ಅಲಿಗಢ ಮುಸ್ಲಿಂ ವಿವಿ ಕ್ಯಾಂಪಸ್​ ಒಳಗೆ ಇಬ್ಬರ ಮೇಲೆ ಗುಂಡಿನ ದಾಳಿ

|

Updated on: Jul 25, 2024 | 10:31 AM

ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ದಾಳಿಕೋರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಲಿಗಢ ಮುಸ್ಲಿಂ ವಿವಿ ಕ್ಯಾಂಪಸ್​ ಒಳಗೆ ಇಬ್ಬರ ಮೇಲೆ ಗುಂಡಿನ ದಾಳಿ
ಅಲಿಗಢ ಮುಸ್ಲಿಂ ಯೂನಿವರ್ಸಿಟಿ
Follow us on

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಕ್ಯಾಂಪಸ್​ನಲ್ಲಿ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ.

ಗಾಯಗೊಂಡ ಮೊಹಮ್ಮದ್ ನದೀಮ್ ಮತ್ತು ಕಲೀಂ ಸಹೋದರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಇಬ್ಬರೂ ಯೂನಿವರ್ಸಿಟಿ ಕ್ಯಾಂಪಸ್‌ನೊಳಗೆ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಮತ್ತೊಂದು ಬೈಕ್‌ನಲ್ಲಿ ಬಂದ ಇಬ್ಬರು ದಾಳಿಕೋರರು ನಿಲ್ಲಿಸಿ ಅವರತ್ತ ಗುಂಡು ಹಾರಿಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುಂಡಿನ ದಾಳಿಯ ನಂತರ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಅವರನ್ನು ಬೆನ್ನಟ್ಟಿದ ನಂತರ ಪೊಲೀಸರು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕ್ಯಾಂಪಸ್ ಒಳಗೆ ನಾಲ್ಕೈದು ಸುತ್ತಿನ ಗುಂಡಿನ ದಾಳಿ ನಡೆದಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಆರಂಭಿಕ ತನಿಖೆಗಳ ಆಧಾರದ ಮೇಲೆ ದಾಳಿಯ ಹಿಂದೆ ಹಳೆಯ ದ್ವೇಷ ಇತ್ತು ಎಂದು ನಂಬಲಾಗಿದೆ.
ನದೀಮ್ ಅವರ ಪತ್ನಿ ಪ್ರಕಾರ, ದಾಳಿಕೋರರು ಕ್ರಿಮಿನಲ್ ಗ್ಯಾಂಗ್‌ಗೆ ಸೇರಿದವರು ಮತ್ತು ಅವರ 13 ವರ್ಷದ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ, ಅವರ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗುವುದು ಎಂದಿದ್ದಾರೆ.

ದಾಳಿಕೋರರನ್ನು ಬಂಧಿಸಲಾಗಿದ್ದು, ಅಧಿಕಾರಿಗಳು ಸ್ಥಳದಲ್ಲಿನ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ಜೈನ್ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ