Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಗಂಡನ ಕಿಡ್ನಿ ಮಾರಿ ಹಣದೊಂದಿಗೆ ಪ್ರಿಯಕರನ ಜೊತೆ ಪರಾರಿಯಾದ ಹೆಂಡ್ತಿ

10 ಲಕ್ಷ ರೂ.ಗೆ ತನ್ನ ಗಂಡನ ಒಂದು ಕಿಡ್ನಿಯನ್ನು ಮಾರಾಟ ಮಾಡಿ, ಹಣ ಕೈಗೆ ಸಿಗುತ್ತಿದ್ದಂತೆ ತನ್ನ ಪ್ರಿಯಕರನೊಂದಿಗೆ ಮಹಿಳೆಯೊಬ್ಬಳು ರಾತ್ರೋರಾತ್ರಿ ಪರಾರಿಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಪತ್ನಿಯ ಮೋಸದಾಟದಿಂದ ಮನನೊಂದ ಗಂಡ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

West Bengal: ಗಂಡನ ಕಿಡ್ನಿ ಮಾರಿ ಹಣದೊಂದಿಗೆ ಪ್ರಿಯಕರನ ಜೊತೆ ಪರಾರಿಯಾದ ಹೆಂಡ್ತಿ
Woman Sells Husband's Kidney, Runs Away With Lover
Follow us
ಅಕ್ಷತಾ ವರ್ಕಾಡಿ
|

Updated on: Feb 02, 2025 | 4:09 PM

ಪಶ್ಚಿಮ ಬಂಗಾಳ: ಹಣಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂಬುದಕ್ಕೆ ಉತ್ತಮ ನಿದರ್ಶನವೆಂಬ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಾನ್‌ಕ್ರಿಲ್‌ನಲ್ಲಿ ನಡೆದಿದೆ. ಬರೋಬ್ಬರಿ 10 ಲಕ್ಷಕ್ಕೆ ಗಂಡನ ಒಂದು ಕಿಡ್ನಿಯನ್ನು ಮಾರಾಟ ಮಾಡಿದ್ದ ಮಹಿಳೆ ಹಣ ಕೈಗೆ ಸಿಗುತ್ತಿದ್ದಂತೆ ತನ್ನ ಪ್ರಿಯಕರನೊಂದಿಗೆ ರಾತ್ರೋರಾತ್ರಿ ಪರಾರಿಯಾಗಿದ್ದಾಳೆ. ಪತ್ನಿಯ ಮೋಸದಾಟದಿಂದ ಮನನೊಂದ ಗಂಡ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಚಾನ್‌ಕ್ರಿಲ್‌ನಲ್ಲಿ ವರ್ಣಚಿತ್ರಕಾರನಾಗಿ ಕೆಲಸ ಮಾಡುತ್ತಿದ್ದ ಈತನಿಗೆ ಆತನ ಪತ್ನಿ ಕಿಡ್ನಿ ಮಾರಾಟ ಮಾಡುವಂತೆ ಪತ್ನಿ ನಿರಂತರವಾಗಿ ಒತ್ತಡ ಹೇರುತ್ತಿದ್ದಳು. ಮಗಳ ವಿದ್ಯಾಭ್ಯಾಸಕ್ಕೆ ಆದಾಯ ಸಾಕಾಗುತ್ತಿಲ್ಲ ಎಂಬ ಕಾರಣ ಹೇಳಿ ಕಿಡ್ನಿ ಮಾರುವಂತೆ ಪ್ರತಿದಿನ ಗಂಡನಿಗೆ ಹಿಂಸೆ ಕೊಡುತ್ತಿದ್ದಳು. ಕೊನೆಗೆ ಮಗಳ ಭವಿಷ್ಯದ ಬಗ್ಗೆ ಯೋಚಿಸಿ ಕಿಡ್ನಿ ಮಾರಲು ಪತ್ನಿ ಒಪ್ಪಿಕೊಂಡಿದ್ದಾನೆ.

ಒಂದು ತಿಂಗಳ ನಂತರ, ಒಂದು ಮೂತ್ರಪಿಂಡವನ್ನು 10 ಲಕ್ಷ ರೂ. ಗೆ ಮಾರಾಟ ಮಾಡಲಾಗಿದೆ. ಹಣ ಕೈ ಸೇರುತ್ತಿದ್ದಂತೆ ನಾಟಕವಾಡಿ ಕಿಲಾಡಿ ಹೆಂಡತಿ ಈ ಹಣವನ್ನು ಬೆಳಿಗ್ಗೆ ಬ್ಯಾಂಕಿಗೆ ಜಮಾ ಮಾಡುತ್ತೇನೆ ಎಂದು ಹೇಳಿ ತನ್ನ ಬಳಿ ಇರಿಸಿಕೊಂಡಿದ್ದಾಳೆ. ಬಳಿಕ ನಡು ರಾತ್ರಿ ಹಣದೊಂದಿ ಮನೆಬಿಟ್ಟು ಪ್ರಿಯಕರನ ಜೊತೆ ಓಡಿ ಹೋಗಿದ್ದಾಳೆ.

ಮತ್ತಷ್ಟು ಓದಿ: ಕುಡುಕ ಗಂಡಂದಿರ ಕಾಟ ತಾಳಲಾರದೆ ಮನೆ ಬಿಟ್ಟು ಪರಸ್ಪರ ಮದುವೆಯಾದ ಇಬ್ಬರು ಮಹಿಳೆಯರು!

ಕೆಲವು ದಿನಗಳ ನಂತರ ಶುಕ್ರವಾರ, ತನ್ನ ಪತ್ನಿ ರವಿದಾಸ್ ಎಂಬ ವ್ಯಕ್ತಿಯೊಂದಿಗೆ ಬಾರೇಕ್‌ಪುರದ ಸುಭಾಷ್ ಕಾಲೋನಿಯಲ್ಲಿ ವಾಸಿಸುತ್ತಿರುವುದನ್ನು ತಿಳಿದ ಪತಿ ತಮ್ಮ ಕುಟುಂಬದೊಂದಿಗೆ ಅಲ್ಲಿಗೆ ಹೋಗಿದ್ದಾನೆ. ಆದರೆ ನಿನಗೆ ವಿಚ್ಛೇದನ ಪತ್ರಗಳನ್ನು ಕಳುಹಿಸಿ ಕೊಡುವುದಾಗಿ ಗಂಡನಿಗೆ ಬೆದರಿಕೆ ಹಾಕಿ ಕಳುಹಿಸಿದ್ದಾಳೆ. ಇದೀಗ ಪತಿ ಪತ್ನಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಂದೇನಾಗುತ್ತದೆ ಎಂಬುದು ಪೊಲೀಸರ ತನಿಖೆಯ ನಂತರವಷ್ಟೇ ತಿಳಿಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!