ಲಸಿಕೆ ಪೂರೈಕೆಯಲ್ಲಿ ಮತ್ತೇ ವ್ಯತ್ಯಯ, ಬುಧವಾರ ಲಸಿಕೆ ಕಾರ್ಯಕ್ರಮ ನಿಲ್ಲಿಸವುದಾಗಿ ಹೇಳಿದ ಮುಂಬೈ ಮಹಾನಗಗರ ಪಾಲಿಕೆ

ಅತಿ ಹೆಚ್ಚು ಲಸಿಕೆ ಜನರನ್ನೊಳಗೊಂಡ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದರೂ ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಅನೇಕ ಜಿಲ್ಲೆಗಳಲ್ಲಿ ಲಸಿಕೆಯ ದಾಸ್ತಾನು ಕಡಿಮೆಯಾಗುತ್ತಿರುವುರಿಂದ ಲಸಿಕಾ ಕಾರ್ಯಕ್ರಮವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ವಿಧಾನ ಸಭೆಗೆ ತಿಳಿಸಿದ್ದರು.

ಲಸಿಕೆ ಪೂರೈಕೆಯಲ್ಲಿ ಮತ್ತೇ ವ್ಯತ್ಯಯ, ಬುಧವಾರ ಲಸಿಕೆ ಕಾರ್ಯಕ್ರಮ ನಿಲ್ಲಿಸವುದಾಗಿ ಹೇಳಿದ ಮುಂಬೈ ಮಹಾನಗಗರ ಪಾಲಿಕೆ
ಸಂಗ್ರಹ ಚಿತ್ರ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 20, 2021 | 11:00 PM

ಮುಂಬೈ:  ಲಸಿಕೆ ಪೂರೈಕೆ ಅಭಾವ ಮುಂಬೈಯಲ್ಲಿ ಮತ್ತೆ ತಲೆದೋರಿದೆ. ಗ್ರೇಟರ್ ಮುಂಬೈ ಪೌರಾಡಳಿತ ಸಂಸ್ಥೆಯು ಕೋವಿಡ್-19 ಲಸಿಕೆ ಲಭ್ಯವಿಲ್ಲದೆ ಕಾರಣ ಲಸಿಕೆ ನೀಡುವ ಕಾರ್ಯಕ್ರಮವನ್ನು ಬುಧವಾರದಂದು ಸ್ಥಗಿತಗೊಳಿಸಲಾಗದೆಯೆಂದು ಪ್ರಕಟನೆಯೊಂದರಲ್ಲಿ ತಿಳಿಸಿದೆ. ಈ ಕಾರಣಕ್ಕಾಗೇ, ಮಂಗಳವಾರದಂದು ಸರ್ಕಾರ ಮತ್ತು ಮಹಾನಗರ ಪಾಲಿಕೆಯಿಂದ ನಿರ್ವಹಿಸಲ್ಪಡುತ್ತಿರುವ ನಗರದ 309 ಲಸಿಕಾ ಕೇಂದ್ರಗಳಲ್ಲಿ ಕೇವಲ 58 ಮಾತ್ರ ಜನರಿಗೆ ಲಸಿಕೆ ನೀಡಿದವು. ಮಹಾರಾಷ್ಟ್ರದಲ್ಲಿ ಲಸಿಕೆ ಪಡೆದವರ ಸಂಖ್ಯೆ 4 ಕೋಟಿ ದಾಟಿದ ಮಾಹಿತಿ ಲಭ್ಯವಾದ ನಂತರ ಈ ಬೆಳವಣಿಗೆ ನಡೆದಿದೆ. ಲಸಿಕೆ ದಾಸ್ತಾನನ್ನು ಹೆಚ್ಚಿಸಿದ್ದರಿಂದ ಕೇವಲ ಒಂದು ತಿಂಗಳ ಅವಧಿಯಲ್ಲಿ ಈ ಸಾಧನೆ ಮಾಡಲಾಯಿತು ಎಂದು ರಾಜ್ಯ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಜೂನ್ 26ರಂದು ಮಹಾರಾಷ್ಟ್ರ ಮೂರು ಕೋಟಿ ಸಂಖ್ಯೆಯನ್ನು ದಾಟಿತ್ತು. ಹಾಗೆಯೇ, ಮೇ 13 ರಂದು 2 ಕೋಟಿ ಜನ ಲಸಿಕೆ ಪಡೆದಿದ್ದಾರೆಂದು ಸರ್ಕಾರ ಹೇಳಿತ್ತು.

ಹಾಗೆ ನೋಡಿದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಯಸ್ಕರಿಗೆಲ್ಲ ಲಸಿಕೆ ನೀಡುವ ಘೋಷಣೆಯನ್ನು ಮಾಡಿದ ನಂತರ ಮಹಾರಾಷ್ಟ್ರದಲ್ಲಿ ಲಸಿಕೆಯ ಅಭಾವ ಆಗಾಗ ತಲೆದೋರುತ್ತಲೇ ಇದೆ.

ಅತಿ ಹೆಚ್ಚು ಲಸಿಕೆ ಜನರನ್ನೊಳಗೊಂಡ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದರೂ ರಾಜ್ಯದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ಅನೇಕ ಜಿಲ್ಲೆಗಳಲ್ಲಿ ಲಸಿಕೆಯ ದಾಸ್ತಾನು ಕಡಿಮೆಯಾಗುತ್ತಿರುವುರಿಂದ ಲಸಿಕಾ ಕಾರ್ಯಕ್ರಮವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ವಿಧಾನ ಸಭೆಗೆ ತಿಳಿಸಿದ್ದರು.

ಕಳೆದ 24 ಗಂಟೆಗಳಲ್ಲಿ 351 ಹೊಸ ಕೋವಿಡ್​ ಪ್ರಕರಣಗಳು ಮುಂಬೈಯಲ್ಲಿ ವರದಿಯಾಗಿವೆ ಮತ್ತು 525 ಸೋಂಕಿತರು ಗುಣಮುಖ ಹೊಂದಿದ್ದಾರೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಶೇಕಡಾ 97 ರಷ್ಟಿದೆ. ದೇಶದ ಆರ್ಥಿಕ ರಾಜಧಾನಿ ಎಂದು ಕರೆಸಿಕೊಳ್ಳುವ ಮುಂಬೈಯಲ್ಲಿ ಪ್ರಸಕ್ತವಾಗಿ 6,161 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಗಾಜಿನ ಮನೆಯಲ್ಲಿರುವವರು ಕಲ್ಲು ಹೊಡೆಯಬಾರದು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪರಮ್​ಸಿಂಗ್​ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ