ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌(Shopian)ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಮಂಗಳವಾರ ಮುಂಜಾನೆ ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೈಬಾದ (ಎಲ್‌ಇಟಿ)ದವರು ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಉಗ್ರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಲಷ್ಕರ್  ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
Image Credit source: India Today
Follow us
|

Updated on:Oct 10, 2023 | 8:21 AM

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌(Shopian)ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಮಂಗಳವಾರ ಮುಂಜಾನೆ ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ದವರು ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಉಗ್ರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ  ಹತ್ಯೆಯ ನಂತರ ಪುಲ್ವಾಮಾದಲ್ಲಿ ಭಾರಿ ಕಟ್ಟೆಚ್ಚರಿಕೆಯನ್ನು ಮಾಡಲಾಗಿದೆ. ಈ ಕಾರಣಕ್ಕೆ ಭದ್ರತಾ ಪಡೆಗಳು ಪುಲ್ವಾಮಾದ ಕೆಲವು ಭಾಗದಲ್ಲಿ ಸೇನಾ ಉಪಕರಣಗಳನ್ನು ಅಳವಡಿಸಲಾಗಿದೆ. ಸೇನೆಯು ಬುಲೆಟ್ ಪ್ರೂಫ್ ವಾಹನಗಳು, ವಾಲ್-ಥ್ರೂ ರಾಡಾರ್‌ಗಳು ಮತ್ತು ಡ್ರೋನ್‌ಗಳನ್ನು ಬಳಸಲಾಗುತ್ತಿದೆ.

ಮತ್ತಷ್ಟು ಓದಿ: High Tech Security Pulwama: ಸಂಜಯ್ ಶರ್ಮಾ ಹತ್ಯೆ ನಂತರ ಪುಲ್ವಾಮಾದಲ್ಲಿ ಹೈಟೆಕ್ ಭದ್ರತಾ ಉಪಕರಣಗಳ ಬಳಕೆ

ಕಾಶ್ಮೀರದಲ್ಲಿ ಬಂಡಾಯ ನಿಗ್ರಹ ಕಾರ್ಯಾಚರಣೆಗೆ ಸಿಆರ್‌ಪಿಎಫ್ ಸೇರ್ಪಡೆಗೊಂಡಿರುವ ಕೆಲವು ಹೊಸ ಗ್ಯಾಜೆಟ್‌ಗಳಾಗಿವೆ, ಇದು ಭಯೋತ್ಪಾದಕರ ವಿರುದ್ಧ ನಿಖರ ಕ್ರಮಗಳನ್ನು ತೆಗೆದುಕೊಳ್ಳಲು ಸಹಾಯವನ್ನು ಮಾಡುತ್ತದೆ.

ಬ್ಯಾಂಕ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರ ಹತ್ಯೆ ನಂತರದ ಭಾಗವಾಗಿ, ಟಿಆರ್‌ಎಫ್‌ನ ಎರಡು ಉಗ್ರರ ವಿರುದ್ಧ ಪುಲ್ವಾಮಾದಲ್ಲಿ ಮಂಗಳವಾರ ನಡೆದ ಕಾರ್ಯಾಚರಣೆಗಾಗಿ ಈ ಹೈಟೆಕ್ ಉಪಕರಣಗಳನ್ನು ಬಳಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:20 am, Tue, 10 October 23