ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ ಎಂದ ತಾಯಿ

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು.

ಮೊಬೈಲ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಮುಸ್ಲಿಂ ಹುಡುಗರು ಅರೆಸ್ಟ್​; ಅವರಿಗೇನೂ ಗೊತ್ತಿಲ್ಲ ಬಿಟ್ಬಿಡಿ  ಎಂದ ತಾಯಿ
ಪಾಕಿಸ್ತಾನ್​ ಜಿಂದಾಬಾದ್​ ಸ್ಲೋಗನ್​ ಹಾಕಿದವ
Follow us
TV9 Web
| Updated By: Lakshmi Hegde

Updated on:Apr 16, 2022 | 8:24 AM

ಉತ್ತರ ಪ್ರದೇಶದ ಬರೇಲಿಯಲ್ಲಿ ಅಂಗಡಿಯೊಂದರಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ನಡೆದದ್ದು ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್​ ವ್ಯಾಪ್ತಿಯಲ್ಲಿರುವ ಸಿಂಘೈ ಕಲನ್​ ಎಂಬ ಹಳ್ಳಿಯಲ್ಲಿ. ಅಲ್ಲಿ ಕಿರಾಣಿ ಅಂಗಡಿ ಇಟ್ಟಿರುವ ಮುಸ್ಲಿಂ ಯುವಕ ಮೊಬೈಲ್​​ನಲ್ಲಿ ಹಾಡೊಂದನ್ನು ಹಾಕಿಕೊಂಡಿದ್ದಾನೆ. ಅದರಲ್ಲಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೇಳುತ್ತದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬರೇಲಿ ಎಸ್​ಪಿ ರಾಜ್​ಕುಮಾರ್​ ತಿಳಿಸಿದ್ದಾರೆ. 

ಇನ್ನು ಅಂಗಡಿಯ ಮಾಲೀಕ ಒಬ್ಬ ಯುವಕನಾಗಿದ್ದು, ಆತನ ತಾಯಿ ಪ್ರತಿಕ್ರಿಯೆ ನೀಡಿ, ಅವರು ಮೊಬೈಲ್​​ನಲ್ಲಿ ಪಾಕಿಸ್ತಾನ್​ ಜಿಂದಾಬಾದ್​ ಹಾಡು ಹಾಕಿದ್ದರ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದಿದ್ದಾರೆ. ಆದರೆ ನನ್ನ ಕಿರಿಯ ಮಗ ಯಾವಾಗಲೂ ಮೊಬೈಲ್​​ನಲ್ಲಿ ಧಾರ್ಮಿಕ ಗೀತೆಗಳನ್ನು ಕೇಳುತ್ತಿರುತ್ತಾನೆ. ಇಂಥ ಘೋಷಣೆ ಇದ್ದಿದ್ದು ಅವನಿಗೂ ಗೊತ್ತಿರುವುದಿಲ್ಲ. ಯಾಕೆಂದರೆ ಈ ಹಿಂದೆ ಎಂದಿಗೂ ಇಂಥ ಹಾಡುಗಳನ್ನು ಅವನು ಹಾಕಿಲ್ಲ. ಮೇಲಾಗಿ ನನ್ನ ಮಗ ವಿದ್ಯಾವಂತನಲ್ಲ. ದಯವಿಟ್ಟು ಆತನನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳುತ್ತಿರುವುದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ನೊಯ್ಡಾದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಮೂವರು ಮುಸ್ಲಿಂ ವ್ಯಕ್ತಿಗಳು ಪಾಕಿಸ್ತಾನ ಜಿಂದಾಬಾದ್​  ಎಂದು ಘೋಷಣೆ ಕೂಗಿ ಅರೆಸ್ಟ್​ ಆಗಿದ್ದರು. ಅದೂ ಕೂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಂಧಿಸಲಾಗಿತ್ತು. ಬಂಧಿತರಾದ ಮೊಹಮ್ಮದ್​ ಜಾಫರ್​, ಸಮೀರ್​ ಅಲಿ, ಅಲಿ ರಾಜಾ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ:   ಉಕ್ರೇನ್ ಪೊಲೀಸ್ ಮುಖ್ಯಸ್ಥರ ಪ್ರಕಾರ ಬುಚಾನಲ್ಲಿ ಬಲಿಯಾದವರ ಪೈಕಿ ಹೆಚ್ಚಿನವರನ್ನು ಗುಂಡಿಟ್ಟು ಕೊಲ್ಲಲಾಗಿದೆ

Published On - 8:23 am, Sat, 16 April 22

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ