಬಾ ಪೊಲೀಸರು ಬಲ್ವಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ವಿಡಿಯೋದಲ್ಲಿರುವ ಆ ಇಬ್ಬರು ಯುವಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬಲವಂತ್ ಸಿಂಗ್ ಗ್ರಾಮಾಂತರ ಚುನಾವಣೆಗೆ ಅಭ್ಯರ್ಥಿಯಾಗಿದ್ದರು. ಅವರ ವಿರುದ್ಧ ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಎಸ್ಪಿ ಕಾಂತೇಶ್ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಮೊಸರು ತರಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕ ಅಮಾನತು!

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ